ಸೋಮವಾರಪೇಟೆ,ಮಾ.೧೦: ಸರ್ಕಾರಿ ಕೆರೆಗಳ ಒತ್ತುವರಿ ತೆರವು ಕಾರ್ಯಾಚರಣೆ ಮುಂದುವರೆದಿದ್ದು, ತಾಲೂಕಿನ ಶಾಂತಳ್ಳಿ ಹೋಬಳಿ ವ್ಯಾಪ್ತಿಗೆ ಒಳಪಡುವ ಚಿಕ್ಕತೋಳೂರು ಗ್ರಾಮದಲ್ಲಿ ಒತ್ತುವರಿಯಾಗಿದ್ದ ಕೆರೆ ಜಾಗವನ್ನು ಕಂದಾಯ ಇಲಾಖಾಧಿಕಾರಿಗಳು ತೆರವುಗೊಳಿಸಿದರು.
ಚಿಕ್ಕತೋಳೂರು ಗ್ರಾಮದ ಸರ್ವೆ ನಂ. ೪೦ರಲ್ಲಿರುವ ೪೦ ಸೆಂಟ್ ಸರ್ಕಾರಿ ಕೆರೆ ಜಾಗದ ಪೈಕಿ ೩ ಸೆಂಟ್ ಜಾಗವನ್ನು ಒತ್ತುವರಿ ಮಾಡಲಾಗಿತ್ತು. ಇದನ್ನು ತೆರವುಗೊಳಿಸುವ ಸಂಬAಧ ತಹಶೀಲ್ದಾರ್ ಆದೇಶ ಹೊರಡಿಸಿದ್ದು, ಕಂದಾಯ ಇಲಾಖಾ ಸಿಬ್ಬಂದಿಗಳು ಸ್ಥಳದ ಸರ್ವೆ ನಡೆಸಿ ಒತ್ತುವರಿ ತೆರವುಗೊಳಿಸಿದರು. ಕಾರ್ಯಾಚರಣೆಯಲ್ಲಿ ಉಪ ತಹಶೀಲ್ದಾರ್ ತುಕ್ರಪ್ಪ ಮೇರ, ಕಂದಾಯ ಪರಿವೀಕ್ಷಕ ಎ. ದಾಮೋಧರ್, ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ ಮಂಜುಳಾ, ತಾಲೂಕು ಭೂ ಮಾಪಕ ವೆಂಕಟೇಶ್, ಗ್ರಾಮ ಲೆಕ್ಕಾಧಿಕಾರಿ ತಳವಾರ ಕರಿಬಸವರಾಜ ಸೇರಿದಂತೆ ಇತರರು ಭಾಗವಹಿಸಿದ್ದರು.