ಮಡಿಕೇರಿ, ಮಾ. ೧೪: ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ, ಜಿಲ್ಲಾ ಗ್ರಾಹಕರ ವೇದಿಕೆ ಹಾಗೂ ಜಿಲ್ಲಾ ಗ್ರಾಹಕರ ಮಾಹಿತಿ ಕೇಂದ್ರ ಕುಶಾಲನಗರ ಇವರ ಸಂಯುಕ್ತಾಶ್ರಯದಲ್ಲಿ ‘ವಿಶ್ವ ಗ್ರಾಹಕರ ದಿನಾಚರಣೆ’ ಪ್ರಯುಕ್ತ ‘ನ್ಯಾಯೋಚಿತ ಡಿಜಿಟಲ್ ಹಣಕಾಸು’ ಕಾರ್ಯಕ್ರಮವು ತಾ. ೧೫ ರಂದು (ಇಂದು) ಬೆಳಿಗ್ಗೆ ೧೦.೩೦ ಗಂಟೆಗೆ ಕುಶಾಲನಗರದ ಮಾದಪಟ್ಟಣ ಸರಕಾರಿ ಎಂಜಿನಿಯರಿAಗ್ ಕಾಲೇಜಿನಲ್ಲಿ ನಡೆಯಲಿದೆ.
ಹಿರಿಯ ಸಿವಿಲ್ ನ್ಯಾಯಾ ಧೀಶರು ಮತ್ತು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾಯದರ್ಶಿ ಎನ್.ಸುಬ್ರಮಣ್ಯ ಜಿಲ್ಲಾಧಿಕಾರಿ ಡಾ. ಬಿ.ಸಿ. ಸತೀಶ, ಜಿಲ್ಲಾ ಗ್ರಾಹಕ ವ್ಯಾಜ್ಯಗಳ ಪರಿಹಾರ ಆಯೋಗದ ಅಧ್ಯಕ್ಷರಾದ ರೇಣುಕಾಂಭ, ಜಿಲ್ಲಾ ಗ್ರಾಹಕ ವ್ಯಾಜ್ಯಗಳ ಪರಿಹಾರ ಆಯೋಗದ ಸದಸ್ಯರಾದ ನಿರ್ಮಲ ಕುಮಾರ್ ಬಿ., ಚೇಂಬರ್ ಆಫ್ ಕಾಮರ್ಸ್ನ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾದ ನವೀನ್ ಅಂಬೆಕಲ್, ಜಿಲ್ಲಾ ಗ್ರಾಹಕ ಮಾಹಿತಿ ಕೇಂದ್ರ, ಕುಶಾಲನಗರ ಅಧ್ಯಕ್ಷರಾದ ಎ.ಎ. ಚಂಗಪ್ಪ, ಇತರರು ಪಾಲ್ಗೊಳ್ಳಲಿದ್ದಾರೆ.