*ಗೋಣಿಕೊಪ್ಪ, ಮಾ. ೧೪: ಕ್ರೀಡೆಯ ಜೊತೆಯಲ್ಲಿ ಓದಿನ ಬಗ್ಗೆಯೂ ಆಸಕ್ತಿ ಬೆಳೆಸಿಕೊಂಡು ಉತ್ತಮ ಭವಿಷ್ಯ ರೂಪಿಸಿಕೊಳ್ಳುವ ಗುರಿಯನ್ನು ವಿದ್ಯಾರ್ಥಿಗಳು ಹೊಂದಿರಬೇಕು ಎಂದು ಶಾಸಕ ಕೆ.ಜಿ. ಬೋಪಯ್ಯ ಕರೆ ನೀಡಿದರು.
ಪೊನ್ನಂಪೇಟೆ ಕ್ರೀಡಾ ವಸತಿ ನಿಲಯದ ವಿದ್ಯಾರ್ಥಿಗಳಿಗೆ ಕ್ರೀಡಾ ಪರಿಕರಗಳನ್ನು ವಿತರಿಸಿ ಕ್ರೀಡೆ ಮನೋಲ್ಲಾಸದ ಜೊತೆಗೆ ವ್ಯಕ್ತಿತ್ವವನ್ನು ರೂಪಿಸುತ್ತದೆ ಎಂದರು.
ವಸತಿ ನಿಲಯದ ಸುಮಾರು ೬೦ ವಿದ್ಯಾರ್ಥಿಗಳಿಗೆ ಕ್ರೀಡಾ ಸಾಮಗ್ರಿಗಳ ಕಿಟ್ಟ್ಗಳನ್ನು ವಿತರಿಸಿ ವಿದ್ಯಾರ್ಥಿಗಳ ವಿಶ್ರಾಂತಿ ಕೊಠಡಿ, ಅಡುಗೆ ಕೋಣೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ವಿಧಾನಪರಿಷತ್ ಸದಸ್ಯ ಮಂಡೇಪAಡ ಸುಜಾ ಕುಶಾಲಪ್ಪ ಅವರು ವಿದ್ಯಾರ್ಥಿ ಕ್ರೀಡೆಯಲ್ಲಿ ದೈಹಿಕ ಸಾಮಾರ್ಥ್ಯ ಹೆಚ್ಚಿಸಲು ಗುಣಮಟ್ಟದ ಆಹಾರವನ್ನು ನೀಡಬೇಕು. ಉದಾಸೀನತೆ ತೋರಿದರೆ ಅಧಿಕಾರಿಯ ವಿರುದ್ಧ ಶಿಸ್ತು ಕ್ರಮಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.
ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಒದಗಿಸಿದ ಎಲ್.ಇ.ಡಿ. ಟಿವಿ ಹಾಗೂ ವಾಷಿಂಗ್ ಮೆಷಿನ್ಗಳನ್ನು ಬಳಸಲು ವಿದ್ಯಾರ್ಥಿಗಳಿಗೆ ಈ ಸಂದರ್ಭ ಅನುವು ಮಾಡಿಕೊಟ್ಟರು.
ಬಗರ್ಹುಕುಂ ಸಾಗುವಳಿ ಸಕ್ರಮೀಕರಣ ಸಮಿತಿ ತಾಲೂಕು ಅಧ್ಯಕ್ಷ ಕಾಡ್ಯಮಾಡ ಗಿರೀಶ್ಗಣಪತಿ, ಪೊನ್ನಂಪೇಟೆ ಜೂನಿಯರ್ ಕಾಲೇಜು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಮಂಡಚAಡ ದಿನೇಶ್, ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಗುರುಸ್ವಾಮಿ, ಗೋಣಿಕೊಪ್ಪ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ನಿಕಟಪೂರ್ವ ಅಧ್ಯಕ್ಷ ಮಾಚಿಮಂಡ ಸುವಿನ್ ಗಣಪತಿ, ತರಬೇತುದಾರ ಕೆ.ಎಂ. ಸುಬ್ಬಯ್ಯ ಹಾಗೂ ನಿಲಯದ ಮೇಲ್ವಿಚಾರಕರು ಮತ್ತು ಸಿಬ್ಬಂದಿಗಳು ಹಾಜರಿದ್ದರು.