ಮಡಿಕೇರಿ, ಮಾ. ೧೪: ಅಂರ್ರಾಷ್ಟಿçÃಯ ಮಹಿಳಾ ದಿನಾಚರಣೆಯ ಸಂದರ್ಭದಲ್ಲಿ ಮಹಿಳೆಯರಿಗಾಗಿ ಕಾಂಗ್ರೆಸ್ ಮಹಿಳಾ ಘಟಕದಿಂದ ವಿನೂತನ ಸ್ಪರ್ಧಾ ಕಾರ್ಯಕ್ರಮವೊಂದನ್ನು ಆಯೋಜಿಸಲಾಗಿದೆ ಎಂದು ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಪುಷ್ಪಾ ಅಮರ್ನಾಥ್ ತಿಳಿಸಿದ್ದಾರೆ.
ಪತ್ರಿಕಾಭವನದಲ್ಲಿ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಅವರು, ದೇಶದ ಅಭಿವೃದ್ಧಿಗಾಗಿ ಮಹಿಳೆಯರಿಗೆ ರಾಜಕೀಯ ಶಕ್ತಿ ನೀಡಬೇಕಿದೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮಹಿಳೆಯರಿಗೆ ರಾಜಕೀಯ ಶಕ್ತಿ ತುಂಬಲು ಮಹಿಳಾ ಮೀಸಲಾತಿ ತರುವುದಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಈಗಾಗಲೇ ಘೋಷಿಸಿದ್ದಾರೆ. ಮಹಿಳೆಯರಿಗೆ ರಾಜಕೀಯ ಮೀಸಲಾತಿ ನೀಡುವುದಾಗಿ ನಂಬಿಸಿ ಅಧಿಕಾರಕ್ಕೆ ಬಂದÀ ಪ್ರಧಾನಿ ನರೇಂದ್ರ ಮೋದಿಯವರು ತಮ್ಮ ಭರವಸೆಯನ್ನು ಈಡೇರಿಸದೆ ವಂಚಿಸಿದ್ದಾರೆ ಎಂದು ಪುಷ್ಪಾ ಅಮರ್ನಾಥ್ ದೂರಿದರು. ಮಹಿಳೆಯರನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಮಹಿಳಾ ಕಾಂಗ್ರೆಸ್ ನೂತನ ಸ್ಪರ್ಧಾ ಕಾರ್ಯಕ್ರಮವೊಂದನ್ನು ಜಾರಿಗೊಳಿಸಿದೆ. ಅದೇನೆಂದರೆ ೧೮ ರಿಂದ ೩೫ ವರ್ಷದೊಳಗಿನ ಮಹಿಳೆಯರು ಹಾಗೂ ೩೫ ವರ್ಷ ಮೇಲ್ಪಟ್ಟ ಮಹಿಳೆಯರು ಯಾವುದೇ ಕ್ಷೇತ್ರದಲ್ಲಿ ಅನುಭವಿಸಿದ ಸವಾಲುಗಳನ್ನು ಹಾಗೂ ಅವುಗಳನ್ನು ಮೆಟ್ಟಿ ನಿಂತು ಸಾಧನೆ ಮಾಡಿದ ತಮ್ಮ ಯಶೋಗಾಥೆಯ ಬಗ್ಗೆ ೩ ನಿಮಿಷ ವೀಡಿಯೋ ಮಾಡಿ ೯೩೫೫೪೧೮೮೯೭ ದೂರವಾಣಿಗೆ ವಾಟ್ಸಾಪ್ ಅಥವಾ ಟhಟshಛಿoಟಿಣesಣ@gmಚಿiಟ.ಛಿomಗೆ ಇಮೇಲ್ ಮೂಲಕ ಏ. ೮ರ ಒಳಗಾಗಿ ಕಳುಹಿಸಬೇಕು. ಉತ್ತಮ ವೀಡಿಯೋ ವನ್ನು ಆಯ್ಕೆ ಮಾಡಿ ಪ್ರಥಮ, ದ್ವಿತೀಯ, ತೃತೀಯ ಬಹುಮಾನ ನೀಡಲಾಗುತ್ತದೆ. ಕಾಂಗ್ರೆಸ್ ಮಹಿಳಾ ಘಟಕದ ಪದಾಧಿಕಾರಿಗಳನ್ನು ಹೊರತುಪಡಿಸಿ ಉಳಿದ ಮಹಿಳೆಯರು ಮುಕ್ತವಾಗಿ ರಾಜಕೀಯ ರಹಿತವಾಗಿ ಈ ಸ್ಪರ್ಧಾ ಕಾರ್ಯಕ್ರಮದಲ್ಲಿ ಭಾವಹಿಸಬಹು ದೆಂದು ಪುಷ್ಪಾ ಅಮರ್ನಾಥ್ ತಿಳಿಸಿದರು.
ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷೆ ಕೆ.ಪಿ. ಚಂದ್ರಕಲಾ ಮಾತನಾಡಿ, ಮಹಿಳೆಯರು ರಾಜಕೀಯದಲ್ಲಿ ಬೆಳೆಯಲು ಕಾಂಗ್ರೆಸ್ ಪಕ್ಷ ಸಾಕಷ್ಟು ಅವಕಾಶ ನೀಡಿದೆ. ಬಿಜೆಪಿ ಮಹಿಳೆಯರನ್ನು ಕಡೆಗಣಿಸಿದೆ ಎಂದು ಆರೋಪಿಸಿದರು. ಗೋಷ್ಠಿಯಲ್ಲಿ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಸುರಯ್ಯ ಅಬ್ರಾರ್, ನಾಪೋಕ್ಲು ಬ್ಲಾಕ್ ಅಧ್ಯಕ್ಷೆ ರಾಜೇಶ್ವರಿ, ಪೊನ್ನಂಪೇಟೆ ಬ್ಲಾಕ್ ಅಧ್ಯಕ್ಷೆ ಕೋಳೆರ ಭಾರತಿ ಉಪಸ್ಥಿತರಿದ್ದರು.