ನಾಪೋಕ್ಲು ಪಬ್ಲಿಕ್ ಶಾಲೆ: ಜಿಲ್ಲಾ ಪಂಚಾಯಿತಿ, ಕಾನೂನು ಸೇವಾ ಪ್ರಾದಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಾರ್ತಾ ಮತ್ತು ಸಾಮಾಜಿಕ ಸಂಪರ್ಕ ಇಲಾಖೆ ಮತ್ತು ಗ್ರಾಮ ಪಂಚಾಯಿತಿಯ ಸಹಯೋಗದೊಂದಿಗೆ ಬಾಲ್ಯ ವಿವಾಹ ನಿಷೇಧ ಕಾಯ್ದೆಯ ಸಮರ್ಪಕ ಅನುಷ್ಠಾನ ಮತ್ತು ಸಾರ್ವಜನಿಕರಲ್ಲಿ ಅರಿವು ಮೂಡಿಸುವ ವೀಡಿಯೋ ಆನ್ ವೀಲ್ಸ್ ವಾಹನದ ಮೂಲಕ ನಾಪೋಕ್ಲು ಪಬ್ಲಿಕ್ ಶಾಲೆಯಲ್ಲಿ ಕಾರ್ಯಕ್ರಮವನ್ನು ಬೃಹತ್ ಪರದೆಯಲ್ಲಿ ಮಕ್ಕಳಿಗೆ ತೋರಿಸಲಾಯಿತು.

ಈ ಸಂದರ್ಭ ಶಿಶು ಅಭಿವೃದ್ಧಿ ಇಲಾಖೆಯ ಮೇಲ್ವಿಚಾರಕಿ ಸವಿತಾ ಕೀರ್ತನ್, ಶಾಲೆಯ ಉಪಾಧ್ಯಕ್ಷ ಕೆ.ಎ. ಹ್ಯಾರೀಸ್, ಪ್ರಾಂಶುಪಾಲೆ ಅವನಿಜ ಸೋಮಯ್ಯ, ಉಪಪ್ರಾಂಶುಪಾಲೆ ಸೌಭಾಗ್ಯ, ಶಿಕ್ಷಕ ವೃಂದ ಅಂಗನವಾಡಿ, ಆಶಾ, ದುಗ್ಗಳ ಕಾರ್ಯಕರ್ತೆಯರು ಮತ್ತು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

ಬಲ್ಲಮಾವಟಿ ನೇತಾಜಿ ಪ್ರೌಢಶಾಲೆ: ಜಿಲ್ಲಾಡಳಿತ, ಜಿ.ಪಂ., ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ಜಿಲ್ಲಾ ಸ್ತಿçà ಶಕ್ತಿ ಒಕ್ಕೂಟ ಇವರ ಸಹಯೋಗದಲ್ಲಿ ಬಾಲ್ಯ ವಿವಾಹ ನಿಷೇಧ ಕಾಯ್ದೆ ಅನುಷ್ಠಾನ ಪ್ರಚಾರಾಂ ದೋಲನ ಬಲ್ಲಮಾವಟಿ ನೇತಾಜಿ ಪ್ರೌಢಶಾಲೆಯಲ್ಲಿ ನಡೆಯಿತು. ಬಾಲ್ಯ ವಿವಾಹ ನಿಷೇಧ ಬಗ್ಗೆ ವಿದ್ಯಾರ್ಥಿಗಳಿಂದ ಪ್ರತಿಜ್ಞಾವಿಧಿ ಸ್ವೀಕಾರ ಮಾಡಲಾಯಿತು. ಗ್ರಾ.ಪಂ. ಅಧ್ಯಕ್ಷ ಮಣವಟ್ಟೀರ ಹರೀಶ್ ಕುಶಾಲಪ್ಪ, ಸದಸ್ಯ ಮಚ್ಚುರ ರವೀಂದ್ರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿಗಳು, ಶಾಲಾ ಶಿಕ್ಷಕರು, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರಿದ್ದರು.ಸುಂಟಿಕೊಪ್ಪ ಸರಕಾರಿ ಪದವಿಪೂರ್ವ ಕಾಲೇಜು: ಬಾಲ್ಯ ವಿವಾಹ ನಿಷೇಧ ಕಾಯ್ದೆಯ ಸಮರ್ಪಕ ಅನುಷ್ಠಾನ ಮತ್ತು ಸಾರ್ವಜನಿಕರಿಗೆ ಅರಿವು ಮತ್ತು ವೀಡಿಯೋ ಅನ್ ವೀಲ್ಸ್ ಮೂಡಿಸುವ ಕಾರ್ಯಕ್ರಮದಡಿಯಲ್ಲಿ ಸರಕಾರಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿಯರಿಗೆ ಮಾಹಿತಿಯನ್ನು ನೀಡಲಾಯಿತು. ಇಲ್ಲಿನ ಸರಕಾರಿ ಪದವಿಪೂರ್ವ ಕಾಲೇಜಿನ ಆವರಣದಲ್ಲಿ ಕರ್ನಾಟಕ ಸರಕಾರ, ಕೊಡಗು ಜಿಲ್ಲಾಡಳಿತ,ಜಿಲ್ಲಾ ಪಂಚಾಯಿತಿ ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಾರ್ತಾ ಮತ್ತು ಪ್ರಚಾರ ಇಲಾಖೆಯ ಸಹಯೋಗದಲ್ಲಿ ಆಯೋಜಿಸಲಾದ ಬಾಲ್ಯ ವಿವಾಹ ನಿಷೇಧ ಕಾಯ್ದೆಯ ಸಮರ್ಪಕ ಅನುಷ್ಠಾನ ಮತ್ತು ಸಾರ್ವಜನಿಕರಿಗೆ ಅರಿವು ಮೂಡಿಸುವ ದಿಸೆಯಲ್ಲಿ ವೀಡಿಯೋ ಅನ್ ವಿಲ್ಸ್ ಅಭಿಯಾನವನ್ನು ಕಾಲೇಜಿನ ಪ್ರಾಂಶುಪಾಲ ಪಿ.ಎಸ್. ಜಾನ್, ಸೋಮವಾರಪೇಟೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಮೇಲ್ವಿಚಾರಕಿ ಸಾವಿತ್ರವ್ವ ಹಾಗೂ ಪಂಚಾಯಿತಿ ಸದಸ್ಯೆ ವಸಂತಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ವಿದ್ಯಾರ್ಥಿಗಳಿಗೆ ಬಾಲ್ಯ ವಿವಾಹ ನಿಷೇಧ ಕಾಯ್ದೆಯ ಸಮರ್ಪಕ ಅನುಷ್ಠಾನ ಪ್ರತಿಜ್ಞಾ ವಿಧಿಯನ್ನು ಭೋದಿಸಲಾಯಿತು. ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿಯರಿಗೆ ವೀಡಿಯೋ ಅನ್ ವೀಲ್ಸ್ ಶೋವನ್ನು ಪ್ರದರ್ಶಿಸಲಾಯಿತು.

ಸುಂಟಿಕೊಪ್ಪ ಅಂಗನವಾಡಿ ಕೇಂದ್ರಗಳ ಕಾರ್ಯಕರ್ತೆಯರಾದ ಜೆಸ್ಸಿ ಡಿಸೋಜ, ಪಿ. ವಿಜಯ, ಸೇಲಿನಾ, ಜಯಂತಿ, ಶೋಭ, ಸಹಾಯಮೇರಿ ಕಾಲೇಜಿನ ಉಪನ್ಯಾಸಕ ಮತ್ತು ಉಪನ್ಯಾಸಕಿಯರು ಇದ್ದರು.