ಸೋಮವಾರಪೇಟೆ, ಮಾ. ೧೮: ದೇಶದ ಪ್ರಗತಿಯಲ್ಲಿ ಮಹಿಳೆಯರು ಬಹುಮುಖ್ಯ ಪಾತ್ರ ವಹಿಸುತ್ತಿದ್ದು, ಎಲ್ಲಾ ರಂಗದಲ್ಲಿಯೂ ತಮ್ಮ ಸಾಧನೆ ತೋರುತ್ತಿರುವುದು ಶ್ಲಾಘನೀಯ ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಎಂ.ಪಿ. ಕೇಶವ ಕಾಮತ್ ಹೇಳಿದರು.

ತಾಲೂಕು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಸಾಹಿತ್ಯ ಭವನದಲ್ಲಿ ಆಯೋಜಿಸಿದ್ದ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ, ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ಮಹಿಳೆಯರನ್ನು ಸನ್ಮಾನಿಸಿ ಅವರು ಮಾತನಾಡಿದರು.

ಸದ್ಯದಲ್ಲೇ ಶಾಂತಳ್ಳಿ, ಐಗೂರು, ಶನಿವಾರಸಂತೆ, ಕೊಡ್ಲಿಪೇಟೆ ಹೋಬಳಿ ಸಾಹಿತ್ಯ ಪರಿಷತ್ ಘಟಕಗಳನ್ನು ಉದ್ಘಾಟಿಸಲಾಗುವುದು. ತಾ. ೨೨ ರಂದು ಶನಿವಾರಸಂತೆ ಮತ್ತು ಕೊಡ್ಲಿಪೇಟೆ ಭಾಗದ ಸರ್ವ ಸದಸ್ಯರ ಸಭೆಯನ್ನು ಕರೆಯಲಾಗಿದ್ದು, ಮುಂದಿನ ರೂಪುರೇಷೆಗಳ ಬಗ್ಗೆ ಸದಸ್ಯರ ಅಭಿಪ್ರಾಯ ಸಂಗ್ರಹಿಸ ಲಾಗುವುದು ಎಂದರು. ಕಸಾಪ ತಾಲೂಕು ಅಧ್ಯಕ್ಷ ಎಸ್.ಡಿ. ವಿಜೇತ್ ಅಧ್ಯಕ್ಷತೆ ವಹಿಸಿದ್ದರು. ಅತಿಥಿಗಳಾಗಿ ಸಾಹಿತ್ಯ ಪರಿಷತ್ ಘಟಕಗಳನ್ನು ಉದ್ಘಾಟಿಸಲಾಗುವುದು. ತಾ. ೨೨ ರಂದು ಶನಿವಾರಸಂತೆ ಮತ್ತು ಕೊಡ್ಲಿಪೇಟೆ ಭಾಗದ ಸರ್ವ ಸದಸ್ಯರ ಸಭೆಯನ್ನು ಕರೆಯಲಾಗಿದ್ದು, ಮುಂದಿನ ರೂಪುರೇಷೆಗಳ ಬಗ್ಗೆ ಸದಸ್ಯರ ಅಭಿಪ್ರಾಯ ಸಂಗ್ರಹಿಸ ಲಾಗುವುದು ಎಂದರು. ಕಸಾಪ ತಾಲೂಕು ಅಧ್ಯಕ್ಷ ಎಸ್.ಡಿ. ವಿಜೇತ್ ಅಧ್ಯಕ್ಷತೆ ವಹಿಸಿದ್ದರು. ಅತಿಥಿಗಳಾಗಿ ನಾಗರಾಜ್, ನಂಗಾರು ಕೀರ್ತಿ ಪ್ರಸಾದ್ ಸೇರಿದಂತೆ ಇತರರು ಉಪಸ್ಥಿತರಿದ್ದರು. ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ಕಸಾಪ ಸದಸ್ಯರಾದ ಜ್ಯೋತಿ ಅರುಣ್, ತಿಲೋತ್ತಮೆ ನಂದಕುಮಾರ್, ಜ್ಯೋತಿ ಶುಭಕರ್, ರುಬೀನಾ, ನಯನತಾರ, ಜಲ ಕಾಳಪ್ಪ, ಜಯಮ್ಮ, ವಾಸಂತಿ ರವೀಂದ್ರ ಅವರುಗಳನ್ನು ಕಾರ್ಯಕ್ರಮದಲ್ಲಿ ಸನ್ಮಾನಿಸಲಾಯಿತು.