ಬೆಂಗಳೂರು, ಮಾ. ೧೫: ಹಿಜಾಬ್ ಇಸ್ಲಾಂನ ಅತ್ಯಗತ್ಯ ಭಾಗವಲ್ಲ; ಶಾಲೆಗಳಲ್ಲಿ ಸರ್ಕಾರ ಜಾರಿಗೊಳಿಸಿದ ಸಮವಸ್ತç ಧಾರಣೆ ಆದೇಶ ಕಾನೂನುಬದ್ಧವಾಗಿದೆ ಎಂದು ರಾಜ್ಯ ಉಚ್ಚ ನ್ಯಾಯಾಲಯದ ತ್ರಿಸದಸ್ಯ ಪೀಠ ಮಂಗಳವಾರ ಮಹತ್ವದ ತೀರ್ಪು ನೀಡಿ ಹಿಜಾಬ್ ಕುರಿತ ಎಲ್ಲಾ ಅರ್ಜಿಗಳನ್ನು ವಜಾಗೊಳಿಸಿದೆ. ಇದರಿಂದಾಗಿ ಕರ್ನಾಟಕದ ಶಾಲಾ - ಕಾಲೇಜುಗಳಲ್ಲಿ ಕಳೆದ ಕೆಲವು ತಿಂಗಳಿನಿAದ ಉಂಟಾಗಿದ್ದ ಗೊಂದಲ, ಘರ್ಷಣೆ, ಧಾರ್ಮಿಕ ವೈಷಮ್ಯಗಳಿಗೆ ನ್ಯಾಯಾಲಯ ಅಂತಿಮ ತೆರೆ ಎಳೆದಿದೆ.

ಸರ್ಕಾರದ ಆದೇಶ ಕಾನೂನುಬದ್ಧವಾಗಿದೆ. ಸರ್ಕಾರದ ವಸ್ತçಸಂಹಿತೆಯನ್ನು ಪ್ರಶ್ನೆ ಮಾಡುವ ಹಾಗಿಲ್ಲ, ಸಮವಸ್ತçವನ್ನು ಕಡ್ಡಾಯ ಮಾಡುವುದು ಸಂವಿಧಾನದ ೧೯(೧)(ಎ) ಮತ್ತು ೨೫ರ ಅಡಿಯಲ್ಲಿ ಖಾತರಿಪಡಿಸಲಾದ ಮೂಲಭೂತ ಹಕ್ಕುಗಳ ಉಲ್ಲಂಘನೆಯಲ್ಲ. ಹಿಜಾಬ್ ಇಸ್ಲಾಂನ ಅತ್ಯಗತ್ಯ ಭಾಗವಲ್ಲ ಎಂದು ತ್ರಿಸದಸ್ಯ ಪೀಠ ತೀರ್ಪಿನಲ್ಲಿ ವಿವರಿಸಿದೆ.

೨೦೨೨ರ ಜನವರಿ ೩೧ ಮತ್ತು ನಂತರದ ದಿನಗಳಲ್ಲಿ ವಿದ್ಯಾರ್ಥಿನಿಯರು ಸಲ್ಲಿಸಿದ್ದ ೭ ರಿಟ್ ಅರ್ಜಿಗಳ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ತಿ, ನ್ಯಾಯಮೂರ್ತಿ ಕೃಷ್ಣ ಎಸ್ ದೀಕ್ಷಿತ್ ಹಾಗೂ ನ್ಯಾಯಮೂರ್ತಿ ಖಾಜಿ ಜೈಬುನ್ನೀಸಾ ಮೊಹಿಯುದ್ದೀನ್ ಅವರಿದ್ದ ತ್ರಿಸದಸ್ಯ ಪೀಠ ವಿಚಾರಣೆ ನಡೆಸಿತ್ತು. ೧೧ ದಿನಗಳ ಕಾಲ ವಿಚಾರಣೆ ನಡೆಸಿದ್ದ ಪೀಠ, ಫೆಬ್ರವರಿ ೨೫ರಂದು ತೀರ್ಪು ಕಾಯ್ದಿರಿಸಿರುವುದಾಗಿ ತಿಳಿಸಿತ್ತು.

ಮೊದಲು ಹಿಜಾಬ್ ವಿವಾದ ಆರಂಭವಾಗಿದ್ದು ಉಡುಪಿಯ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನಲ್ಲಿ. ಬಳಿಕ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿಯೂ ಈ ವಿವಾದ ಸದ್ದು ಮಾಡಿತು. ತರಗತಿಯಲ್ಲಿ ಹಿಜಾಬ್ ಧರಿಸಲು ಅವಕಾಶ ನೀಡಬೇಕು ಎಂದು ವಿದ್ಯಾರ್ಥಿನಿಯರು ಒತ್ತಾಯಿಸ ತೊಡಗಿದರು.

ಕಾಲೇಜಿನ ಅಭಿವೃದ್ಧಿ ಸಮಿತಿ ತರಗತಿಯಲ್ಲಿ ಹಿಜಾಬ್ ಧರಿಸಲು ಯಾವುದೇ ಕಾರಣಕ್ಕೂ ಅವಕಾಶ ನೀಡುವುದಿಲ್ಲ ಎಂದು ಸ್ಪಷ್ಟಪಡಿಸಿತು. ಇದರಿಂದಾಗಿ ವಿದ್ಯಾರ್ಥಿನಿಯರು ತರಗತಿಯಿಂದ ಹೊರಗುಳಿದರು. ವಿದ್ಯಾರ್ಥಿನಿಯರು, ಪೋಷಕರು, ಕಾಲೇಜಿನ ಆಡಳಿತ ಮಂಡಳಿ ನಡುವೆ ಜಟಾಪಟಿ ನಡೆಯಿತು.

ವಿವಾದ ಬೇರೆ ಜಿಲ್ಲೆಗಳಿಗೆ ಹರಡುತ್ತಿದ್ದಂತೆ ಕೇಸರಿ ಶಾಲಿನ ಆಗಮನವಾಯಿತು. ಅವರಿಗೆ ಹಿಜಾಬ್ ಧರಿಸಲು ಅವಕಾಶ ನೀಡಿದರೆ ನಾವು ಕೇಸರಿ ಶಾಲು ಹಾಕಿಕೊಂಡು ಬರುತ್ತೇವೆ ಎಂದು ವಿದ್ಯಾರ್ಥಿಗಳು ಪಟ್ಟು ಹಿಡಿದರು. ಅಂತಿಮವಾಗಿ ಜನವರಿ ೩೧ರಂದು ಹಿಜಾಬ್ ಧರಿಸಲು ಅವಕಾಶ ನೀಡಬೇಕು ಎಂದು ಕರ್ನಾಟಕ ಹೈಕೋರ್ಟ್ಗೆ ಅರ್ಜಿ ಸಲ್ಲಿಕೆಯಾಯಿತು.

ತರಗತಿಗೆ ಹಿಜಾಬ್ ಧರಿಸಿ ಬರದಂತೆ ನಿರ್ಬಂಧಿಸಿರುವ ಕಾಲೇಜಿನ ಕ್ರಮ ಪ್ರಶ್ನಿಸಿ ಹಾಗೂ ಸಮವಸ್ತç ಸಂಹಿತೆ ಜಾರಿ ಸಂಬAಧ ಸರ್ಕಾರ ಹೊರಡಿಸಿರುವ ಆದೇಶ ರದ್ದುಕೋರಿ ಉಡುಪಿಯ ಸರ್ಕಾರಿ ಮಹಿಳಾ ಪದವಿಪೂರ್ವ ಕಾಲೇಜು ವಿದ್ಯಾರ್ಥಿನಿ ರೇಷಮ್ ಮತ್ತಿತರ ವಿದ್ಯಾರ್ಥಿನಿಯರು ಹಾಗೂ ಅವರ ಪೋಷಕರು ಸಲ್ಲಿಸಿದ್ದ ಅರ್ಜಿಗಳನ್ನು ಪೂರ್ಣಪೀಠ ವಜಾಗೊಳಿಸಿದೆ.

ಏಕ ಸದಸ್ಯ ಪೀಠದಲ್ಲಿ ವಿಚಾರಣೆ

ಹಿಜಾಬ್ ಧರಿಸಲು ಅವಕಾಶ ನೀಡಬೇಕು ಎಂಬ ವಿದ್ಯಾರ್ಥಿನಿಯರ ಅರ್ಜಿಯನ್ನು ಮೊದಲು ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿದ್ದ ಏಕಸದಸ್ಯ ಪೀಠ ವಿಚಾರಣೆ ನಡೆಸಿತು. ಆಗ ಹಲವು ಅರ್ಜಿಗಳು ಇದೇ ವಿಚಾರದಲ್ಲಿ ಸಲ್ಲಿಕೆಯಾದವು. ಅಲ್ಲದೇ ಸಂವಿಧಾನದ ಹಲವು ಅಂಶಗಳು ಸಹ ಇದರಲ್ಲಿ ಸೇರಿವೆ ಎಂದು ವಾದ-ಪ್ರತಿವಾದ ನಡೆಯಿತು. ಈ ಹಿನ್ನೆಲೆಯಲ್ಲಿ ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅರ್ಜಿಯನ್ನು ಮುಖ್ಯ ನ್ಯಾಯೂರ್ತಿಗಳ ಪೀಠಕ್ಕೆ ವರ್ಗಾಯಿಸಿದರು. ಎಲ್ಲಾ ಅರ್ಜಿಗಳನ್ನು ಅದೇ ಪೀಠಕ್ಕೆ ವರ್ಗಾವಣೆ ಮಾಡುವಂತೆ ಸೂಚನೆ ನೀಡಿದರು.

(ಮೊದಲ ಪುಟದಿಂದ)

ತ್ರಿಸದಸ್ಯ ಪೀಠ ರಚನೆ

ಹಿಜಾಬ್ ಕುರಿತ ಅರ್ಜಿಗಳ ವಿಚಾರಣೆಗಾಗಿ ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ತಿ ತ್ರಿಸದಸ್ಯ ಪೀಠ ರಚನೆ ಮಾಡಿದರು. ಪೀಠದಲ್ಲಿ ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಮತ್ತು ನ್ಯಾಯಮೂರ್ತಿ ಖಾಜಿ ಜೈಬುನ್ನಿಸಾ ಮೊಹಿದ್ದೀನ್ ಅವರಿದ್ದರು. ಅರ್ಜಿಯ ವಿಚಾರಣೆ ಸಂದರ್ಭದಲ್ಲಿ ಮಧ್ಯಂತರ ಆದೇಶ ನೀಡಬೇಕು ಎಂದು ವಕೀಲರು ಮನವಿ ಮಾಡಿದ್ದರು. ಆಗ ನ್ಯಾಯಾಲಯ ಅರ್ಜಿಗಳ ವಿಚಾರಣೆ ನಡೆದು ತೀರ್ಪು ಪ್ರಕಟವಾಗುವ ತನಕ ಧಾರ್ಮಿಕ ಚಿನ್ಹೆ ಬಿಂಬಿಸುವ ಹಿಜಾಬ್, ಕೇಸರಿ ಶಾಲು ವಸ್ತçಗಳನ್ನು ವಿದ್ಯಾರ್ಥಿಗಳು ಧರಿಸುವಂತಿಲ್ಲ ಎಂದು ಮಧ್ಯಂತರ ಆದೇಶ ನೀಡಿತು.

ಅಂತಿಮ ತೀರ್ಪು ಪ್ರಕಟ

ಮಂಗಳವಾರ ಕೋರ್ಟ್ ಕಲಾಪ ಆರಂಭವಾದಾಗ ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ತಿ ೬ ನಿಮಿಷದ ಕಲಾಪದಲ್ಲಿ ಹಿಜಾಬ್ ವಿವಾದದ ಕುರಿತ ತೀರ್ಪು ನೀಡಿದರು. ಅಂತಿಮ ತೀರ್ಪು ಒಟ್ಟು ೧೨೯ ಪುಟಗಳನ್ನು ಒಳಗೊಂಡಿದೆ. ಉಡುಪಿಯ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನಲ್ಲಿ ಆರಂಭವಾಗಿದ್ದ ಹಿಜಾಬ್ ವಿವಾದ ಕರ್ನಾಟಕ ಹೈಕೋರ್ಟ್ನಲ್ಲಿ ಅಂತ್ಯಗೊAಡಿದೆ.

ಹಿಜಾಬ್ ವಿವಾದ: ಹೈಕೋರ್ಟ್ ಎತ್ತಿದ ಆ ನಾಲ್ಕು ಪ್ರಶ್ನೆಗಳು ಮತ್ತು ಉತ್ತರಗಳೇನು? ಹೈಕೋರ್ಟ್ ಎತ್ತಿರುವ ನಾಲ್ಕು ಪ್ರಶ್ನೆಗಳು ಮತ್ತು ಉತ್ತರಗಳು ಹೀಗಿವೆ:

ಪ್ರಶ್ನೆ-೧: ಹಿಜಾಬ್ ಧಾರಣೆ ಇಸ್ಲಾಂನ ಅತ್ಯಗತ್ಯ ಧಾರ್ಮಿಕ ಪದ್ಧತಿಯೇ? ಅದಕ್ಕೆ ಸಂವಿಧಾನದ ಕಲಂ ೨೫ರಡಿ ಮೂಲಭೂತ ಹಕ್ಕಿನ ರಕ್ಷಣೆ ಇದೆಯೇ?

ಉತ್ತರ: ಹಿಜಾಬ್ ಧರಿಸುವುದು ಇಸ್ಲಾಂನ ಧಾರ್ಮಿಕ ಅತ್ಯಗತ್ಯ ಪದ್ಧತಿಯಲ್ಲ. ಹಾಗಾಗಿ ಅದಕ್ಕೆ ಸಂವಿಧಾನದ ಕಲಂ ೨೫ರಡಿ ರಕ್ಷಣೆ ನೀಡಲಾಗದು

ಪ್ರಶ್ನೆ:೨: ಸಮವಸ್ತç ನಿಗದಿ ಮಾಡಲು ಕಾನೂನಿನಲ್ಲಿ ಮಾನ್ಯತೆ ಇದೆಯೇ? ಇದರಿಂದ ಸಂವಿಧಾನದ ಕಲಂ ೧೯ ರಡಿ ಅಭಿವ್ಯಕ್ತಿ ಸ್ವಾತಂತ್ರ‍್ಯಕ್ಕೆ ಅಡ್ಡಿಯಾಗಿ ಮೂಲಭೂತ ಹಕ್ಕುಗಳಿಗೆ ಧಕ್ಕೆ ಆಗಲಿದೆಯೇ?

ಉತ್ತರ: ಶಾಲಾ-ಕಾಲೇಜುಗಳಲ್ಲಿ ಸಮವಸ್ತç ನಿಗದಿ ಮಾಡುವ ಅಧಿಕಾರ ಸರಕಾರಕ್ಕೆ ಇದೆ, ಕಾನೂನಿನಲ್ಲೂ ಅದಕ್ಕೆ ಮಾನ್ಯತೆ ಇದೆ. ಸಮವಸ್ತç ನಿಗದಿ ಮಾಡುವುದು ಅಭಿವ್ಯಕ್ತಿ ಸ್ವಾತಂತ್ರ‍್ಯಕ್ಕೆ ಅಡ್ಡಿಯಾಗದು, ಮೂಲಭೂತ ಹಕ್ಕುಗಳಿಗೆ ಧಕ್ಕೆಯಾಗದು.

ಪ್ರಶ್ನೆ-೩: ಶಾಲಾ-ಕಾಲೇಜುಗಳಲ್ಲಿ ಸಮವಸ್ತç ನಿಗದಿಪಡಿಸುವ ಹೊಣೆ ಸ್ಥಳೀಯ ಕಾಲೇಜು ಅಭಿವೃದ್ಧಿ ಮಂಡಳಿಗೆ ವಹಿಸಿ ಸರಕಾರ ೨೦೨೨ರ ಫೆ.೫ರಂದು ಹೊರಡಿಸಿರುವ ಆದೇಶ ಕಾನೂನುಬಾಹಿರ ಕ್ರಮವೇ, ಅದಕ್ಕೆ ಸರಕಾರಕ್ಕೆ ಅಧಿಕಾರವಿಲ್ಲವೇ?

ಉತ್ತರ: ಸರಕಾರದ ಫೆ.೫ರ ಆದೇಶ ಕಾನೂನು ಬದ್ಧವಾಗಿದೆ, ಅಂತಹ ಆದೇಶ ಹೊರಡಿಸಲು ಸರಕಾರಕ್ಕೆ ಅಧಿಕಾರವೂ ಇದೆ. ಸರಕಾರ ಕೆಲವೊಂದು ನಿರ್ಬಂಧಗಳನ್ನು ಹೇರಬಹುದಾಗಿದೆ.

ಪ್ರಶ್ನೆ-೪: ಪ್ರಕರಣದಲ್ಲಿ ಹಿಜಾಬ್ ಧರಿಸಬಾರದೆಂದು ನಿರ್ದೇಶನ ನೀಡಿದ್ದ ಕಾಲೇಜು ಮತ್ತು ಸರ್ಕಾರದ ವಿರುದ್ಧ ಕ್ರಮ ಕೈಗೊಳ್ಳಬೇಕೇ ಅಥವಾ ಬಾರದೇ?

ಉತ್ತರ: ಪ್ರಕರಣದಲ್ಲಿ ಅರ್ಜಿ ದಾರರು ಎತ್ತಿರುವ ವಾದಾಂಶದಲ್ಲಿ ಯಾವುದೇ ಹುರುಳಿಲ್ಲ ಮತ್ತು ಸರ್ಕಾರ ವಸ್ತç ಸಂಹಿತೆ ಸಂಬAಧ ನೀಡಿರುವ ನಿರ್ದೇಶನ ಸರಿ ಇದೆ. ಹಾಗಾಗಿ ಅರ್ಜಿದಾರರ ವಾದದಲ್ಲಿ ಯಾವುದೇ ಮೆರಿಟ್ ಇಲ್ಲವಾದ್ದರಿಂದ ಈ ಅಂಶ ಪರಿಗಣಿಸಲಾಗದು.

ಎಜಿ ಪ್ರತಿಕ್ರಿಯೆ: ಹೈಕೋರ್ಟ್ ತೀರ್ಪು ಕುರಿತು ಪ್ರತಿಕ್ರಿಯಿಸಿರುವ ಅಡ್ವೊಕೇಟ್ ಜನರಲ್ ಪ್ರಭುಲಿಂಗ ನಾವದಗಿ, ಸರ್ಕಾರದ ಎಲ್ಲ ವಾದಗಳನ್ನು ಪುರಸ್ಕರಿಸಿ ನ್ಯಾಯಾಲಯ ವಿವಾದಕ್ಕೆ ಅಂತ್ಯ ಹಾಡಿದೆ. ಹಿಜಾಬ್ ಧಾರ್ಮಿಕ ಆಚರಣೆಯ ಭಾಗವಲ್ಲ, ಅದನ್ನು ಧರಿಸುವುದಕ್ಕೆ ನಿರ್ಬಂಧ ವಿಧಿಸಿರುವುದಕ್ಕೆ ಕಾನೂನಿನಲ್ಲಿ ಅವಕಾಶವಿದೆ, ವಸ್ತç ಸಂಹಿತೆ ನಿಗದಿಗೆ ಸರ್ಕಾರಕ್ಕೆ ಅಧಿಕಾರವಿದೆ ಎಂದು ನ್ಯಾಯಾಲಯ ತೀರ್ಪು ನೀಡಿದೆ ಎಂದರು.

ಸುಪ್ರೀAಕೋರ್ಟ್ ಹಿರಿಯ ವಕೀಲರಾದ ಕೊಡಗಿನ ಮೇರಿಯಂಡ ಸಂಜನ್ ಪೂವಯ್ಯ ಅವರು, ಉಡುಪಿಯ ಕಾಲೇಜೊಂದರ ಪರವಾಗಿ ವಾದ ನಡೆಸಿ ಹಿಜಾಬ್ ಧಾರಣೆ ಅತ್ಯಗತ್ಯವಲ್ಲ; ಸಮವಸ್ತçಧಾರಣೆ ಕಡ್ಡಾಯವಾಗಿದೆ ಎಂದು ವಾದಿಸಿದ್ದುದನ್ನು ಇಲ್ಲಿ ಸ್ಮರಿಸಬಹುದು.

ಸಿಎಂ ಬೊಮ್ಮಾಯಿ

ಹಿಜಾಬ್ ವಿವಾದ ಕುರಿತ ಕರ್ನಾಟಕ ಹೈಕೋರ್ಟ್ ಆದೇಶವನ್ನು ಎಲ್ಲ ವಿದ್ಯಾರ್ಥಿಗಳು ಮತ್ತು ಪೋಷಕರು ಗೌರವಿಸಬೇಕು, ಪಾಲಿಸಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಸುಪ್ರೀಂ ಕೋರ್ಟ್ ಮೊರೆ

ಹಿಜಾಬ್ ಇಸ್ಲಾಂ ಧರ್ಮದ ಅತ್ಯಗತ್ಯ ಭಾಗವಲ್ಲ, ಶಾಲಾ-ಕಾಲೇಜುಗಳಲ್ಲಿ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿಕೊಂಡು ಹೋಗಬಾರದು, ಸರ್ಕಾರದ ಆದೇಶ ಕಾನೂನುಬದ್ಧವಾಗಿದೆ ಎಂದು ಕರ್ನಾಟಕ ಹೈಕೋರ್ಟ್ ನೀಡಿರುವ ತೀರ್ಪನ್ನು ಪ್ರಶ್ನಿಸಿ ಮುಸ್ಲಿಂ ಸಂಘಟನೆಗಳು, ವಿದ್ಯಾರ್ಥಿನಿಯರು ಸುಪ್ರೀಂ ಕೋರ್ಟ್ ಮೊರೆ ಹೋಗಲು ನಿರ್ಧರಿಸಿವೆ.

ತಿದ್ದುಪಡಿ: ಬಿ.ಸಿ. ನಾಗೇಶ್

ಶಾಲೆ - ಕಾಲೇಜುಗಳಲ್ಲಿ ಹಿಜಾಬ್ ನಿಷೇಧ ಮಾಡಿದ ರಾಜ್ಯ ಸರ್ಕಾರದ ಕ್ರಮವನ್ನು ಹೈಕೋರ್ಟ್ ತೀರ್ಪು ಎತ್ತಿ ಹಿಡಿದಿದೆ. ಹಿಜಾಬ್ ಅನ್ನುವುದು ಇಸ್ಲಾಂ ಧರ್ಮದ ಅತ್ಯಗತ್ಯ ಭಾಗವಲ್ಲ ಎಂದು ಹೈಕೋರ್ಟ್ ಸ್ಪಷ್ಟಪಡಿಸಿದೆ. ಹೈಕೋರ್ಟ್ ತೀರ್ಪನ್ನು ನಾವು ಸ್ವಾಗತಿಸುತ್ತೇವೆ ಎಂದು ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಹೇಳಿದ್ದಾರೆ.

ಸಮವಸ್ತç ವಿಚಾರದಲ್ಲಿ ಹೈಕೋರ್ಟ್ ಸ್ಪಷ್ಟತೆ ನೀಡಿದೆ. ಶಿಕ್ಷಣ ನೀತಿಯಲ್ಲಿ ಸಮವಸ್ತç ಕುರಿತು ಇದ್ದಂತಹ ಗೊಂದಲಗಳನ್ನು ಈ ತೀರ್ಪಿನ ಆಧಾರದ ಮೇಲೆ ತಿದ್ದುಪಡಿ ಮಾಡುವ ಮೂಲಕ ಸರಿಪಡಿಸಲಾಗುವುದು ಎಂದು ಬಿ.ಸಿ. ನಾಗೇಶ್ ಹೇಳಿದರು.

ಹÀಕ್ಕನ್ನು ಎತ್ತಿಹಿಡಿದಿದೆ-ಗೃಹ ಸಚಿವರು: ಹೆಣ್ಣುಮಕ್ಕಳಿಗೆ ಸಿಗಬೇಕಾದ ಶಿಕ್ಷಣವೆಂಬ ಮೂಲಭೂತ ಹಕ್ಕನ್ನು ಹಿಜಾಬ್ ವಿವಾದ ಕುರಿತು ಇಂದು ಹೈಕೋರ್ಟ್ ನೀಡಿರುವ ತೀರ್ಪು ಎತ್ತಿಹಿಡಿದಿದೆ. ಐತಿಹಾಸಿಕ ತೀರ್ಮಾನ ವನ್ನು ಹೈಕೋರ್ಟ್ ನೀಡಿದೆ. ಸರ್ಕಾರ ರೂಪಿಸಿದ ನಿಯಮದ ಪರವಾಗಿ ತೀರ್ಪು ಬಂದಿದೆ. ಹೆಣ್ಣು ಮಕ್ಕಳ ಶಿಕ್ಷಣ ಪಡೆಯುವ ಹಕ್ಕನ್ನು ಕೋರ್ಟ್ ಎತ್ತಿ ಹಿಡಿದಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.

ಯಾವುದೇ ಧರ್ಮದ ಮತಾಂಧತೆ ಬೆಳೆಸಿಕೊಳ್ಳದೆ ಶಾಲೆಗಳಲ್ಲಿ ನಾವು ಅಣ್ಣ ತಮ್ಮಂದಿರು ಅಕ್ಕ ತಂಗಿಯರು ಹಾಗೂ ವಿಶೇಷವಾಗಿ ಭಾರತ ಮಾತೆಯ ಮಕ್ಕಳು ಎಂದು ಸಂಸ್ಕಾರದಿAದಿರಬೇಕು ಎಂದು ಹೇಳಿದ್ದಾರೆ.

ವಾದ - ವಿವಾದ

ಪರ್ದಾ ಅಥವಾ ಬುರ್ಖಾ ಕಡ್ಡಾಯವಲ್ಲ. ಆದರೆ ತಲೆ ಸ್ಕಾರ್ಫ್ ಅಥವಾ ಹಿಜಾಬ್ ಇಸ್ಲಾಮಿನಲ್ಲಿ ಅತ್ಯಗತ್ಯ ಭಾಗವಾಗಿದೆ ಮತ್ತು ಇಸ್ಲಾಮಿಕ್ ಶ್ಲೋಕಗಳು ಮತ್ತು ಧರ್ಮಗ್ರಂಥಗಳ ಮೂಲಕ ಕೇರಳ ಹೈಕೋರ್ಟ್ ಮತ್ತು ಮದ್ರಾಸ್ ಹೈಕೋರ್ಟ್ನ ಎರಡು ತೀರ್ಪುಗಳನ್ನು ಉಲ್ಲೇಖಿಸಿ ಅರ್ಜಿದಾರರ ವಕೀಲರುಗಳು ವಾದ ಮಂಡಿಸಿದ್ದರು.

ಅದಕ್ಕೆ ಪ್ರತಿಯಾಗಿ ರಾಜ್ಯ ಸರ್ಕಾರಿ ಪರ, ಹಿಜಾಬ್ ಅತ್ಯಗತ್ಯ ಧಾರ್ಮಿಕ ಆಚರಣೆಯಲ್ಲ. ಸಂವಿಧಾನದ ೨೫ ನೇ ವಿಧಿಯಡಿಯಲ್ಲಿ ಹಿಜಾಬ್ ಧರಿಸುವುದು ಅತ್ಯಗತ್ಯ ಧಾರ್ಮಿಕ ಆಚರಣೆಯಲ್ಲ ಎಂಬ ವಾದಗಳಿಗೆ ಬೆಂಬಲವಾಗಿ ಶಿರೂರು ಮಠದಿಂದ ಪ್ರಾರಂಭಿಸಿ ಶಬರಿಮಲೆ ಪ್ರಕರಣಗಳವರೆಗೆ ಹಲವಾರು ಸುಪ್ರೀಂ ಕೋರ್ಟನ್ನು ತೀರ್ಪುಗಳನ್ನು ಉಲ್ಲೇಖಿಸಿ, ಅರ್ಜಿದಾರರು-ವಿದ್ಯಾರ್ಥಿಗಳು ತಮ್ಮ ಹಕ್ಕನ್ನು ದೃಢೀಕರಿಸುವಂತೆ ಕೇಳಿ ರಾಜ್ಯ ಸರ್ಕಾರ ವಾದಿಸಿತು.