ಬೆಂಗಳೂರು, ಮಾ. ೯: ಕಾಶ್ಮೀರದಲ್ಲಿ ಹಿಮಪಾತದಲ್ಲಿ ಮೃತಪಟ್ಟ ಕೊಡಗು ಜಿಲ್ಲೆ ವೀರಾಜಪೇಟೆ ಯೋಧ ಅಲ್ತಾಫ್ ಅಹಮ್ಮದ್ ಕುಟುಂಬಕ್ಕೆ ಆರ್ಥಿಕ ನೆರವು ಮತ್ತು ನಿವೇಶನ ನೀಡಬೇಕು ಎಂದು ಕಾಂಗ್ರೆಸ್ನ ಸಿ.ಎಂ. ಇಬ್ರಾಹಿಂ ಸರ್ಕಾರವನ್ನು ಆಗ್ರಹಿಸಿದರು.
ವಿಧಾನ ಪರಿಷತ್ನಲ್ಲಿ ಮಂಗಳವಾರ ಶೂನ್ಯ ವೇಳೆಯಲ್ಲಿ ವಿಷಯ ಪ್ರಸ್ತಾಪಿಸಿದ ಅವರು, ಅಲ್ತಾಫ್ ಕುಟುಂಬ ಆರ್ಥಿಕ ಸಂಕಷ್ಟದಲ್ಲಿದೆ. ತಾಯಿ, ಪತ್ನಿ, ಇಬ್ಬರು ಮಕ್ಕಳಿದ್ದಾರೆ. ಅವರಿಗೆ ನೆರವು ನೀಡಬೇಕು. ವಾಸಿಸಲು ಸರಿಯಾದ ಮನೆ ಇಲ್ಲ. ಒಂದು ನಿವೇಶನವನ್ನೂ ಕೊಡಬೇಕು ಎಂದು ಒತ್ತಾಯಿಸಿದರು. ದೇಶದ ಗಡಿ ಕಾಯುವ ಯೋಧರ ಬಗ್ಗೆ ನಮಗೆ ಗೌರವವಿದೆ. ಈ ವಿಚಾರದಲ್ಲಿ ಮುಖ್ಯಮಂತ್ರಿಯವರೇ ಉತ್ತರ ನೀಡುತ್ತಾರೆ ಎಂದು ಸಭಾನಾಯಕ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದರು.