ಪೊನ್ನಂಪೇಟೆ, ಮಾ. ೯: ಕೊಡಗು ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗಗಳ (ಓಬಿಸಿ) ವಿಭಾಗದ ನೂತನ ಅಧ್ಯಕ್ಷರಾಗಿ ಜಿ.ಪಂ. ಮಾಜಿ ಸದಸ್ಯ ಮತ್ತು ಬಾನಂಡ ಎನ್. ಪ್ರಥ್ಯು ಅವರು ನೇಮಕಗೊಂಡಿದ್ದಾರೆ.

ಡಿಸಿಸಿ ಅಧ್ಯಕ್ಷ ತೀತಿರ ಧರ್ಮಜ ಉತ್ತಪ್ಪ ಅವರ ಶಿಫಾರಸ್ಸಿನ ಮೇರೆಗೆ ಹಾಗೂ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ನಿರ್ದೇಶನದಂತೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಹಿಂದುಳಿದ ವರ್ಗಗಳ ವಿಭಾಗದ ಅಧ್ಯಕ್ಷರಾದ, ಮಾಜಿ ಶಾಸಕ ಎಂ.ಡಿ. ಲಕ್ಷಿö್ಮ ನಾರಾಯಣ (ಅಣ್ಣಯ್ಯ) ಅವರು ಪ್ರತ್ಯು ಅವರನ್ನು ಈ ಹುದ್ದೆಗೆ ನೇಮಕಗೊಳಿಸಿದ್ದಾರೆ.

ಮೂಲತಃ ಗೋಣಿಕೊಪ್ಪಲು ಸಮೀಪದ ಮಾಯಮುಡಿ ಗ್ರಾಮದವರಾದ ಬಾನಂಡ ಎನ್. ಪ್ರಥ್ಯು ಅವರು, ಈ ಹಿಂದೆ ಮಾಯಮುಡಿ ಯುವ ಕಾಂಗ್ರೆಸ್ ಘಟಕದ ಅಧ್ಯಕ್ಷರಾಗಿ, ಮಾಯಮುಡಿ ಗ್ರಾ.ಪಂ. ಸದಸ್ಯರಾಗಿ, ಮಾಯಮುಡಿ ಗ್ರಾ.ಪಂ. ಉಪಾಧ್ಯಕ್ಷರಾಗಿ, ತಿತಿಮತಿ ಕ್ಷೇತ್ರದ ಜಿ.ಪಂ. ಸದಸ್ಯರಾಗಿ ಸೇವೆ ಸಲ್ಲಿಸಿದ್ದಾರೆ.

ಅಖಿಲ ಕೊಡಗು ಅಮ್ಮ ಕೊಡವ ಸಮಾಜದ ಅಧ್ಯಕ್ಷರಾಗಿ ಕಳೆದ ೧೦ ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ಇವರು, ಮಾಯಮುಡಿ ಗ್ರಾಮದ ನಿವೃತ್ತ ಮುಖ್ಯೋಪಾಧ್ಯಾಯ ಬಾನಂಡ ಎ. ನಂಜಮಯ್ಯ ಮತ್ತು ಯಶೋಧ ದಂಪತಿಯ ಪುತ್ರ.