ಮಡಿಕೇರಿ, ಮಾ. ೧೭: ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ, ಕೊಡಗು ಜಿಲ್ಲಾ ಸಹಕಾರ ಯೂನಿಯನ್ ಇವರ ಸಂಯುಕ್ತಾಶ್ರಯದಲ್ಲಿ ಸಂಘಗಳ ಉತ್ತಮ ನಿರ್ವಹಣೆಗಾಗಿ ಸಹಕಾರ ಸಂಘಗಳ ಕಾಯ್ದೆ ಮತ್ತು ನಿಯಮಗಳ ತಿದ್ದುಪಡಿ ಕುರಿತು ಜಿಲ್ಲೆಯ ಸಹಕಾರ ಸಂಘಗಳ ಅಧ್ಯಕ್ಷರುಗಳಿಗೆ ರಾಜ್ಯ ಮಟ್ಟದ ವಿಶೇಷ ಕಾರ್ಯಕ್ರಮವು ತಾ. ೧೯ ರಂದು ಬೆಳಿಗ್ಗೆ ೧೦.೩೦ ಗಂಟೆಗೆ ನಗರದ ಹೊಟೇಲ್ ಕ್ರಿಸ್ಟಲ್ ಕೋರ್ಟ್ನಲ್ಲಿ ನಡೆಯಲಿದೆ.
ವಿಧಾನ ಪರಿಷತ್ ಸದಸ್ಯ ಎಂ.ಪಿ. ಸುಜಾ ಕುಶಾಲಪ್ಪ, ಕೊಡಗು ಜಿಲ್ಲಾ ಸಹಕಾರ ಯೂನಿಯನ್‌ನ ಅಧ್ಯಕ್ಷರು ಹಾಗೂ ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್‌ನ ನಿರ್ದೇಶಕ ಎ.ಕೆ. ಮನುಮುತ್ತಪ್ಪ, ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿರ್ದೇಶಕ ಬಿ.ಸಿ. ಲೋಕಪ್ಪಗೌಡ, ಜಯಕರ ಶೆಟ್ಟಿ.ಬಿ ಇಂದ್ರಾಳಿ ಇತರರು ಪಾಲ್ಗೊಳ್ಳಲಿದ್ದಾರೆ.