ಸೋಮವಾರಪೇಟೆ, ಮಾ. ೧೦: ಸೋಮವಾರಪೇಟೆ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ ಕೂಡಿಗೆ ಡಯಟ್ನ ಹಿರಿಯ ಉಪನ್ಯಾಸಕ ಕೆ.ವಿ. ಸುರೇಶ್ ಅವರು ಅಧಿಕಾರ ಸ್ವೀಕರಿಸಿದರು.
ಪ್ರಬಾರ ಬಿಇಓ ಆಗಿದ್ದ ಜಿ.ಎಂ. ಹೇಮಂತ್ ಅವರು ನೂತನ ಬಿಇಓ ಸುರೇಶ್ ಅವರಿಗೆ ಅಧಿಕಾರ ಹಸ್ತಾಂತರಿಸಿದರು. ಈ ಸಂದರ್ಭ ಮಾತನಾಡಿದ ಸುರೇಶ್, ತಾಲೂಕಿನಲ್ಲಿ ಶೈಕ್ಷಣಿಕ ಚಟುವಟಿಕೆಗಳ ಪ್ರಗತಿಗೆ ಎಲ್ಲರೂ ಸಹಕರಿಸುವಂತೆ ಮನವಿ ಮಾಡಿದರು.
ಈ ಸಂದರ್ಭ ಕೂಡಿಗೆ ಡಯಟ್ ಪ್ರಾಂಶುಪಾಲ ಜಿ. ರಂಗನಾಥಸ್ವಾಮಿ, ಜಿಲ್ಲೆ, ತಾಲೂಕು ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳು, ಡಯಟ್ ಉಪನ್ಯಾಸಕರು, ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.
ಸುರೇಶ್ ಅವರು ಈ ಹಿಂದೆ ಬಸವನಹಳ್ಳಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಪ್ರಾಂಶುಪಾಲರಾಗಿ, ಮಡಿಕೇರಿ ಡಿಡಿಪಿಐ ಕಚೇರಿಯಲ್ಲಿ ಶಿಕ್ಷಣಾಧಿಕಾರಿಯಾಗಿ, ಬಿಸಿಎಂ ಜಿಲ್ಲಾಧಿಕಾರಿಯಾಗಿ, ಅರಕಲಗೂಡು ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ ಸೇವೆ ಸಲ್ಲಿಸಿ, ಪ್ರಸ್ತುತ ಕೂಡಿಗೆಯ ಡಯಟ್ನಲ್ಲಿ ಹಿರಿಯ ಉಪನ್ಯಾಸಕರಾಗಿ ಸೇವೆ ಸಲ್ಲಿಸಿದ್ದಾರೆ.