ಮಡಿಕೇರಿ ಮಾ.೧೭ : ತುಮಕೂರು ಜಿಲ್ಲೆಯ ಶಿರಾ ತಾಲೂಕಿನಲ್ಲಿ ತಾ. ೧೮ ರಂದು (ಇಂದು) ನಡೆಯುವ ರಾಜ್ಯ ಮಟ್ಟದ ಮಹಿಳಾ ಬಂಧುತ್ವ ಸಮಾವೇಶದಲ್ಲಿ ಕೊಡಗು ಜಿಲ್ಲೆಯನ್ನು ಮಾನವ ಬಂಧುತ್ವ ವೇದಿಕೆಯ ಡಾ. ಕಾವೇರಿ ಅವರು ಪ್ರತಿನಿಧಿಸಲಿದ್ದಾರೆ ಎಂದು ವೇದಿಕೆಯ ಜಿಲ್ಲಾ ಘಟಕದ ಪ್ರಧಾನ ಸಂಚಾಲಕ ರಮಾನಾಥ್ ಬೇಕಲ್ ತಿಳಿಸಿದ್ದಾರೆ.
ಶಿರಾದಲ್ಲಿ ನಡೆಯುವ ಸಮಾವೇಶವನ್ನು ಮಾನವ ಬಂಧುತ್ವ ವೇದಿಕೆಯ ಸಂಸ್ಥಾಪಕ ಹಾಗೂ ಶಾಸಕ ಸತೀಶ್ ಜಾರಕಿಹೊಳಿ ಉದ್ಘಾಟಿಸಲಿದ್ದು, ಪ್ರಮುಖ ಡಾ. ಕೆ. ಷರೀಫ ಅಧ್ಯಕ್ಷತೆ ವಹಿಸಲಿದ್ದಾರೆ.
ಜನವಾಹಿನಿ ಮಹಿಳಾ ಸಂಘಟನೆಯ ಉಪಾಧ್ಯಕ್ಷೆ ಪಿ.ಗೀತಾ ವಿಷಯ ಮಂಡನೆ ಮಾಡಲಿದ್ದು, ಚಿಂತಕಿ ಡಾ.ಲೀಲಾ ಸಂಪಿಗೆ ಕಿರುಹೊತ್ತಿಗೆ ಬಿಡುಗಡೆ ಮಾಡಲಿದ್ದಾರೆ ಎಂದು ರಮಾನಾಥ್ ತಿಳಿಸಿದ್ದಾರೆ.