ಗೋಣಿಕೊಪ್ಪಲು, ಮಾ.೧೪: ನಿರಂತರ ಹುಲಿ ದಾಳಿಯಿಂದ ಜಾನುವಾರುಗಳು ಬಲಿಯಾಗುತ್ತಿದ್ದು, ಈ ನಿಟ್ಟಿನಲ್ಲಿ ಸೂಕ್ತ ಕ್ರಮಕ್ಕೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ಕೊಡಗು ಜಿಲ್ಲಾ ಘಟಕದ ಜಿಲ್ಲಾಧ್ಯಕ್ಷ ಕಾಡ್ಯಮಾಡ ಮನುಸೋಮಯ್ಯ ಮುಂದಾಳತ್ವದಲ್ಲಿ ಪ್ರತಿಭಟನೆ ನಡೆಯಿತು.

ದ.ಕೊಡಗಿನ ವಿವಿಧ ಭಾಗಗಳಿಂದ ಆಗಮಿಸಿದ ರೈತ ಸಂಘದ ಸದಸ್ಯರು ತಾಲೂಕು ಕೇಂದ್ರ ಪೊನ್ನಂಪೇಟೆಯಲ್ಲಿ ಜಮಾವಣೆ ಗೊಂಡರು.

ಸ್ಥಳೀಯ ಗಾಂಧಿ ಪ್ರತಿಮೆ ಬಳಿಯಿಂದ ಮೆರವಣಿಗೆಯಲ್ಲಿ ಸಾಗಿ ಬಂದ ಪ್ರತಿಭಟನಾಕಾರರು ಮುಖ್ಯ ರಸ್ತೆಯಲ್ಲಿ ಮೆರವಣಿಗೆ ನಡೆಸಿ ಅರಣ್ಯ ಇಲಾಖೆಯ ಕಚೇರಿಯ ಮುಂದೆ ಪ್ರತಿಭಟನೆ ಆರಂಭಿಸಿದರು.

ನAತರ ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಬೇಕು, ಹುಲಿಯ ಸೆರೆಗೆ ತಕ್ಷಣವೇ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಸ್ಥಳಕ್ಕೆ ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗಳು ಆಗಮಿಸುವುದು ತಡವಾದ ಕಾರಣ ಕಚೇರಿಯ ಮುಂಭಾಗದ ಮುಖ್ಯ ರಸ್ತೆಯಲ್ಲಿಯೇ ಕುಳಿತ ರೈತ ಸಂಘದ ಸದಸ್ಯರು ಕೆಲಕಾಲ ರಸ್ತೆ ತಡೆ ನಡೆಸಿದರು.

ಈ ವೇಳೆ ಕೆಲಕಾಲ ವಾಹನ ಸಂಚಾರಕ್ಕೆ ಸಮಸ್ಯೆ ಎದುರಾಯಿತು. ಮಧ್ಯ ಪ್ರವೇಶಿಸಿದ ಗೋಣಿಕೊಪ್ಪ ವೃತ್ತ ನಿರೀಕ್ಷಕ ಜಯರಾಂ ರೈತ ಸಂಘದ ಅಧ್ಯಕ್ಷರ ಮನವೊಲಿಸಿ ರಸ್ತೆ ತಡೆ ಕೈಬಿಡುವಂತೆ ಮಾಡುವಲ್ಲಿ ಯಶಸ್ವಿಯಾದರು.

ನಂತರ ಕಚೇರಿಯ ಮುಂದೆ ಪ್ರತಿಭಟನೆ ಮುಂದುವರೆಯಿತು. ಸುಡು ಬಿಸಿಲನ್ನು ಲೆಕ್ಕಿಸದ ಪ್ರತಿಭಟನಾಕಾರರು ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸದ ಹೊರತು ಪ್ರತಿಭಟನೆ ಹಿಂಪಡೆಯುವ ಪ್ರಶ್ನೆಯೇ ಇಲ್ಲ ಎಂದು ಪಟ್ಟು ಹಿಡಿದರು.

ಪ್ರತಿಭಟನಾ ಸ್ಥಳಕ್ಕೆ ಅರಣ್ಯ ಇಲಾಖೆಯ ತಿತಿಮತಿ ವಿಭಾಗದ ಎಸಿಎಫ್ ಉತ್ತಯ್ಯ

(ಮೊದಲ ಪುಟದಿಂದ) ಆಗಮಿಸಿ ರೈತ ಮುಖಂಡರೊAದಿಗೆ ಚರ್ಚೆ ಆರಂಭಿಸಿ, ಹುಲಿಯ ಸೆರೆಗೆ ತಕ್ಷಣವೇ ಕ್ರಮ ಕೈಗೊಳ್ಳುವ ಭರವಸೆ ನೀಡಿದರು.

ಆದರೆ ಇವರ ಭರವಸೆಗೆ ಮಣಿಯದ ಹೋರಾಟಗಾರರು ಹಿರಿಯ ಅಧಿಕಾರಿಗಳನ್ನು ಸ್ಥಳಕ್ಕೆ ಕರೆಸುವಂತೆ ಪಟ್ಟು ಹಿಡಿದರು.

ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ರೈತ ಸಂಘದ ಜಿಲ್ಲಾ ಅಧ್ಯಕ್ಷ ಕಾಡ್ಯಮಾಡ ಮನುಸೋಮಯ್ಯ ದ.ಕೊಡಗಿನಲ್ಲಿ ಹಲವಾರು ಸಮಯದಿಂದ ಹುಲಿಯ ದಾಳಿ ನಡೆಯುತ್ತಿದ್ದರೂ ಅರಣ್ಯ ಇಲಾಖೆಯ ಅಧಿಕಾರಿಗಳು ಈ ಬಗ್ಗೆ ಕ್ರಮ ಕೈಗೊಳ್ಳಲು ಹಿಂದೇಟು ಹಾಕುತ್ತಿದ್ದಾರೆ ಎಂದು ಆರೋಪಿಸಿದ ಅವರು, ರೈತರ ಜಾನುವಾರುಗಳಿಗೆ ರಕ್ಷಣೆ ಇಲ್ಲದಂತಾಗಿದೆ. ಇಲಾಖೆ ನೀಡುವ ಪರಿಹಾರ ಏನೇನೂ ಸಾಲುತ್ತಿಲ್ಲ. ಈಚೂರು, ಕುಂದ ಭಾಗದಲ್ಲಿ ನಾಲ್ಕು ದಿನಗಳಲ್ಲಿ ನಾಲ್ಕು ಹಸುಗಳು ಹುಲಿಯ ಪಾಲಾಗಿದೆ. ಆದರೂ ಇಲಾಖೆ ಈ ಬಗ್ಗೆ ಕ್ರಮಕ್ಕೆ ಮುಂದಾಗದಿರುವುದು ಎಷ್ಟು ಸರಿ.? ಎಂದು ಎಸಿಎಫ್ ಉತ್ತಯ್ಯ ನವರನ್ನು ಪ್ರಶ್ನಿಸಿದರು.

ಎಸಿಎಫ್ ಉತ್ತಯ್ಯ ಮಾತನಾಡಿ, ಈಗಾಗಲೇ ಹುಲಿಯ ಸೆರೆಗೆ ಕ್ರಮ ಕೈಗೊಳ್ಳಲಾಗಿದೆ. ಆದರೆ, ಹುಲಿಯು ದಿನದಿಂದ ದಿನಕ್ಕೆ ತನ್ನ ಸ್ಥಳ ಬದಲಾವಣೆ ಮಾಡುತ್ತಿರುವುದರಿಂದ ಸೆರೆಗೆ ಸ್ವಲ್ಪ ಮಟ್ಟಿಗೆ ವಿಳಂಬವಾಗುತ್ತಿದೆ, ಇಂದಿನಿAದ ಹೆಚ್ಚಿನ ಸಿಬ್ಬಂದಿಗಳನ್ನು ನಿಯೋಜನೆ ಮಾಡುವ ಮೂಲಕ ಹುಲಿಯ ಸೆರೆಗೆ ಕ್ರಮ ಕೈಗೊಳ್ಳುವ ಭರವಸೆ ನೀಡಿದರು.

ಕುಂದ ಈಚೂರು ಸಂಚಾಲಕ ತೀತಿಮಾಡ ಶರಣು ಮಾತನಾಡಿ, ನಾಲ್ಕು ದಿನಗಳ ಹಿಂದೆ ಗ್ರಾಮದಲ್ಲಿ ಹುಲಿ ದಾಳಿ ನಡೆಸಿದ ವೇಳೆ ಗ್ರಾಮಸ್ಥರು ಪ್ರತಿಭಟನೆ ನಡೆಸಿ ಹುಲಿಯ ಸೆರೆಗೆ ಒತ್ತಾಯ ಮಾಡಲಾಗಿತ್ತು. ಇದೀಗ ದಿನಕ್ಕೊಂದು ಜಾನುವಾರು ಹುಲಿಯ ಪಾಲಾಗುತ್ತಿದೆ. ಈ ಬಗ್ಗೆ ಹಿರಿಯ ಅಧಿಕಾರಿಗಳ ಗಮನಕ್ಕೆ ತಂದರೂ ಉಡಾಫೆಯ ಮಾತನ್ನಾಡುತ್ತಿದ್ದಾರೆ ಎಂದು ಆರೋಪಿಸಿದರು. ಪ್ರತಿಭಟನೆಯನ್ನು ಉದ್ದೇಶಿಸಿ ಚೆಟ್ರುಮಾಡ ಸುಜಯ್ ಬೋಪಯ್ಯ, ಪುಚ್ಚಿಮಾಡ ಸುಭಾಷ್ ಸುಬ್ಬಯ್ಯ, ಆಲೆಮಾಡ ಮಂಜುನಾಥ್, ಮುಂತಾದ ಪ್ರಮುಖರು ಮಾತನಾಡಿದರು.

ಸಭೆಯಿಂದ ಡಿಎಫ್‌ಓ ಆಗಮನ..!

ಮುಂಜಾನೆಯಿAದಲೇ ನೂರಾರು ಸಂಖ್ಯೆಯಲ್ಲಿ ಜಮಾವಣೆಗೊಂಡಿದ್ದ ರೈತ ಸಂಘದ ಸದಸ್ಯರು ಪ್ರತಿಭಟನಾ ಸ್ಥಳಕ್ಕೆ ಡಿಎಫ್‌ಓ ಚಕ್ರಪಾಣಿ ಆಗಮಿಸುವಂತೆ ಪಟ್ಟು ಹಿಡಿದರು. ಈ ವೇಳೆ ಸ್ಥಳದಲ್ಲಿದ್ದ ಡಿವೈಎಸ್‌ಪಿ ಜಯಕುಮಾರ್ ಡಿಎಫ್‌ಓ ಅವರನ್ನು ದೂರವಾಣಿ ಮೂಲಕ ಸಂಪರ್ಕ ಮಾಡಿ ಆಗಮಿಸುವಂತೆ ತಿಳಿಸಿದ್ದರು.

ಜಿಲ್ಲಾ ಮಟ್ಟದ ಸಭೆಯಲ್ಲಿ ಇರುವ ಕಾರಣ ಬರಲು ಸಾಧ್ಯವಾಗದ ಬಗ್ಗೆ ವಿವರ ನೀಡಿದ್ದರು. ಆದರೆ ಪ್ರತಿಭಟನಾಕಾರರು ತಮ್ಮ ಪಟ್ಟು ಸಡಿಸಿರಲಿಲ್ಲ, ಅಂತಿಮವಾಗಿ ಸಭೆಯಿಂದ ಆಗಮಿಸಿದ ಡಿಎಫ್‌ಓ ಚಕ್ರಪಾಣಿ ರೈತ ಮುಖಂಡರಿAದ ಮನವಿಪತ್ರ ಸ್ವೀಕರಿಸಿ ಹುಲಿ ಸೆರೆಗೆ ತಕ್ಷಣವೇ ಕ್ರಮ ಕೈಗೊಳ್ಳುವ ಭರವಸೆ ನೀಡಿದರು. ನಂತರ ಪ್ರತಿಭಟನೆ ಹಿಂಪಡೆಯಲಾಯಿತು.

ಪ್ರತಿಭಟನೆಯಲ್ಲಿ ರೈತ ಸಂಘದ ಪದಾಧಿಕಾರಿಗಳಾದ ಚೊಟ್ಟೆಕಾಳಪಂಡ ಮನು, ಚೆಂಗುಲAಡ ಸೂರಜ್, ಚಟ್ಟಂಗಡ ಕಂಬ ಕಾರ್ಯಪ್ಪ, ಮೀದೇರಿರ ಕವಿತರಾಮು, ಪುಚ್ಚಿಮಾಡ ರಾಯ್ ಮಾದಪ್ಪ, ಮಂಡೇಪAಡ ಪ್ರವೀಣ್, ನಲ್ಲೂರು ವಿಭಾಗದ ಸಂಚಾಲಕ ತೀತ್ರಮಾಡ ರಾಜು, ಚೆಪ್ಪುಡೀರ ರಂಜನ್ ಮುಂತಾದವರು ಉಪಸ್ಥಿತರಿದ್ದರು.

ಡಿವೈಎಸ್‌ಪಿ ಜಯಕುಮಾರ್ ಮುಂದಾಳತ್ವದಲ್ಲಿ ಕುಟ್ಟ, ಗೋಣಿಕೊಪ್ಪ ಹಾಗೂ ವೀರಾಜಪೇಟೆ ವೃತ್ತ ನಿರೀಕ್ಷಕರಾದ ಮಂಜಪ್ಪ, ಜಯರಾಂ ಹಾಗೂ ಶ್ರೀಧರ್, ಪೋಲಿಸ್ ಸಿಬ್ಬಂದಿಗಳು ಬಿಗಿ ಬಂದೋಬಸ್ತ್ ಕೈಗೊಂಡಿದ್ದರು.

- ಹೆಚ್.ಕೆ.ಜಗದೀಶ್