ಕೂಡಿಗೆ, ಮಾ. ೧೩ : ಇಲ್ಲಿಗೆ ಸಮೀಪದ ಹೆಬ್ಬಾಲೆ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ವರ್ಗಾವಣೆಯಾಗಿ ಎರಡು ತಿಂಗಳು ಕಳೆದರೂ ಸಹ ನೂತನ ಅಭಿವೃದ್ಧಿ ಅಧಿಕಾರಿಯ ನೇಮಕವಾಗದೆ ಗ್ರಾಮದ ಅಭಿವೃದ್ಧಿ ಕೆಲಸಗಳು ಸ್ಥಗಿತಗೊಂಡಿವೆ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಹೆಬ್ಬಾಲೆ ಗ್ರಾಮ ಪಂಚಾಯಿತಿಯು ೬ ಉಪ ಗ್ರಾಮಗಳನ್ನು ಹೊಂದಿದ್ದು, ಹೆಚ್ಚು ಜನಸಂಖ್ಯೆಯು ಇದ್ದು, ೧೪ ಗ್ರಾಮ ಪಂಚಾಯಿತಿ ಸದಸ್ಯರನ್ನು ಹೊಂದಿದೆ. ಈ ಗ್ರಾಮ ಪಂಚಾಯಿತಿಗೆ ಅಭಿವೃದ್ಧಿ ಅಧಿಕಾರಿಗಳ ಜೊತೆಗೆ ಕಾರ್ಯದರ್ಶಿಯ ನೇಮಕವೂ ನಡೆದಿಲ್ಲ.
ಒಂದು ವಾರದ ಒಳಗೆ ಖಾಯಂ ಅಭಿವೃದ್ಧಿ ಅಧಿಕಾರಿಯನ್ನು ನೇಮಕ ಮಾಡದಿದ್ದಲ್ಲಿ ಗ್ರಾಮ ಪಂಚಾಯಿತಿ ಮತ್ತು ತಾಲೂಕು ಪಂಚಾಯಿತಿ ಎದುರು ಪ್ರತಿಭಟನೆ ಮಾಡಲಾಗುವುದೆಂದು ಗ್ರಾಮಸ್ಥರು ತಿಳಿಸಿದ್ದಾರೆ.