ಮಡಿಕೇರಿ, ಮಾ. ೧೪: ಕೊಡಗು, ಪುತ್ತೂರು, ಸುಳ್ಯ ಸೇರಿದಂತೆ ರಾಜ್ಯದ ಇತರೆಡೆಗಳಲ್ಲಿ ನೆಲೆಸಿರುವ ಅರೆಭಾಷೆ ಗೌಡ ಜನಾಂಗದ ಅಭಿವೃದ್ಧಿಗೆ ಸಂಬAಧಿಸಿದAತೆ ಅಭಿವೃದ್ಧಿ ನಿಗಮ ಸ್ಥಾಪಿಸುವ ಯಾವುದೇ ಪ್ರಸ್ತಾವನೆ ಸರಕಾರದ ಮುಂದೆ ಇಲ್ಲ ಎಂಬುದಾಗಿ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಅವರು ಉತ್ತರಿಸಿದ್ದಾರೆ. ವಿಧಾನ ಪರಿಷತ್ ಸದಸ್ಯೆ ಶಾಂತೆಯAಡ ವೀಣಾ ಅಚ್ಚಯ್ಯ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ತಾ.೩೦-೩-೨೦೦೨ ರಲ್ಲಿ ರಾಜ್ಯದ ಹಿಂದುಳಿದ ವರ್ಗಗಳನ್ನು ಗುರುತಿಸಿ ಹೊರಡಿಸಿರುವ ಆದೇಶದಲ್ಲಿ ಗೌಡ ಜನಾಂಗದ ಹೆಸರು ಇಲ್ಲದಿರುವುದಾಗಿ ಸ್ಪಷ್ಟಪಡಿಸಿದ್ದಾರೆ.