ಮಡಿಕೇರಿ, ಮಾ. ೧೩: ಕಗ್ಗೋಡ್ಲು ಗ್ರಾಮದ ಶ್ರೀ ಭಗವತಿ ದೇವಸ್ಥಾನದ ಸಮುದಾಯ ಭವನದಲ್ಲ್ಲಿ ಹಮ್ಮಿಕೊಂಡ ಇ-ಶ್ರಮ್ ಕಾರ್ಡ್ ಹಾಗೂ ಆಯುಷ್ಮಾನ್ ಕಾರ್ಡ್ ನೋಂದಣಿ ಕಾರ್ಯಕ್ರಮದಲ್ಲಿ ಹಾಜರಾಗಿ ಕಾರ್ಮಿಕ ಇಲಾಖೆಯಿಂದ ಅನುಷ್ಠಾನ ಮಾಡುತ್ತಿರುವ ಇ-ಶ್ರಮ್ ಯೋಜನೆ, ನೋಂದಾಯಿತ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರಿಗೆ ಸಿಗುವ ಸೌಲಭ್ಯಗಳ ಕುರಿತು, ಕರ್ನಾಟಕ ರಾಜ್ಯ ಖಾಸಗಿ ವಾಣಿಜ್ಯ ಸಾರಿಗೆ ಕಾರ್ಮಿಕರ ಅಪಘಾತ ಪರಿಹಾರ ಯೋಜನೆ, ಅಂಬೇಡ್ಕರ್ ಕಾರ್ಮಿಕ ಸಹಾಯ ಹಸ್ತ ಯೋಜನೆ, ಆಶಾದೀಪ ಯೋಜನೆ, ಪ್ರಧಾನಮಂತ್ರಿ ಶ್ರಮಯೋಗಿ ಮಾನ್-ಧನ್ (ಪಿಎಂಎಸ್ವೈಎA) ಯೋಜನೆ, ವ್ಯಾಪಾರಿಗಳು ಹಾಗೂ ಸ್ವಯಂ ಉದ್ಯೋಗಿಗಳಿಗೆ ರಾಷ್ಟಿçÃಯ ಪಿಂಚಣಿ ಯೋಜನೆ ಹಾಗೂ ಕರ್ನಾಟಕ ಕಾರ್ಮಿಕ ಕಲ್ಯಾಣ ಮಂಡಳಿಯ ಕಾರ್ಮಿಕ ಕಲ್ಯಾಣ ಯೋಜನೆಗಳ ಕುರಿತು ಮಾಹಿತಿಯನ್ನು ನೀಡಲಾಯಿತು.
ಸ್ಥಳದಲ್ಲಿಯೇ ಇ-ಶ್ರಮ್ ಕಾರ್ಡುಗಳನ್ನು ಹಾಕತ್ತೂರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಎಂ.ಎನ್. ಸುವಿತಾ ವಿತರಿಸಿದರು. ತಾಲೂಕು ಕಾರ್ಮಿಕ ಅಧಿಕಾರಿ ಯತ್ನಟ್ಟಿ, ಇತರರು ಇದ್ದರು.