ಮಡಿಕೇರಿ, ಮಾ. ೧೬: ಕೋವಿಡ್ ನಿಯಂತ್ರಣ ಸಂಬAಧ ೧೨ ರಿಂದ ೧೪ ವರ್ಷ ವಯೋಮಾನದ ಮಕ್ಕಳಿಗೆ ಕೋವಿಡ್ ಲಸಿಕೆ ನೀಡುವ ಕಾರ್ಯಕ್ರಮಕ್ಕೆ ನಗರದ ಜಿಲ್ಲಾಸ್ಪತ್ರೆಯ ಮಹಿಳಾ ಮತ್ತು ಮಕ್ಕಳ ವಾರ್ಡಿನಲ್ಲಿ ಬುಧವಾರ ಚಾಲನೆ ದೊರೆಯಿತು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆ ಸಹಯೋಗದಲ್ಲಿ ನಡೆದ ಲಸಿಕಾ ಕಾರ್ಯಕ್ರಮದಲ್ಲಿ ಮಾತನಾಡಿದ ನಗರಸಭೆ ಅಧ್ಯಕ್ಷೆ ಅನಿತಾ ಪೂವಯ್ಯ ಅವರು ಕೋವಿಡ್ ಆರಂಭದಲ್ಲಿ ಭಯ, ಆತಂಕದ ವಾತಾವರಣ ಇತ್ತು. ಈಗ ಲಸಿಕೆ ಪಡೆಯುತ್ತಿರುವುದರಿಂದ ಭಯದ ವಾತಾವರಣ ಕಡಿಮೆಯಾಗಿದೆ. ಆದರೂ ಕೋವಿಡ್ ನಿಯಂತ್ರಣ ಸಂಬAಧ ಸರ್ಕಾರದ ನಿಯಮಗಳನ್ನು ಪಾಲಿಸುವುದು ಅತ್ಯಗತ್ಯ ಎಂದು ಸಲಹೆಯಿತ್ತರು.
ಪ್ರತಿಯೊಬ್ಬರೂ ಉತ್ತಮ ಪೌಷ್ಠಿಕ ಆಹಾರ ಸೇವಿಸಬೇಕು. ಯೋಗ, ಧ್ಯಾನ ಮಾಡಬೇಕು. ಕೊರೊನಾ ಹೋಗಲಾಡಿಸಲು ಎಲ್ಲರೂ ಕೈಜೋಡಿಸಬೇಕು ಎಂದು ಅವರು ನುಡಿದರು. ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರು ಮಾತನಾಡಿ ಕೊರೊನಾ ಬಗ್ಗೆ ಭಯ ಬೇಡ. ಅರ್ಹರೆಲ್ಲರೂ ಲಸಿಕೆ ಪಡೆಯಬೇಕು. ಎರಡನೇ ಡೋಸ್ನ್ನು ೨೮ ದಿನದ ನಂತರ ಪಡೆಯುವಂತಾಗಬೇಕು ಎಂದು ಹೇಳಿದರು.
ಕೋವಿಡ್ ನಿಯಂತ್ರಿಸುವಲ್ಲಿ ಮಾಸ್ಕ್ ಧರಿಸುವುದು, ಅಂತರ ಕಾಯ್ದುಕೊಳ್ಳುವುದು, ಶುಚಿತ್ವ ಕಾಪಾಡುವುದು ಸೇರಿದಂತೆ ಕೋವಿಡ್ ನಿಯಂತ್ರಣ ಸಂಬAಧ ಮಾರ್ಗಸೂಚಿಯನ್ನು ಪಾಲಿಸುವಂತಾಗಬೇಕು ಎಂದು ಜಿಲ್ಲಾಧಿಕಾರಿ ಕಿವಿಮಾತು ಹೇಳಿದರು.
ಜಿ.ಪಂ.ಸಿಇಒ ಭಂವರ್ ಸಿಂಗ್ ಮೀನಾ ಅವರು ಮಾತನಾಡಿ ಲಸಿಕೆ ನೀಡುವ ಕಾರ್ಯಕ್ರಮವು ಆರಂಭವಾಗಿ ಒಂದು ವರ್ಷವಾಗಿದೆ. ಪ್ರತಿಯೊಬ್ಬರ ದೇಹದಲ್ಲಿ ವಿಟಮಿನ್ ಮತ್ತು ಪ್ರೋಟೀನ್ ಅಂಶಗಳು ಇದ್ದಲ್ಲಿ ವೈರಸ್ನ್ನು ನಿಯಂತ್ರಿಸಬಹುದು ಎಂದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಆರ್.ವೆಂಕಟೇಶ್ ಮಾತನಾಡಿ ಜಿಲ್ಲೆಯಲ್ಲಿ ೧೨ ರಿಂದ ೧೪ ವರ್ಷ ವಯೋಮಾನದ ಸುಮಾರು ೧೬,೨೪೬ ಮಕ್ಕಳಿದ್ದು, ಪ್ರತೀ ಶಾಲೆಗೆ ತೆರಳಿ ಲಸಿಕೆ ನೀಡಲಾಗುತ್ತದೆ. ಲಸಿಕೆ ಪಡೆಯಲು ಮಕ್ಕಳು ಹೆದರುವ ಅಗತ್ಯವಿಲ್ಲ ಎಂದರು. ಜಿಲ್ಲಾ ಲಸಿಕಾ ಅಧಿಕಾರಿ ಡಾ.ಗೋಪಿನಾಥ್ ಮಾತನಾಡಿ ೨೦೦೮, ೨೦೦೯, ೨೦೧೦ ರ ಮಾರ್ಚ್, ೧೫ ರೊಳಗೆ ಜನಿಸಿದ ೧೨ ರಿಂದ ೧೪ ವರ್ಷದ ಮಕ್ಕಳಿಗೆ ಲಸಿಕೆ ನೀಡಲಾಗುತ್ತದೆ ಎಂದು ತಿಳಿಸಿದರು.
ಕ್ಷಯ ರೋಗ ನಿಯಂತ್ರಣಾಧಿಕಾರಿ ಡಾ.ಆನಂದ್, ಮಕ್ಕಳ ವಿಭಾಗದ ಮುಖ್ಯಸ್ಥರಾದ ಡಾ.ಪುರುಷೋತ್ತಮ, ಡಾ.ಶೈಲಜಾ, ತಾಲೂಕು ಆರೋಗ್ಯ ಅಧಿಕಾರಿ ಡಾ.ಚೇತನ್, ಸ್ಕಾö್ಯನಿಂಗ್ ವಿಭಾಗದ ಡಾ.ಆನಂದ್ ಇತರರು ಇದ್ದರು.