ಮಡಿಕೇರಿ, ಮಾ. ೯: ಶ್ರೀಮಂಗಲ ನಾಡ್ ಕೊಡವ ಸಮಾಜ ಪೊಮ್ಮಕ್ಕಡ ಪರಿಷತ್ ಆಶ್ರಯದಲ್ಲಿ ಮಹಿಳಾ ದಿನಾಚರಣೆ ಮತ್ತು ಪೊಮ್ಮಕ್ಕಡ ಪರಿಷತ್ನ ಎರಡನೇ ವರ್ಷದ ದಿನಾಚರಣೆ ಹಾಗೂ ಸಾಮಾನ್ಯ ಸಭೆ ಪರಿಷತ್ನ ಅಧ್ಯಕ್ಷೆ ಕಟ್ಟೇರ ಸುಶೀಲಾ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.
ದಾನಿಗಳಾದ ಕೈಬಿಲಿರ ಪಾರ್ವತಿ ಬೋಪಯ್ಯ ಅವರನ್ನು ಸಭೆಯಲ್ಲಿ ಸನ್ಮಾನಿಸಲಾಯಿತು. ಸನ್ಮಾನ ಸ್ವೀಕರಿಸಿ ಮಾತನಾಡಿದ ಪಾರ್ವತಿ ಬೋಪಯ್ಯ ಅವರು ಮಹಿಳಾ ದಿನಾಚರಣೆಯ ಮಹತ್ವವನ್ನು ವಿವರಿಸಿ, ಕೊಡವ ಸಂಸ್ಕೃತಿ ಪರಂಪರೆಯನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಪೊಮ್ಮಕ್ಕಡ ಕೂಟದ ಪಾತ್ರದ ವಿಶೇಷತೆಯನ್ನು ತಿಳಿಸಿಕೊಟ್ಟರು.
ಕಟ್ಟೇರ ಸುಶೀಲ ಅವರು ಮಾತನಾಡಿ, ಒಂದು ವರ್ಷದಲ್ಲಿ ಹಮ್ಮಿಕೊಂಡಿದ್ದ ಸಮಾಜಮುಖಿ ಕಾರ್ಯಕ್ರಮಗಳ ಬಗ್ಗೆ ವಿವರಿಸಿದರು. ಕೊಡವ ಯುವತಿಯರು ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಯಶಸ್ವಿಯಾಗಿ ಪೂರೈಸಿ ಆಡಳಿತಾತ್ಮಕ ವ್ಯವಸ್ಥೆಯಲ್ಲಿ ತಮ್ಮನ್ನು ತೊಡಗಿಸಿಕೊಂಡು ಸ್ತಿçà ಕುಲಕ್ಕೆ ಗೌರವ ಸಲ್ಲುವಂತಾಗಬೇಕು ಎಂದು ಕರೆ ನೀಡಿದರು. ಮಹಿಳಾ ದಿನದ ಅಂಗವಾಗಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳ ಲಾಯಿತು. ವಿಜೇತರಿಗೆ ಬಹುಮಾನ ಗಳನ್ನು ವಿತರಿಸಲಾಯಿತು.
ಕಾರ್ಯಕ್ರಮದಲ್ಲಿ ಕಾರ್ಯದರ್ಶಿ ಕಾಳಿಮಾಡ ಸೀಮ, ಖಜಾಂಚಿ ಕಟ್ಟೇರ ಡಾ. ಸಂಧ್ಯಾ ಪೂಣಚ್ಚ, ಜಂಟಿ ಕಾರ್ಯದರ್ಶಿ ಚೋನಿರ ಪವಿ, ಕಾನೂನು ಸಲಹೆಗಾರರಾದ ಪಾರುವಂಗಡ ರಿಶ್ತ ಹಾಗೂ ನಿರ್ದೇಶಕಿ ಮಚ್ಚಮಾಡ ನಂದಿತ ಮತ್ತಿತರರು ಪಾಲ್ಗೊಂಡಿದ್ದರು.