ಮಡಿಕೇರಿ, ಮಾ. ೯ : ರಾಜ್ಯ ಸರ್ಕಾರದ ಮೂರು ಪ್ರಮುಖ ಕಾಯ್ದೆಯನ್ನು ಹಿಂಪಡೆಯುವAತೆ ಒತ್ತಾಯಿಸಿ ತಾ. ೧೫ರವರೆಗೆ ನಡೆಯಲಿರುವ ಜನಾಂದೋಲನಗಳ ಮಹಾಮೈತ್ರಿ ಜನಜಾಗೃತಿ ಜಾಥಾಕ್ಕೆ ಕೊಡಗಿನ ರೈತಪರ ಸಂಘಟನೆಗಳು ಸೇರಿದಂತೆ ವಿವಿಧ ಸಂಘಟನೆಗಳು ಬೆಂಬಲ ವ್ಯಕ್ತಪಡಿಸಲಿವೆೆ ಎಂದು ಕೊಡಗು ಜಿಲ್ಲಾ ಪ್ರಗತಿಪರ ಜನಾಂದೋಲನ ವೇದಿಕೆಯ ಸಂಚಾಲಕ ವಿ.ಪಿ.ಶಶಿಧರ್ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಕರ್ನಾಟಕ ಭೂಸುಧಾರಣಾ ತಿದ್ದುಪಡಿ ಕಾಯ್ದೆ ೨೦೨೦, ಕರ್ನಾಟಕ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಕಾಯ್ದೆ, ಕರ್ನಾಟಕ ಜಾನುವಾರು ಹತ್ಯೆ ನಿಷೇಧ ಮತ್ತು ಸಂರಕ್ಷಣಾ ಕಾಯ್ದೆಗಳಿಂದ ರೈತರಿಗೆ ತೊಂದರೆಯಾಗುತ್ತದೆ. ಆದ್ದರಿಂದ ಈ ಕಾಯ್ದೆಗಳನ್ನು ಹಿಂಪಡೆಯ ಬೇಕೆಂದು ಒತ್ತಾಯಿಸಿದರು.
ತಾ. ೧೩ ರಂದು ಮೈಸೂರಿನಲ್ಲಿ ನಡೆಯಲಿರುವ ಕಾರ್ಯಕ್ರಮಕ್ಕೆ ಕೊಡಗಿನಿಂದ ಪಾಲ್ಗೊಳ್ಳಲಿರುವ ವಿವಿಧ ಸಂಘಟನೆಯ ಕಾರ್ಯಕರ್ತರು ತಾ. ೧೫ ರಂದು ಬೆಂಗಳೂರಿನಲ್ಲಿ ನಡೆಯಲಿರುವ ಬೃಹತ್ ಸಮಾವೇಶದಲ್ಲೂ ಪಾಲ್ಗೊಳ್ಳಲಿದ್ದಾರೆ ಎಂದು ಅವರು ಮಾಹಿತಿ ನೀಡಿದರು.
ಸುದ್ದಿಗೋಷ್ಠಿಯಲ್ಲಿ ವೇದಿಕೆಯ ಜಿಲ್ಲಾ ಪ್ರಮುಖರಾದ ದೀರ್ಘಕೇಶಿ ಶಿವಣ್ಣ, ಕೆ.ಆರ್.ವಿದ್ಯಾಧರ, ತೆನ್ನಿರಾ ಮೈನಾ, ಅಬ್ದುಲ್ ರಜಾಕ್, ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಸಂಚಾಲಕ ಹೆಚ್.ಎಲ್. ದಿವಾಕರ್ ಉಪಸ್ಥಿತರಿದ್ದರು.