ನಾಪೋಕ್ಲು, ಮಾ. ೧೮: ಬಲ್ಲಮಾವಟಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೋಟೆರ ಸುಬ್ಬಯ್ಯ ಅವರ ಮನೆಯ ಬಳಿ ಗರ್ಭಗುಡಿಯಲ್ಲಿ ಪೂಜಿಸುತ್ತಿದ್ದ ಸುಮಾರು ೧.೫೦ ಲಕ್ಷ ರೂ. ಗಳ ಪಂಚಲೋಹದ ವಿಗ್ರಹವನ್ನು ಕಳ್ಳತನ ಮಾಡಿರುವ ಬಗ್ಗೆ ಪ್ರಕರಣ ದಾಖಲಾಗಿದೆ.
ಈ ಬಗ್ಗೆ ಸುಬ್ಬಯ್ಯ ನಾಪೋಕ್ಲು ಪೊಲೀಸ್ ಠಾಣೆಗೆ ದೂರು ನೀಡಿದ್ದು, ಅದಕ್ಕೆ ಸಂಬAಧಿಸಿದAತೆ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಸ್ಥಳಕ್ಕೆ ಡಿವೈಎಸ್ಪಿ ಗಜೇಂದ್ರ ಪ್ರಸಾದ್, ಗ್ರಾಮಾಂತರ ಠಾಣಾ ವೃತ್ತ ನಿರೀಕ್ಷಕ ಅನೂಪ್ ಮಾದಪ್ಪ, ನಾಪೋಕ್ಲು ಠಾಣಾಧಿಕಾರಿ ಸದಾಶಿವ ಹಾಗೂ ಸಿಬ್ಬಂದಿ ಭೇಟಿ ನೀಡಿ ಪರಿಶೀಲಿಸಿ ಮುಂದಿನ ಕ್ರಮಕೈಗೊಂಡಿದ್ದಾರೆ.