ಮಡಿಕೇರಿ, ಮಾ. ೧೯: ರಾಜ್ಯ ಕಾಂಗ್ರೆಸ್ ವತಿಯಿಂದ ಆರಂಭಿಸಿ ರುವ ಡಿಜಿಟಲ್ ಸದಸ್ಯತ್ವ ಅಭಿಯಾನಕ್ಕೆ ಜಿಲ್ಲೆಯಿಂದ ೫೦ ಸಾವಿರ ಗುರಿಯಿದ್ದು, ತಾ. ೨೦, ೨೧ರಂದು ಏಕಕಾಲದಲ್ಲಿ ಕಾಂಗ್ರೆಸ್ ಸದಸ್ಯತ್ವ ಆಂದೋಲನ ನಡೆಯಲಿದೆ ಎಂದು ಕಾಂಗ್ರೆಸ್ ಜಿಲ್ಲಾಧ್ಯಕ್ಷ ತೀತಿರ ಧರ್ಮಜ ಉತ್ತಪ್ಪ ತಿಳಿಸಿದರು.

ನಗರದ ಪತ್ರಿಕಾಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಈಗಾಗಲೇ ಡಿಜಿಟಲ್ ಸದಸ್ಯತ್ವ ನೋಂದಣಿ ಅಭಿಯಾನ ಪ್ರಾರಂಭ ವಾಗಿದೆ. ಇದುವರೆಗೆ ೮ ಸಾವಿರ ಸದಸ್ಯತ್ವ ನೊಂದಣಿಯಾಗಿದ್ದು, ೫೦ ಸಾವಿರ ಗುರಿ ಹೊಂದಲಾಗಿದೆ. ನೆಟ್‌ವರ್ಕ್ ಸಮಸ್ಯೆಯಿಂದ ನೋಂದಣಿ ಪ್ರಕ್ರಿಯೆ ಕುಂಟಿತ ಗೊಂಡಿತ್ತು ಎಂದ ಅವರು, ತಾ. ೩೧ರೊಳಗೆ ಗುರಿ ಸಾಧಿಸುವ ನಿಟ್ಟಿನಲ್ಲಿ ಏಕಕಾಲದಲ್ಲಿ ಎಲ್ಲಾ ಬೂತ್ ನಾಯಕರುಗಳ ನೇತೃತ್ವದಲ್ಲಿ ಸದಸ್ಯತ್ವ ಅಭಿಯಾನ ನಡೆಯಲಿದೆ ಎಂದು ತಿಳಿಸಿದರು.

೨೦೧೮ರಲ್ಲಿ ಜಿಲ್ಲೆಯಲ್ಲಿ ಸಂಭವಿಸಿದ ಪ್ರಕೃತಿ ವಿಕೋಪದಿಂದ ಮನೆ ಕಳೆದು ಕೊಂಡು ಸಂಕಷ್ಟದ ಪರಿಸ್ಥಿತಿಯಲ್ಲಿ ಜೀವನ ಸಾಗಿಸುತ್ತಿದ್ದಾರೆ. ಕಾಂಗ್ರೆಸ್ ನೇತೃತ್ವದ ಸರ್ಕಾರ ಕೊಡಗಿನ ಸಂತ್ರಸ್ತರಿಗೆ ಮನೆ ನೀಡುವ ಮೂಲಕ ಸಂತ್ರಸ್ತರ ಸಮಸ್ಯೆಗೆ ಸ್ಪಂದಿಸಿದೆ. ಆದರೆ ೨೦೧೯ರ ಸಂತ್ರಸ್ತರಿಗೆ ಬಿಜೆಪಿ ನೇತೃತ್ವದ ಸರ್ಕಾರ ಇನ್ನೂ ಮನೆಗಳನ್ನು ಹಸ್ತಾಂತರಿಸಿಲ್ಲ. ಕೂಡಲೇ ಸಂತ್ರಸ್ತರಿಗೆ ಮನೆಗಳನ್ನು ನೀಡುವಂತಾಗಬೇಕು ಎಂದು ಆಗ್ರಹಿಸಿದರು.

ಎಸ್‌ಎಸ್‌ಎಲ್‌ಸಿ ಹಾಗೂ ಇತರ ವಿದ್ಯಾರ್ಥಿಗಳಿಗೆ ಪರೀಕ್ಷೆಗಳು ಸಮೀಪಿಸುತ್ತಿದೆ. ಆದರೆ ಕೊಡಗಿನಲ್ಲಿ ವಿದ್ಯುತ್ ದಿನನಿತ್ಯ ವ್ಯತ್ಯಯ ವಾಗುತ್ತಿದೆ. ಇದರಿಂದ ಓದಲು ೨೦೧೮ರಲ್ಲಿ ಜಿಲ್ಲೆಯಲ್ಲಿ ಸಂಭವಿಸಿದ ಪ್ರಕೃತಿ ವಿಕೋಪದಿಂದ ಮನೆ ಕಳೆದು ಕೊಂಡು ಸಂಕಷ್ಟದ ಪರಿಸ್ಥಿತಿಯಲ್ಲಿ ಜೀವನ ಸಾಗಿಸುತ್ತಿದ್ದಾರೆ. ಕಾಂಗ್ರೆಸ್ ನೇತೃತ್ವದ ಸರ್ಕಾರ ಕೊಡಗಿನ ಸಂತ್ರಸ್ತರಿಗೆ ಮನೆ ನೀಡುವ ಮೂಲಕ ಸಂತ್ರಸ್ತರ ಸಮಸ್ಯೆಗೆ ಸ್ಪಂದಿಸಿದೆ. ಆದರೆ ೨೦೧೯ರ ಸಂತ್ರಸ್ತರಿಗೆ ಬಿಜೆಪಿ ನೇತೃತ್ವದ ಸರ್ಕಾರ ಇನ್ನೂ ಮನೆಗಳನ್ನು ಹಸ್ತಾಂತರಿಸಿಲ್ಲ. ಕೂಡಲೇ ಸಂತ್ರಸ್ತರಿಗೆ ಮನೆಗಳನ್ನು ನೀಡುವಂತಾಗಬೇಕು ಎಂದು ಆಗ್ರಹಿಸಿದರು.

ಎಸ್‌ಎಸ್‌ಎಲ್‌ಸಿ ಹಾಗೂ ಇತರ ವಿದ್ಯಾರ್ಥಿಗಳಿಗೆ ಪರೀಕ್ಷೆಗಳು ಸಮೀಪಿಸುತ್ತಿದೆ. ಆದರೆ ಕೊಡಗಿನಲ್ಲಿ ವಿದ್ಯುತ್ ದಿನನಿತ್ಯ ವ್ಯತ್ಯಯ ವಾಗುತ್ತಿದೆ. ಇದರಿಂದ ಓದಲು ಆಂದೋಲನದ ಮೂಲಕ ಕಾಂಗ್ರೆಸ್ ಪಕ್ಷದ ಬಲವನ್ನು ಗಟ್ಟಿಗೊಳಿಸಬೇಕು. ಪ್ರತಿ ಬೂತ್ ನಾಯಕರು ಪ್ರತಿ ಮನೆ ಮನೆಗೆ ತೆರಳಿ ಕಾಂಗ್ರೆಸ್ ಪಕ್ಷಕ್ಕೆ ಹೆಚ್ಚು ಶಕ್ತಿ ತುಂಬಬೇಕು. ಎರಡು ವಿಧಾನಸಭಾ ಕ್ಷೇತ್ರದಲ್ಲಿ ಪಕ್ಷದ ಕಾರ್ಯಕರ್ತರು ಸಕ್ರಿಯರಾಗಿ ನೋಂದಣಿ ಮಾಡಿಸಬೇಕು ಎಂದರು. ಸುದ್ದಿಗೋಷ್ಠಿಯಲ್ಲಿ ಡಿಸಿಸಿ ಉಪಾಧ್ಯಕ್ಷ ಸುಜು ತಿಮ್ಮಯ್ಯ, ಸಾಮಾಜಿಕ ಜಾಲತಾಣದ ಜಿಲ್ಲಾಧ್ಯಕ್ಷ ಸೂರಜ್ ಹೊಸೂರು, ಮಡಿಕೇರಿ ಬ್ಲಾಕ್ ಅಧ್ಯಕ್ಷ ಹಂಸ ಕೊಟ್ಟಮುಡಿ, ಡಿಸಿಸಿ ಗೌರವ ಕಾರ್ಯದರ್ಶಿ ವಿ.ಪಿ. ಸುರೇಶ್ ಉಪಸ್ಥಿತರಿದ್ದರು.