ಕುಶಾಲನಗರ, ಮಾ. ೧೫: ಕುಶಾಲನಗರ ಗೌಡ ಸಮಾಜ ಮತ್ತು ಸ್ಥಳೀಯ ಲಯನ್ಸ್ ಕ್ಲಬ್ ಆಶ್ರಯದಲ್ಲಿ ತಾ. ೧೭ ರಂದು ಕುಶಾಲನಗರ ಗೌಡ ಸಮಾಜ ಕಲ್ಯಾಣ ಮಂಟಪದಲ್ಲಿ ರಕ್ತದಾನ ಶಿಬಿರ ಏರ್ಪಡಿಸಲಾಗಿದೆ.
ಚಿತ್ರನಟ ದಿ. ಪುನೀತ್ ರಾಜಕುಮಾರ್ ಹುಟ್ಟುಹಬ್ಬ ಪ್ರಯುಕ್ತ ಶಿಬಿರ ಏರ್ಪಡಿಸಲಾಗಿದೆ. ಅಂದು ಬೆಳಿಗ್ಗೆ ೧೦ ಗಂಟೆಯಿAದ ಶಿಬಿರ ಪ್ರಾರಂಭಗೊಳ್ಳಲಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಶಿಬಿರದಲ್ಲಿ ಪಾಲ್ಗೊಳ್ಳುವಂತೆ ಲಯನ್ಸ್ ಕ್ಲಬ್ ಪ್ರಕಟಣೆ ಕೋರಿದೆ.