ಪೊನ್ನಂಪೇಟೆ, ಮಾ. ೧೩: ಪೊನ್ನಂಪೇಟೆ ತಾಲೂಕಿನಲ್ಲಿ ನೂತನ ದಿವ್ಯಾಂಗರ ಒಕ್ಕೂಟವನ್ನು ಅಸ್ತಿತ್ವಕ್ಕೆ ತರಲಾಗಿದ್ದು, ಇಲ್ಲಿನ ತಾಲೂಕು ಪಂಚಾಯಿತಿ ಸಾಮರ್ಥ್ಯ ಸೌಧ ಸಭಾಂಗಣದಲ್ಲಿ ಪೊನ್ನಂಪೇಟೆ ತಾಲೂಕು ದಿವ್ಯಾಂಗರ ಒಕ್ಕೂಟದ ಉದ್ಘಾಟನಾ ಕಾರ್ಯಕ್ರಮವನ್ನು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಕಲ್ಯಾಣ ಅಧಿಕಾರಿ ಕೆ.ಎಸ್. ವಿಮಲ ನೆರವೇರಿಸಿದರು.
ಈ ಸಂದರ್ಭ ಪೊನ್ನಂಪೇಟೆ ತಾಲೂಕು ದಿವ್ಯಾಂಗರ ಒಕ್ಕೂಟದ ನೂತನ ಅಧ್ಯಕ್ಷರನ್ನಾಗಿ ಬಿ. ಶೆಟ್ಟಿಗೇರಿ ಗ್ರಾಮದ ಕೋತ್ರಿಕಾಡ್ ನಿವಾಸಿ ಕಾರೇಟಿರ ಗಣೇಶ್ ಅವರನ್ನು ನೇಮಕ ಮಾಡಲಾಯಿತು. ಕಾರ್ಯಕ್ರಮದಲ್ಲಿ ಕೊಡಗು ಜಿಲ್ಲಾ ದಿವ್ಯಾಂಗರ ಒಕ್ಕೂಟದ ಅಧ್ಯಕ್ಷ ಮಹೇಶ್, ವಿವೇಕಾನಂದ ಯೂತ್ ಮೂವ್ಮೆಂಟ್ನ ಜಿಲ್ಲಾ ಸಂಯೋಜಕ ಸುರೇಶ್, ಪೊನ್ನಂಪೇಟೆ ತಾಲೂಕು ದಿವ್ಯಾಂಗರ ಒಕ್ಕೂಟದ ಸದಸ್ಯರು ಹಾಜರಿದ್ದರು.