ಸೋಮವಾರಪೇಟೆ,ಮಾ.೧೧: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಯಾದ ಕಂದಾಯ ದಾಖಲೆ ಮನೆ ಬಾಗಿಲಿಗೆ ಕಾರ್ಯಕ್ರಮ ತಾ. ೧೨ರಂದು (ಇಂದು) ತಾಲೂಕಿನ ಕುಂಬೂರು ಗ್ರಾಮದಲ್ಲಿ ನಡೆಯಲಿದೆ ಎಂದು ತಾಲೂಕು ತಹಶೀಲ್ದಾರ್ ಗೋವಿಂದರಾಜು ತಿಳಿಸಿದ್ದಾರೆ.

ಬೆಳಿಗ್ಗೆ ೯ ಗಂಟೆಗೆ ಕುಂಬೂರು ಗ್ರಾಮದಲ್ಲಿ ಶಾಸಕ ಎಂ.ಪಿ. ಅಪ್ಪಚ್ಚುರಂಜನ್ ಅವರು ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದು, ರೈತರಿಗೆ ಮೂಲ ದಾಖಲೆಗಳನ್ನು ವಿತರಣೆ ಮಾಡಲಿದ್ದಾರೆ. ಸಾರ್ವಜನಿಕರು ಕಾರ್ಯಕ್ರಮದ ಸದುಪಯೋಗ ಪಡೆಯಬೇಕೆಂದು ತಹಶೀಲ್ದಾರ್ ಮನವಿ ಮಾಡಿದ್ದಾರೆ.