ಮಡಿಕೇರಿ, ಫೆ ೧೫: ವೀರಾಜಪೇಟೆ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ನೂತನ ಅಧ್ಯಕ್ಷ ಡಿ.ರಾಜೇಶ್ ಪದ್ಮನಾಭ ಮತ್ತು ಕಾರ್ಯಕಾರಿ ಸಮಿತಿಯ ಅಧಿಕಾರ ಸ್ವೀಕಾರ ಸಮಾರಂಭವು ತಾ. ೧೬ (ಇಂದು) ಸಂಜೆ ೪ ವೀರಾಜಪೇಟೆಯ ಪುರಭವನದಲ್ಲಿ ನಡೆಯಲಿದೆ.

ಸಭೆಯ ಅಧ್ಯಕ್ಷತೆಯನ್ನು ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಎಂ.ಪಿ.ಕೇಶವ ಕಾಮತ್ ವಹಿಸಲಿದ್ದಾರೆ. ಕಾರ್ಯಕ್ರಮವನ್ನು ಅರಮೇರಿ ಕಳಂಚೇರಿ ಮಠದ ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮೀಜಿಯವರು ಉದ್ಘಾಟಿಸಲಿದ್ದಾರೆ. ನೂತನ ಪದಾಧಿಕಾರಿಗಳಿಗೆ ಪ್ರತಿಜ್ಞಾವಿಧಿಯನ್ನು ಜಿಲ್ಲಾ ಕಸಾಪ ಮಾಜಿ ಅಧ್ಯಕ್ಷ ಟಿ.ಪಿ. ರಮೇಶ್ ಬೋಧಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ವೀರಾಜಪೇಟೆ ತಾಲೂಕು ತಹಶೀಲ್ದಾರ್ ಆರ್. ಯೋಗಾನಂದ, ವೀರಾಜಪೇಟೆ ಕೊಡವ ಸಮಾಜದ ಅಧ್ಯಕ್ಷ ವಾಂಚಿರ ನಾಣಯ್ಯ, ಪಿ.ರೇವತಿ ರಮೇಶ್, ಜಿಲ್ಲಾ ಗೌರವ ಕೋಶಾಧಿಕಾರಿ ಎಂ.ಬಿ.ಜೋಯಪ್ಪ. ಪೊನ್ನಂಪೇಟೆ ತಾಲೂಕು ನಿಕಟಪೂರ್ವ ಅಧ್ಯಕ್ಷ ಮುಲ್ಲೇಂಗಡ ಮಧೋಶ್ ಪೂವಯ್ಯ , ಮಡಿಕೇರಿ ತಾಲೂಕು ಅಧ್ಯಕ್ಷ ಅಂಬೆಕಲ್ ನವೀನ್, ಸೋಮವಾರಪೇಟೆ ತಾಲೂಕು ಅಧ್ಯಕ್ಷ ಎಸ್.ಡಿ ವಿಜೇತ್, ಪೊನ್ನಂಪೇಟೆ ತಾಲೂಕು ಅಧ್ಯಕ್ಷ ಕೋಳೆರ ದಯಾ ಚಂಗಪ್ಪ , ಕುಶಾಲನಗರ ತಾಲೂಕು ಅಧ್ಯಕ್ಷ ಕೆ.ಎಸ್ ಮೂರ್ತಿ ಭಾಗವಹಿಸಲಿದ್ದಾರೆ ಎಂದು ಕೊಡಗು ಜಿಲ್ಲಾ ಕಸಾಪ ಗೌರವ ಕಾರ್ಯದರ್ಶಿ ಎಸ್.ಐ. ಮುನೀರ್ ಅಹಮದ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.