ಮಡಿಕೇರಿ, ಮಾ. ೧೩: ಪ್ರಸಕ್ತ ಸಾಲಿಗೆ ಕೊಡಗು ಜಿಲ್ಲೆಯಲ್ಲಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕ/ ಬಾಲಕಿಯರ ವಿದ್ಯಾರ್ಥಿ ನಿಲಯಗಳಿಗೆ ಹಿಂದುಳಿದ ವರ್ಗಗಳ ಪ್ರವರ್ಗ-೧, ೨ಎ, ೨ಬಿ, ೩ಎ ಹಾಗೂ ೩ ಬಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವರ್ಗ ಮತ್ತು ಇತರ ಜನಾಂಗಕ್ಕೆ ಸೇರಿದ ಅರ್ಹ ಅಭ್ಯರ್ಥಿಗಳಿಂದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ.
ಪೋಷಕರ ವಾರ್ಷಿಕ ಆದಾಯ ಪ್ರವರ್ಗ-೧, ಎಸ್ಸಿ ಮತ್ತು ಎಸ್ಟಿ ರೂ. ೨.೫೦ ಲಕ್ಷ, ಪ್ರವರ್ಗ-೨ಎ, ೨ಬಿ, ೩ಎ, ೩ಬಿ, ಇತರ ಹಿಂದುಳಿದ ವರ್ಗ ರೂ. ೧ ಲಕ್ಷ ಆಗಿದೆ. ಹೆಚ್ಚಿನ ಮಾಹಿತಿಗೆ ಜಿಲ್ಲಾ ಕಚೇರಿ, ಮಡಿಕೇರಿ ದೂ. ೦೮೨೭೨-೨೯೫೬೨೮, ಮಡಿಕೇರಿ ತಾಲೂಕು ಕಚೇರಿ ದೂ. ೯೪೮೦೩೫೬೪೦೯, ವೀರಾಜಪೇಟೆ ತಾಲೂಕು ಕಚೇರಿ ದೂ. ೮೭೬೨೪೭೬೭೯೦ ಮತ್ತು ಸೋಮವಾರಪೇಟೆ ತಾಲೂಕು ಕಚೇರಿ ಮೊ. ೯೪೮೧೭೭೨೧೪೩ನ್ನು ಸಂಪರ್ಕಿಸಬಹುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಮಂಜುನಾಥ್ ತಿಳಿಸಿದ್ದಾರೆ.