ನಾಪೋಕ್ಲು, ಮಾ. ೧೮: ಹಳೇ ತಾಲೂಕಿನ ಅಂಗನವಾಡಿ ಕೇಂದ್ರದಲ್ಲಿ ಆರೋಗ್ಯವಂತ ಶಿಶು ಪ್ರದರ್ಶನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಚೋನಕರೆ, ಅಜ್ಜಿಮುಟ್ಟು, ನಾಪೋಕ್ಲು ನಗರ ಅಂಗನವಾಡಿ ಕೇಂದ್ರಗಳು ಮತ್ತು ಆರೋಗ್ಯ ಇಲಾಖೆ ಸಹಯೋಗದೊಂದಿಗೆ ಕಾರ್ಯಕ್ರಮವನ್ನು ನಡೆಸಲಾಯಿತು.
ಅಧ್ಯಕ್ಷತೆಯನ್ನು ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯೆ, ನಾಪೋಕ್ಲು ಭಗವತಿ ಸಮಾಜದ ಅಧ್ಯಕ್ಷೆ ಬೊಪ್ಪಂಡ ಬೊಳ್ಳಮ್ಮ ನಾಣಯ್ಯ ವಹಿಸಿದ್ದರು. ಮುಖ್ಯ ಅತಿಥಿಯಾಗಿ ಗ್ರಾಮ ಪಂಚಾಯಿತಿ ಸದಸ್ಯ ಕುಲ್ಲೇಟಿರ ಅರುಣ ಬೇಬ ಆಗಮಿಸಿದ್ದರು.
ಶಿಶು ಪ್ರದರ್ಶನದಲ್ಲಿ ಭಾಗವಹಿಸಿದ್ದ ಮಕ್ಕಳಿಗೆ ಪ್ರಥಮ, ದ್ವಿತೀಯ, ತೃತೀಯ ಬಹುಮಾನವನ್ನು ವಿತರಿಸಲಾಯಿತು. ಮತ್ತು ಇತರ ಮಕ್ಕಳಿಗೆ ಸಮಾಧಾನಕರ ಬಹುಮಾನಗಳನ್ನು ನೀಡಲಾಯಿತು. ಈ ಸಂದರ್ಭ ಅಂಗನವಾಡಿ ಶಿಕ್ಷಕಿ ಭಾಗ್ಯವತಿ, ಪವಿತ್ರ, ಆರೋಗ್ಯ ಕಾರ್ಯಕರ್ತೆ ಉಮಾಮಹೇಶ್ವರಿ, ಆಶಾ ಕಾರ್ಯಕರ್ತೆ ರಮ್ಯಾ, ಮತ್ತು ಮಕ್ಕಳ ಪೋಷಕರು ಇದ್ದರು.