ಮಡಿಕೇರಿ, ಮಾ. ೧೫: ಮಡಿಕೇರಿ ನಗರ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ನಗರದಲ್ಲಿ ನಡೆಯಿತು. ವಿವಿಧ ಪಕ್ಷಗಳ ಕಾರ್ಯಕರ್ತರು ಈ ಸಂದರ್ಭ ಕಾಂಗ್ರೆಸ್‌ಗೆ ಸೇರ್ಪಡೆಗೊಂಡರು.
ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಮಾಜಿ ಸಚಿವ ಹಾಗೂ ಪಕ್ಷದ ಮುಖಂಡ ಬಿ.ಎ. ಜೀವಿಜಯ ಪಕ್ಷ ಸಂಘಟನೆಯ ಮೂಲಕ ೨೦೨೩ ರ ವಿಧಾನಸಭಾ ಚುನಾವಣೆಯನ್ನು ಸಮರ್ಥವಾಗಿ ಎದುರಿಸುವಂತೆ ಕರೆ ನೀಡಿದರು. ಪದಾಧಿಕಾರಿಗಳು ತಮ್ಮ ಜವಾಬ್ದಾರಿ ಅರಿತು ಪಕ್ಷದ ಬಲವರ್ಧನೆಯಲ್ಲಿ ಸಕ್ರಿಯರಾಗಬೇಕೆಂದರು.
ಕೆಪಿಸಿಸಿಯ ಮಾಧ್ಯಮ ಸಂವಹನ ವಕ್ತಾರ ಟಿ.ಪಿ. ರಮೇಶ್ ಮಾತನಾಡಿ, ಮುಂಬರುವ ಜಿ.ಪಂ., ತಾ.ಪಂ. ಮತ್ತು ವಿಧಾನಸಭಾ ಚುನಾವಣೆಗೆ ಈಗಿನಿಂದಲೇ ತಯಾರಿ ಮಾಡಿಕೊಳ್ಳುವಂತೆ ಸಲಹೆ ನೀಡಿದರು.
ಬೂತ್ ಮಟ್ಟದಿಂದ ಪಕ್ಷದ ಸಂಘಟನೆ ಚುರುಕುಗೊಳ್ಳಬೇಕು ಮತ್ತು ಪದಾಧಿಕಾರಿಗಳು ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕಾರ್ಯ ನಿರ್ವಹಿಸಬೇಕು ಎಂದರು.
ಅಲ್ಪಸಂಖ್ಯಾತರ ಘಟಕದ ಜಿಲ್ಲಾಧ್ಯಕ್ಷ ಎಂ.ಎ. ಉಸ್ಮಾನ್ ಮಾತನಾಡಿ ಕಾಂಗ್ರೆಸ್ ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರಲು ಎಲ್ಲರೂ ಒಗ್ಗಟ್ಟಿನ ಪ್ರದರ್ಶನ ಮಾಡಬೇಕೆಂದು ಕರೆ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅಲ್ಪಸಂಖ್ಯಾತರ ಘಟಕದ ನಗರಾಧ್ಯಕ್ಷ ಕೆ.ಜಿ. ಪೀಟರ್ ಮಾತನಾಡಿದರು. ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಕೆ.ಎಂ. ಲೋಕೇಶ್ ಹಾಗೂ ಜಿ.ಪಂ. ಮಾಜಿ ಸದಸ್ಯೆ ಕೆ.ಪಿ. ಚಂದ್ರಕಲಾ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದರು. ಯುವ ಮುಖಂಡ ಮಂಥರ್ ಗೌಡ, ಯುವ ಘಟಕದ ಅಧ್ಯಕ್ಷ ಮಿಥುನ್ ಗೌಡ, ಮಹಿಳಾ ಘಟಕದ ಅಧ್ಯಕ್ಷೆ ಸುರಯ್ಯ ಅಬ್ರಾರ್, ನಗರಾಧ್ಯಕ್ಷ ಬಿ.ವೈ. ರಾಜೇಶ್, ಕೆಪಿಸಿಸಿ ಉಸ್ತುವಾರಿ ಟಿ.ಎಂ. ಶಾಹಿದ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮುನೀರ್ ಅಹಮ್ಮದ್, ರಾಜೀವ್ ಗಾಂಧಿ ಪಂಚಾಯತ್ ಸಂಘಟನೆಯ ಅಧ್ಯಕ್ಷ ತೆನ್ನೀರ ಮೈನಾ, ಸೇವಾದಳದ ಜಿಲ್ಲಾಧ್ಯಕ್ಷ ಕಾನೆಹಿತ್ಲು ಮೊಣ್ಣಪ್ಪ, ಸಾಮಾಜಿಕ ಜಾಲತಾಣದ ಅಧ್ಯಕ್ಷ ಹೊಸೂರು ಸೂರಜ್, ಕಾರ್ಯದರ್ಶಿ ರೌಫ್ ಮತ್ತಿತರ ಪದಾಧಿಕಾರಿಗಳು ಉಪಸ್ಥಿತರಿದ್ದರು.