ಮಡಿಕೇರಿ, ಮಾ.೧೧: ಮೂರ್ನಾಡು ೩೩/೧೧ ಕೆ.ವಿ. ವಿದ್ಯುತ್ ಉಪ-ಕೇಂದ್ರದಿAದ ಹೊರಹೋಗುವ ನಾಪೋಕ್ಲು ಫೀಡರ್‌ಗಳಲ್ಲಿ ತುರ್ತು ನಿರ್ವಹಣೆ ಕಾರ್ಯ ನಡೆಸಬೇಕಿರುವುದರಿಂದ ತಾ. ೧೨ ರಂದು (ಇಂದು) ಬೆಳಗ್ಗೆ ೧೦ ರಿಂದ ಸಂಜೆ ೫ ಗಂಟೆವರೆಗೆ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಲಾಗುವುದು. ಆದ್ದರಿಂದ ನಾಪೋಕ್ಲು ಟೌನ್, ಬೇತು, ಹೊದವಾಡ, ಹಳೆ ತಾಲೂಕು, ಕಲ್ಲುಮೊಟ್ಟೆ, ಮೋಟೇರಿ, ಕೊಳಕೇರಿ ಮತ್ತು ಸುತ್ತಮುತ್ತ ವ್ಯಾಪ್ತಿಯ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಸೆಸ್ಕ್ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ತಿಳಿಸಿದ್ದಾರೆ.