ಮಡಿಕೇರಿ, ಮಾ. ೧೭: ಶಾಸಕ ಕೆ.ಜಿ. ಬೋಪಯ್ಯ ಮತ್ತು ಸಂಸದ ಪ್ರತಾಪ್ ಸಿಂಹ ಅವರು ತಾ. ೧೯ ರಂದು ವೀರಾಜಪೇಟೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.

ಬೆಳಿಗ್ಗೆ ೯.೪೫ ಗಂಟೆಗೆ ಬೆಟ್ಟಗೇರಿ ಗ್ರಾಮ ಪಂಚಾಯಿತಿ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ನಂತರ ೧೦.೪೫ ಗಂಟೆಗೆ ಅಯ್ಯಂಗೇರಿ ನೂತನ ಗ್ರಾ.ಪಂ. ಕಟ್ಟಡ ಉದ್ಘಾಟಿಸಲಿದ್ದಾರೆ.

೧೧.೧೫ ಗಂಟೆಗೆ ಭಾಗಮಂಡಲದಲ್ಲಿ ಜಲಜೀವನ್ ಮಿಷನ್ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಲಿದ್ದಾರೆ. ನಂತರ ತಲಕಾವೇರಿಯಲ್ಲಿ ಗ್ರಾಮ ಪಂಚಾಯಿತಿ ವತಿಯಿಂದ ನಿರ್ಮಿಸ ಲಾಗಿರುವ ಮಳಿಗೆ ಉದ್ಘಾಟಿಸಲಿದ್ದಾರೆ. ಭಾಗಮಂಡಲದಲ್ಲಿ ಮಣ್ಣು ಪರೀಕ್ಷಾ ಕೇಂದ್ರ ಉದ್ಘಾಟನೆ, ಗೌಡ ಸಮಾಜ ಕಟ್ಟಡ ನಿರ್ಮಾಣ ಕಾಮಗಾರಿಯ ಭೂಮಿಪೂಜೆ ನೆರವೇರಿಸಲಿದ್ದಾರೆ.

ಮಧ್ಯಾಹ್ನ ೩ ಗಂಟೆಗೆ ಪೊನ್ನಂಪೇಟೆ ತಾಲೂಕಿನ ಪೊನ್ನಂಪೇಟೆ ಅಂಗನವಾಡಿ ಕಟ್ಟಡ ಉದ್ಘಾಟನೆ, ೩.೪೫ ಗಂಟೆಗೆ ಹುದಿಕೇರಿ ಯಲ್ಲಿ ಜಲಜೀವನ್ ಮಿಷನ್ ಕಾಮಗಾರಿ ಉದ್ಘಾಟನೆ, ಸಂಜೆ ೪.೧೫ ಗಂಟೆಗೆ ಟಿ.ಶೆಟ್ಟಿಗೇರಿ ಅಂಗನವಾಡಿ ಕಟ್ಟಡ ಉದ್ಘಾಟನೆ, ಸಂಜೆ ೫ ಗಂಟೆಗೆ ಬಾಳಲೆ ಅಂಗನವಾಡಿ ಕಟ್ಟಡ ಉದ್ಘಾಟನೆ, ಸಂಜೆ ೬ ಗಂಟೆಗೆ ತಿತಿಮತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಜಲಜೀವನ್ ಮಿಷನ್ ಕಾಮಗಾರಿ ಉದ್ಘಾಟಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.