ಮಡಿಕೇರಿ, ಮಾ. ೧೦: ಕರ್ನಾಟಕ ಸರ್ಕಾರದ ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಅಂರ‍್ರಾಷ್ಟಿçÃಯ ಮಹಿಳಾ ದಿನಾಚರಣೆ ಪ್ರಯುಕ್ತ ಮಹಿಳಾ ಅಭಿವೃದ್ಧಿ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿರುವ ಸಂಸ್ಥೆಗೆ ನೀಡುವ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿಯನ್ನು ೨೦೨೧-೨೨ನೇ ಸಾಲಿಗೆ ಕೊಡಗು ಜಿಲ್ಲೆಯ ಸುಂಟಿಕೊಪ್ಪದ ಕೂರ್ಗ್ ಫೌಂಡೇಶನ್ - ಸ್ವಸ್ಥ, ವಿಶೇಷ ಶಿಕ್ಷಣ ಮತ್ತು ಪುನರ್ವಸತಿ ಕೇಂದ್ರದ ಸಂಸ್ಥೆಗೆ ನೀಡಲಾಗಿದೆ. ವಿಶೇಷಚೇತನ ಮಹಿಳೆಯರಿಗೆ ಸಂಸ್ಥೆಯಲ್ಲಿ ವೃತ್ತಿಪರ ತರಬೇತಿಗಳ ಮೂಲಕ ಸಮಾಜದ ಮುಖ್ಯವಾಹಿನಿಗೆ ತರುವಲ್ಲಿ ಶ್ರಮಿಸುತ್ತಿರುವುದು ವಿಶೇಷಚೇತನ ಮಹಿಳೆಯರಿಗೆ ಉದ್ಯೋಗವನ್ನು ಕಲ್ಪಿಸುತ್ತಿರುವುದರೊಂದಿಗೆ ಸಾಕಷ್ಟು ವಿಶೇಷಚೇತನ ಮಹಿಳೆಯನ್ನು ಸಮಾಜದ ಮುಖ್ಯವಾಹಿನಿಗೆ ತರುತ್ತಿರುವ ಈ ಸಂಸ್ಥೆಯ ಮಹಿಳಾ ಪರ ಸೇವೆಗಳನ್ನು ಗುರುತಿಸಿ ಕರ್ನಾಟಕ ಸರ್ಕಾರವು ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಮೂಲಕ ಸ್ವಸ್ಥ ಸಂಸ್ಥೆಯ ನಿರ್ದೇಶಕಿ ಆರತಿ ಸೋಮಯ್ಯ ಅವರಿಗೆ ನೀಡಿ ಸನ್ಮಾನಿಸಿ ಗೌರವಿಸಿದೆ.