ಸಾಂಸ್ಕೃತಿಕ ಉತ್ಸವ

ಕೂಡಿಗೆ, ಮಾ. ೧೫: ಕೂಡಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುದುಗೂರು ಕಾಳಿದೇವರ ಹೊಸೂರು ಗ್ರಾಮದ ಶ್ರೀ ಕಾಳಿಕಾಂಬ ಯುವಕ ಸಂಘದ ವತಿಯಿಂದ ತಾಲೂಕು ಮಟ್ಟದ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಉತ್ಸವ ತಾ. ೧೯ ಮತ್ತು ೨೦ ರಂದು ಹುದುಗೂರು ಗ್ರಾಮದ ಕ್ರೀಡಾಂಗಣದಲ್ಲಿ ನಡೆಯಲಿದೆ.

ವಾಲಿಬಾಲ್, ಕಬಡ್ಡಿ ಮತ್ತು ಗ್ರಾಮದ ಮಹಿಳೆಯರಿಗೆ ಮಕ್ಕಳಿಗೆ ಹಾಗೂ ಗ್ರಾಮದ ಹಿರಿಯರಿಗೆ ವಿವಿಧ ಆಟೋಟ ಸ್ಪರ್ಧೆಗಳು ನಡೆÀಯಲಿವೆ. ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ ಎಂದು ಕಾಳಿಕಾಂಬ ಯುವಕ ಸಂಘದ ಅಧ್ಯಕ್ಷರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.