ಮಡಿಕೇರಿ, ಮಾ. ೧೮: ಡಾ. ಬಿ.ಆರ್. ಅಂಬೇಡ್ಕರ್ ಮತ್ತು ಡಾ. ಬಾಬು ಜಗಜೀವನ್‌ರಾಂ ಇವರ ಸ್ಮರಣಾರ್ಥ ಸಾಮಾಜಿಕ ಕ್ಷೇತ್ರದಲ್ಲಿ ಪರಿಶಿಷ್ಟ ಜಾತಿ-ಪರಿಶಿಷ್ಟ ವರ್ಗದ ಜನಾಂಗದವರ ಶ್ರೇಯಸ್ಸಿಗಾಗಿ ಪ್ರೋತ್ಸಾಹಿಸಿ, ಶ್ರಮಿಸಿ, ಗಣನೀಯ ಸೇವೆ ಸಲ್ಲಿಸಿದ ಅರ್ಹ ವ್ಯಕ್ತಿಗಳನ್ನು ಗುರುತಿಸಿ ೨೦೨೨-೨೩ನೇ ಸಾಲಿನ ಡಾ. ಬಾಬು ಜಗಜೀವನರಾಂ ಹಾಗೂ ಡಾ. ಬಿ.ಆರ್. ಅಂಬೇಡ್ಕರ್ ಪ್ರಶಸ್ತಿಗಳನ್ನು ನೀಡಿ ಗೌರವಿಸಲು ಉದ್ದೇಶಿಸಲಾಗಿದ್ದು, ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿಯನ್ನು ತಾ. ೧೯ ರೊಳಗೆ ಉಪ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಕೊಡಗು ಜಿಲ್ಲೆ ಮಡಿಕೇರಿ ಇಲ್ಲಿಗೆ ದಾಖಲೆಗಳೊಂದಿಗೆ ಸಲ್ಲಿಸುವಂತೆ ತಿಳಿಸಿದೆ. ಅರ್ಜಿಯನ್ನು ಉಪನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಕೊಡಗು ಜಿಲ್ಲೆ, ಮಡಿಕೇರಿ ೦೮೨೭೨-೨೨೫೫೩೧, ಸಹಾಯಕ ನಿರ್ದೇಶಕರ ಕಚೇರಿ (ಗ್ರೇಡ್-೧), ಸಮಾಜ ಕಲ್ಯಾಣ ಇಲಾಖೆ, ಮಡಿಕೇರಿ ತಾಲೂಕು, ದೂ. ೦೮೨೭೨-೨೨೩೫೫೨, ಸಹಾಯಕ ನಿರ್ದೇಶಕರ ಕಚೇರಿ (ಗ್ರೇಡ್-೨), ಸಮಾಜ ಕಲ್ಯಾಣ ಇಲಾಖೆ, ಸೋಮವಾರಪೇಟೆ ತಾಲೂಕು, ದೂ. ೦೮೨೭೬-೨೮೧೧೧೫, ಸಹಾಯಕ ನಿರ್ದೇಶಕರ ಕಚೇರಿ (ಗ್ರೇಡ್-೨), ಸಮಾಜ ಕಲ್ಯಾಣ ಇಲಾಖೆ, ಪೊನ್ನಂಪೇಟೆ, ವೀರಾಜಪೇಟೆ ತಾಲೂಕು, ದೂ. ೦೮೨೭೪-೨೪೯೪೭೬ ಇಲ್ಲಿಂದ ಪಡೆಯಬಹುದು ಎಂದು ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಶೇಖರ್ ತಿಳಿಸಿದ್ದಾರೆ.