ಕೂಡಿಗೆ, ಮಾ.೧೫: ಕೂಡಿಗೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ವಿರುದ್ಧವಾಗಿ ಕೂಡಿಗೆ ಗ್ರಾಮ ಪಂಚಾಯಿತಿ ೧೦ ಮಂದಿ ಸದಸ್ಯರು ಅವಿಶ್ವಾಸ ನಿರ್ಣಯ ಮಾಡಿ ಸಹಿ ಮಾಡಿದ ಮನವಿಯನ್ನು ಜಿಲ್ಲಾ ಉಪ ವಿಭಾಗಾಧಿಕಾರಿಗೆ ಸಲ್ಲಿಸಿದ್ದಾರೆ. ಕೂಡಿಗೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಮಂಗಳ ಮತ್ತು ಉಪಾಧ್ಯಕ್ಷೆ ಮೋಹಿನಿ ಅವರ ವಿರುದ್ಧವಾಗಿ ಹಾಲಿ ಗ್ರಾಮ ಪಂಚಾಯಿತಿ ಸದಸ್ಯರುಗಳಾದ ಅರುಣ್ ರಾವ್, ಕೆ.ಎಸ್. ಶಿವಕುಮಾರ್, ವಾಣಿ ಜಯಶ್ರೀ, ಟಿ.ಪಿ. ಹಮೀದ್ ಕೆ.ಟಿ. ಗಿರೀಶ್, ಲಕ್ಷಿö್ಮ, ಎಸ್.ಎನ್. ಅನಂತ, ಹೆಚ್.ಆರ್. ಚಂದ್ರು ಇವರುಗಳು ಅವಿಶ್ವಾಸ ನಿರ್ಣಯ ಪತ್ರಕ್ಕೆ ಸಹಿ ಮಾಡಿದ್ದಾರೆ. ಅಧ್ಯಕ್ಷೆ ಮತ್ತು ಉಪಾಧ್ಯಕ್ಷೆ ಗ್ರಾಮ ಪಂಚಾಯಿತಿ ಅಭಿವೃದ್ಧಿ ಕಾಮಗಾರಿಗಳಿಗೆ ಅಡ್ಡಿ ಉಂಟು ಮಾಡುತ್ತಿದ್ದು, ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಭಿವೃದ್ಧಿ ಕೆಲಸಗಳಿಗೆ ತೊಂದರೆಗಳು ಉಂಟಾಗುತ್ತಿದೆ. ಅಧ್ಯಕ್ಷೆ ಹಾಗೂ ಉಪಾಧ್ಯಕ್ಷೆಯ ಪತಿಯಂದಿರು ಪಂಚಾಯಿತಿ ಆಡಳಿತದಲ್ಲಿ ಹಸ್ತಕ್ಷೇಪ ಮಾಡುತ್ತಿದ್ದಾರೆ ಎಂದು ಪತ್ರದಲ್ಲಿ ತಿಳಿಸಲಾಗಿದೆ.