ನಾಪೋಕ್ಲು, ಮಾ. ೧೮: ಸಮೀಪದ ನೆಲಜಿ ಶ್ರೀ ಇಗ್ಗುತ್ತಪ್ಪ ದೇವಾಲಯದಲ್ಲಿ ಕುಂಬ್ಯಾರು ಕಲಾಡ್ಚ ವಾರ್ಷಿಕೋತ್ಸವ ವಿಜೃಂಭಣೆಯಿAದ ನಡೆಯಿತು.
ಉತ್ಸವದ ಅಂಗವಾಗಿ ವಿಶೇಷ ಪೂಜೆಗಳು ನೆರವೇರಿದವು. ದೇವಾಲಯದಲ್ಲಿ ತುಲಾಭಾರ ಸೇವೆ ಬಳಿಕ ಭಕ್ತರು ವಿವಿಧ ರೀತಿಯ ಹರಕೆ ಸಲ್ಲಿಸಿದರು.ದೇವಾಲಯದಲ್ಲಿ ೨೫ ತುಲಾಭಾರ ಸೇವೆಗಳು, ಕಾಫಿ ಕಾಳುಮೆಣಸು, ಎಣ್ಣೆ, ಮತ್ತಿತರ ಹರಕೆ ಸಲ್ಲಿಸಿದರು. ನಂತರ ದೇವಾಲಯದಲ್ಲಿ ಮಹಾಪೂಜೆ ಜರುಗಿತು. ಭಕ್ತರಿಗೆ ಪ್ರಸಾದ ವಿತರಣೆ ಬಳಿಕ ಎತ್ತುಪೋರಾಟ ಅನ್ನಸಂತರ್ಪಣೆ, ದೇವರ ನೃತ್ಯಬಲಿ ಜರುಗಿತು.ತಂತ್ರಿ ಸಂತೋಷ್ ಹೆಬ್ಬಾರ್,ಅರ್ಚಕರಾದ ಸುರೇಶ್ ಶರ್ಮ,ರಮೇಶ್ ಶರ್ಮ ಹಾಗೂ ಸುಧೀರ್ ಪೂಜಾ ವಿಧಿ ವಿಧಾನಗಳನ್ನು ನೆರವೇರಿಸಿದರು.
ಆನಂತರ ಇಗ್ಗುತ್ತಪ್ಪ ದೇವರ ಆದಿ ಸ್ಥಳವಾದ ಮಲ್ಮ ಬೆಟ್ಟಕ್ಕೆ ಎತ್ತುಪೋರಾಟದೊಂದಿಗೆ ತೆರಳಿ ವಿವಿಧ ಪೂಜಾ ವಿಧಿವಿಧಾನಗಳನ್ನು ನೆರವೇರಿಸಲಾಯಿತು. ಉತ್ಸವದಲ್ಲಿ ತಕ್ಕ ಮುಖ್ಯಸ್ಥರಾದ ನಾಪನೆರವಂಡ ಪೊನ್ನಪ್ಪ,ಬಾಳೆಯಡ ರಾಜ ಕುಂಞಪ್ಪ, ಬದಂಚೆಟ್ಟೀರ ನಾಣಯ್ಯ, ಕೆ. ರಮೇಶ್, ಆಡಳಿತ ಮಂಡಳಿ ಅಧ್ಯಕ್ಷ ಮುಂಡAಡ ನಾಣಯ್ಯ, ಕಾರ್ಯದರ್ಶಿ ಮುಕ್ಕಾಟಿರ ವಿನಯ್, ಆಡಳಿತ ಮಂಡಳಿ ಸದಸ್ಯರು, ಗ್ರಾಮಸ್ಥರು, ಭಕ್ತರು ಪಾಲ್ಗೊಂಡಿದ್ದರು.