ಮಡಿಕೇರಿ, ಮಾ. ೧೩: ಅಲೆಮಾರಿ, ಅರೆ ಅಲೆಮಾರಿ, ಸೂಕ್ಷö್ಮ ಮತ್ತು ಅತಿಸೂಕ್ಷö್ಮ ಸಮುದಾಯಗಳ ಫಲಾಪೇಕ್ಷಿಗಳಿಂದ ವಸತಿ ರಹಿತ ನಿವೇಶನ (ಸೈಟ್) ಹೊಂದಿದ ಫಲಾಪೇಕ್ಷಿಗಳಿಗೆ ಮನೆ ನಿರ್ಮಿಸಿ ಕೊಡಲು ಮನೆ (ವಸತಿ) ನಿರ್ಮಾಣ ಯೋಜನೆಯಡಿಯಲ್ಲಿ ಫಲಾಪೇಕ್ಷಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ತಾ. ೨೦ ರವರೆಗೆ ಅವಧಿ ವಿಸ್ತರಿಸಲಾಗಿದೆ.
ಫಲಾಪೇಕ್ಷಿಗಳಿಗೆ ಆನ್ಲೈನ್/ ಆಫ್ಲೈನ್ ಮೂಲಕ ಅರ್ಜಿ ಮತ್ತು ದಾಖಲಾತಿಗಳನ್ನು ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮದ ವೆಬ್ಸೈಟ್ ತಿತಿತಿ.ಚಿಜಛಿಟ.ಞಚಿಡಿಟಿಚಿಣಚಿಞಚಿ.gov.iಟಿ ಮೂಲಕ ಸಲ್ಲಿಸಬಹುದು. ಅಥವಾ ವೆಬ್ಸೈಟ್ ಮೂಲಕ ಅರ್ಜಿ ನಮೂನೆ ಡೌನ್ಲೋಡ್ ಮಾಡಿಕೊಂಡು ಅಗತ್ಯ ದಾಖಲಾತಿಗಳೊಂದಿಗೆ ಜಿಲ್ಲಾ ಕಚೇರಿಗೆ ಸಲ್ಲಿಸಬಹುದು. ಆಪ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಫಲಾಪೇಕ್ಷಿಗಳು ಜಿಲ್ಲಾ ಕಚೇರಿ ಸಂಪರ್ಕಿಸಿ ಅರ್ಜಿ ಪಡೆದು ಸಲ್ಲಿಸಬಹುದು.
ಸೌಲಭ್ಯ ಪಡೆಯಲು ಅರ್ಹತೆ: ಅರ್ಜಿದಾರರು ಪರಿಶಿಷ್ಟ ಜಾತಿಯ ಅಲೆಮಾರಿ ಸಮುದಾಯಕ್ಕೆ ಸೇರಿದವರಾಗಿರಬೇಕು ಹಾಗೂ ಕಳೆದ ಕನಿಷ್ಟ ೧೫ ವರ್ಷಗಳಿಂದ ಕರ್ನಾಟಕ ರಾಜ್ಯದ ನಿವಾಸಿಯಾಗಿರಬೇಕು. ೧೮ ವರ್ಷ ಮೇಲ್ಪಟ್ಟವರಾಗಿರಬೇಕು. ಅರ್ಜಿದಾರರ ಕುಟುಂಬದ ವಾರ್ಷಿಕ ವರಮಾನವು ಗ್ರಾಮೀಣ ಪ್ರದೇಶವಾದಲ್ಲಿ ರೂ.೯೮ ಸಾವಿರ ಹಾಗೂ ನಗರ ಪ್ರದೇಶವಾದಲ್ಲಿ ರೂ. ೧.೨೦ ಲಕ್ಷ ಮಿತಿಯೊಳಗಿರಬೇಕು. ಅರ್ಜಿದಾರರ ಕುಟುಂಬದ ಯಾವುದೇ ಸದಸ್ಯರು ಸರ್ಕಾರಿ, ಅರೆ ಸರ್ಕಾರ ಸಂಸ್ಥೆಯಲ್ಲಿ ನೌಕರಿಯಲ್ಲಿರಬಾರದು. ಜಿಲ್ಲೆಯಲ್ಲಿ ಜಿಲ್ಲಾ ಅಂಗವಿಕಲ ಕಲ್ಯಾಣಾಧಿಕಾರಿ ಕಚೇರಿಯಲ್ಲಿ ಈಗಾಗಲೇ ನೋಂದಣಿ ಮಾಡಿಕೊಂಡಿರುವ ಪರಿಶಿಷ್ಟ ಜಾತಿಯ ಅಂಗವಿಕಲ ಫಲಾನುಭವಿಗಳ ಲಭ್ಯವಿರುವ ಪಟ್ಟಿಯಿಂದ ಅಂಗವಿಕಲರನ್ನು ನೇರವಾಗಿ ಸಂದರ್ಶನ ಮಾಡಿ ಶೇ.೫ ರಷ್ಟು ಮೀಸಲಾತಿ ನೀಡಿ ಸೌಲಭ್ಯ ಕಲ್ಪಿಸಲಾಗುವುದು.
ಫಲಾಪೇಕ್ಷಿಯು ಅರ್ಜಿಯೊಂದಿಗೆ ಇತ್ತೀಚಿನ ಪಾಸ್ ಪೋರ್ಟ್ ಅಳತೆಯ ಭಾವ ಚಿತ್ರ, ಜಾತಿ ಪ್ರಮಾಣ ಪತ್ರ, ಕುಟುಂಬದ ವಾರ್ಷಿಕ ವರಮಾನ ಪತ್ರ, ಪಡಿತರ ಚೀಟಿ, ಆಧಾರ್ ಕಾರ್ಡ್, ಮತದಾರರ ಗುರುತಿನ ಚೀಟಿ, ಅರ್ಜಿದಾರರು ಹೊಂದಿರುವ ಬ್ಯಾಂಕ್ ಉಳಿತಾಯ ಖಾತೆಯ ವಿವರಗಳನ್ನೊಳಗೊಂಡ ಪಾಸ್ಬುಕ್ನ ಮೊದಲ ಪುಟದ ಪ್ರತಿ, ನಿರಾಪೇಕ್ಷಣಾ ಪತ್ರ, ಖಾತೆ, ಸೈಟ್/ನಿವೇಶನಕ್ಕೆ ಸಂಬAಧಪಟ್ಟ ದಾಖಲಾತಿಗಳನ್ನು ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗೆ ಜಿಲ್ಲಾ ವ್ಯವಸ್ಥಾಪಕರು, ಅಲೆಮಾರಿ, ಅರೆ ಅಲೆಮಾರಿ, ಸೂಕ್ಷö್ಮ ಮತ್ತು ಅತಿ ಸೂಕ್ಷö್ಮ ಸಮುದಾಯಗಳ ಅಭಿವೃದ್ಧಿ ಕೋಶ, ಮಡಿಕೇರಿ ಕೊಡಗು ಜಿಲ್ಲಾ ಕಚೇರಿಯಿಂದ ಹಾಗೂ ನಿಗಮದ ವೆಬ್ಸೈಟ್ ತಿತಿತಿ.ಚಿಜಛಿಟ.ಞಚಿಡಿಟಿಚಿಣಚಿಞಚಿ.gov.iಟಿ ನಿಂದ ಪಡೆಯಬಹುದು ಎಂದು ಡಾ. ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.