ಗುಡ್ಡೆಹೊಸೂರು: ಜಿಲ್ಲಾ ಪಂಚಾಯಿತಿ, ಮಹಿಳೆ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಾರ್ತಾ ಮತ್ತು ಪ್ರಚಾರ ಇಲಾಖೆ ಇವರ ಸಹಯೋಗದಲ್ಲಿ ಬಾಲ್ಯ ವಿವಾಹ ನಿಷೇಧ ಕಾಯ್ದೆ ಬಗ್ಗೆ ಗುಡ್ಡೆಹೊಸೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಸವನಹಳ್ಳಿಯ ಪ್ರೌಢಶಾಲಾ ಮೈದಾನದಲ್ಲಿ ಅರಿವು ಕಾರ್ಯಕ್ರಮ ನಡೆಯಿತು.
ಗುಡ್ಡೆಹೊಸೂರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ನಂದಿನಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಈ ಸಂದರ್ಭ ಇಲ್ಲಿನ ಪಿ.ಡಿ.ಓ. ಶ್ಯಾಂ ತಮ್ಮಯ್ಯ ಹಾಗೂ ಸೋಮವಾರಪೇಟೆ ತಾಲೂಕು ಮಹಿಳಾ ಮೇಲ್ವಿಚಾರಕಿ ಸಾವಿತ್ರಿ, ಶ್ಯಾಮಲ ಹಾಜರಿದ್ದರು.
ಈ ಸಂದರ್ಭ ಗುಡ್ಡೆಹೊಸೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು, ಗ್ರಾಮ ಪಂಚಾಯಿತಿ ಸದಸ್ಯೆ ಸೌಮ್ಯ, ಬಸವನಹಳ್ಳಿ ಪ್ರೌಢಶಾಲೆಯ ಮುಖ್ಯ ಶಿಕ್ಷಕಿ ಆಯಚ್ಚು ಕೆ.ಎಂ., ಶಿಕ್ಷಕ ಲಕ್ಷö್ಮಣ, ಶಿಕ್ಷಕ ವೃಂದದವರು ಹಾಗೂ ಶಾಲಾ ವಿದ್ಯಾರ್ಥಿಗಳು ಹಾಜರಿದ್ದು ಬಾಲ್ಯ ವಿವಾಹ ತಡೆಗಟ್ಟುವ ಬಗ್ಗೆ ಕಿರುಚಿತ್ರವನ್ನು ವೀಕ್ಷಿಸಿದರು.ಸಿದ್ದಾಪುರ: ನೆಲ್ಲಿಹುದಿಕೇರಿಯ ಕೆ.ಪಿ.ಎಸ್. ಸರ್ಕಾರಿ ಪ್ರೌಢಶಾಲೆಯಲ್ಲಿ ಬಾಲ್ಯ ವಿವಾಹ ನಿಷೇಧ ಸಂಬAಧಿಸಿದ ಜಾಥಾವನ್ನು ಕಾರ್ಮಿಕ ಮುಖಂಡ ಪಿ.ಆರ್. ಭರತ್ ಹಾಗೂ ಪ್ರೌಢಶಾಲಾ ಉಪಾಧ್ಯಾಯ ಅನಿಲ್ ಅವರು ಬರಮಾಡಿಕೊಂಡರು. ನಂತರ ಬಾಲ್ಯ ವಿವಾಹ ನಿಷೇಧದ ಬಗ್ಗೆ ವಿವಿಧ ಸಂಘ-ಸAಸ್ಥೆಗಳ ಪದಾಧಿಕಾರಿಗಳು ಹಾಗೂ ಸ್ಥಳೀಯ ಜನಪ್ರತಿನಿಧಿಗಳು ಮಾತನಾಡಿದರು.
ಕಾರ್ಯಕ್ರಮದಲ್ಲಿ ಭಾಗವಹಿಸಿದ ಮಕ್ಕಳು ಪ್ರಮಾಣ ವಚನ ಬೋಧನೆ ಸ್ವೀಕರಿಸಿದರು. ಕಾರ್ಯಕ್ರಮದಲ್ಲಿ ನೆಲ್ಲಿಹುದಿಕೇರಿ ಗ್ರಾ.ಪಂ. ಅಧ್ಯಕ್ಷ ಸಾಬೂ ವರ್ಗೀಸ್, ಪಿಡಿಓ ಹೆಚ್.ಎಸ್. ಅನಿಲ್ ಕುಮಾರ್ ಇನ್ನಿತರರು ಹಾಜರಿದ್ದರು.
ಭಾಗಮಂಡಲ: ಬಾಲ್ಯ ವಿವಾಹ ನಿಷೇಧ ಕಾಯ್ದೆ ಸಮರ್ಪಕ ಅನುಷ್ಠಾನ ಹಾಗೂ ಜನರಲ್ಲಿ ಅರಿವು ಮೂಡಿಸುವ ವೀಡಿಯೋ ಪ್ರಚಾರಾಂದೋಲನ ಭಾಗಮಂಡಲ ವ್ಯಾಪ್ತಿಯ ಶಾಲೆಗಳಲ್ಲಿ ನಡೆಯಿತು.
ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಸಮೀಪದ ಶ್ರೀ ಕಾವೇರಿ ಪದವಿಪೂರ್ವ ಕಾಲೇಜಿನಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ಬಾಲ್ಯ ವಿವಾಹ ನಿಷೇಧದ ಬಗ್ಗೆ ವಿದ್ಯಾರ್ಥಿಗಳು ಪ್ರತಿಜ್ಞಾವಿಧಿ ಸ್ವೀಕರಿಸಿದರು.
ಗ್ರಾಮ ಪಂಚಾಯಿತಿ ಅಧ್ಯಕ್ಷೆ ಪಮಿತಾ, ಪಿಡಿಓ ನಂದ, ಗ್ರಾಮ ಪಂಚಾಯಿತಿ ಸದಸ್ಯರಾದ ನಿತ್ಯಾನಂದ, ಕಾಲೇಜಿನ ಪ್ರಾಂಶುಪಾಲ ದಿವಾಕರ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸವಿತ, ಮೇಲ್ವಿಚಾರಕಿ ಶೀಲಾ, ಪ್ರೌಢಶಾಲಾ ಮುಖ್ಯ ಶಿಕ್ಷಕ ಕೃಷ್ಣ ಜೇ ಹಾಜರಿದ್ದರು.