ಮಡಿಕೇರಿ, ಮಾ. ೧೭: ಜಿಲ್ಲಾಧಿಕಾರಿ ನಡೆ ಹಳ್ಳಿಯ ಕಡೆಗೆ ಕಾರ್ಯಕ್ರಮ ಪ್ರಯುಕ್ತ ತಹಶೀಲ್ದಾರರ ನೇತೃತ್ವದಲ್ಲಿ ತಾ. ೧೯ ರಂದು ಬೆಳಿಗ್ಗೆ ೧೦ ಗಂಟೆಗೆ ತಹಶೀಲ್ದಾರರು ಮತ್ತು ಇತರ ಇಲಾಖೆಯ ತಾಲೂಕು ಮಟ್ಟದ ಅಧಿಕಾರಿಗಳಿಂದ ಅಯ್ಯಂಗೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಯ್ಯಂಗೇರಿ ಮತ್ತು ಸಣ್ಣಪುಲಿಕೋಟು ಗ್ರಾಮದ ಅಯ್ಯಂಗೇರಿ ಅರಬ್ಬಿ ಶಾಲೆಯಲ್ಲಿ ಗ್ರಾಮ ವಾಸ್ತವ್ಯ ಕಾರ್ಯಕ್ರಮ ನಡೆಯಲಿದೆ.