ಮಡಿಕೇರಿ, ಮಾ. ೧೦: ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದ ವ್ಯಾಪ್ತಿಗೆ ಬರುವ ಆನೆಚೌಕೂರು ವನ್ಯಜೀವಿ ವಲಯದ ಮತ್ತಿಗೋಡು ಶಾಖೆಯ ಮರಪಾಲ ಅರಣ್ಯ ರಕ್ಷಕರು ಮತ್ತು ಸಿಬ್ಬಂದಿಗಳು ಗಸ್ತು ಮಾಡುವಾಗ ಚೇಣಿಹಡ್ಲು ಹಾಡಿಯ ಹಿಂಭಾಗದ ಆನೆ ತಡೆ ಕಂದಕದಲ್ಲಿ ಹುಲಿಯು ಸಾವನ್ನಪ್ಪಿ ರುವುದು ಪತ್ತೆಯಾಗಿದೆ. ಸ್ಥಳಕ್ಕೆ ಉಪ ಅರಣ್ಯ ಸಂರಕ್ಷಣಾಧಿಕಾರಿಗಳು, ನಿದೆೆÃðಶಕರು, ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶ, ಹುಣಸೂರು ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಗಳು, ವನ್ಯಜೀವಿ ಉಪ ವಿಭಾಗ ಹುಣಸೂರು, ವಲಯ ಅರಣ್ಯಾಧಿಕಾರಿ ಗಳು ಹಾಗೂ ಸಿಬ್ಬಂದಿಗಳು ಸಂರಕ್ಷಣಾ ನಾಮ ನಿದೆÉÃರ್ಶನಗೊಂಡ ಬೋಸ್ ಮಾದಪ್ಪ, ಶÀರಿನ್ ಸುಬ್ಬಯ್ಯ, ಸ್ಥಳಕ್ಕೆ ಆಗಮಿಸಿ ಮಹಜರು ಕ್ರಮ ಜರುಗಿಸಲಾಗಿದೆ. ಇಲಾಖಾ ಪಶು ವೈದ್ಯಾಧಿಕಾರಿಗಳಾದ ಡಾ. ರಮೇಶ್ ಹಾಗೂ ಬಾಳೆಲೆ ಪಶುವೈದ್ಯಾಧಿಕಾರಿ ಡಾ. ಭವಿಷÀ್ಯಕುಮಾರ್ ಮರಣೋತ್ತರ ಪರೀಕ್ಷೆ ನಡೆಸಿ ಹೆಚ್ಚಿನ ಪರೀಕ್ಷೆಗಾಗಿ ಹುಲಿಯ ಮೃತ ದೇಹದ ಮಾದರಿಗಳನ್ನು ಸಂಗ್ರಹಿಸಿದರು. ಸ್ಥಳದಲ್ಲಿಯೇ ಹುಲಿಯ ಮೃತದೇಹವನ್ನು ಸುಡಲಾಯಿತು.