ಮಡಿಕೇರಿ, ಮಾ. ೧೮: ನೇತಾಜಿ ಯುವಕ ಹಾಗೂ ಯುವತಿ ಮಂಡಲಿ, ನೆಹರು ಯುವ ಕೇಂದ್ರ ಮಡಿಕೇರಿ, ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕೊಡಗು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕೊಡಗು ಮತ್ತು ತಾಲೂಕು ಯುವ ಒಕ್ಕೂಟ, ಮಡಿಕೇರಿ ಇವರ ಸಂಯುಕ್ತ ಆಶ್ರಯದಲ್ಲಿ ಭಾರತದ ಮಹಾನ್ ಸ್ವಾತಂತ್ರö್ಯ ಯೋಧ ನೇತಾಜಿ ಸುಭಾಷ್ಚಂದ್ರ ಬೋಸ್ ಅವರ ೧೨೫ನೇ ಜನ್ಮ ದಿನಾಚರಣೆ ಹಾಗೂ ನೇತಾಜಿ ಯುವಕ ಹಾಗೂ ಯುವತಿ ಮಂಡಲದ ೩೦ನೇ ವಾರ್ಷಿಕೋತ್ಸವವನ್ನು ತಾಳತ್ತಮನೆಯ ಆಟದ ಮೈದಾನದಲ್ಲಿ ನಡೆಸಲಾಯಿತು. ಕಾರ್ಯಕ್ರಮವನ್ನು ಮದೆನಾಡು ಕಾಫಿ ಲಿಂಕ್ಸ್ ಮಾಲೀಕರಾದ ಬಿ.ಸಿ. ಕೀರ್ತಿಕುಮಾರ್ ಉದ್ಘಾಟಿಸಿದರು. ನಂತರ ನೇತಾಜಿ ಸುಭಾಷ್ಚಂದ್ರ ಬೋಸ್ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಲಾಯಿತು. ನೇತಾಜಿ ಯುವಕ ಸಂಘದ ಧ್ವಜಾರೋಹಣ ನೆರವೇರಿಸಲಾಯಿತು. ಸಮಾರಂಭದ ಅಧ್ಯಕ್ಷತೆಯನ್ನು ಗ್ರಾಮ ಪಂಚಾಯತ್ ಸದಸ್ಯ ಜೀವನ್ ಪರ್ಲಕೋಟಿ ವಹಿಸಿದ್ದರು. ಗ್ರಾಮ ಪಂಚಾಯತ್ ಸದಸ್ಯೆ ನವೀನ ಬಿ.ಎಸ್., ನೇತಾಜಿ ಯುವಕ ಮಂಡಲದ ಅಧ್ಯಕ್ಷ ಬಿ.ಬಿ. ಸುದೀಪ್ ರೈ ಮತ್ತು ಯುವತಿ ಮಂಡಳಿ ಕಾರ್ಯದರ್ಶಿ ಮೋಹಿನಿ ಹಾಜರಿದ್ದರು.
ನಂತರ ಸಾರ್ವಜನಿಕ ಪುರುಷರ, ಮಹಿಳೆಯರ ಮತ್ತು ಪ್ರೌಢಶಾಲಾ ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿಯರುಗಳಿಗೆ ಗ್ರಾಮೀಣ ಗುಡ್ಡಗಾಡು ಓಟ ಸ್ಪರ್ಧೆ ನಡೆಯಿತು. ಜಿಲ್ಲಾ ಮಟ್ಟದ ವಾಲಿಬಾಲ್ ಮತ್ತು ಥ್ರೋಬಾಲ್ ಪಂದ್ಯಾವಳಿಗಳನ್ನು ಏರ್ಪಡಿಸಲಾಗಿತ್ತು. ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ಶಾಸಕ ಕೆ.ಜಿ. ಬೋಪಯ್ಯ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಪಶ್ಚಿಮಘಟ್ಟ ಕಾರ್ಯಪಡೆ ಅಧ್ಯಕ್ಷ ಶಾಂತೆಯAಡ ರವಿ ಕುಶಾಲಪ್ಪ ಪಾಲ್ಗೊಂಡಿದ್ದರು. ಸಮಾರೋಪ ಭಾಷಣವನ್ನು ಸೋಮವಾರಪೇಟೆ ಸರಕಾರಿ ಪದವಿಪೂರ್ವ ಕಾಲೇಜು ಪ್ರಾಂಶುಪಾಲ ಬೆಳ್ಯಪ್ಪ ಮಾಡಿದರು. ಇದೇ ಸಂದರ್ಭ ೨೦೨೧ನೇ ಸಾಲಿನ ಗಣರಾಜ್ಯೋತ್ಸವ ಪಥಸಂಚಲನಲ್ಲಿ ಭಾಗವಹಿಸಿದ್ದ ಎಂ.ಎಸ್. ಇಂದ್ರಜಿತ್ ಅವರನ್ನು ಸನ್ಮಾನಿಸಲಾಯಿತು. ನೇತಾಜಿ ಯುವಕ ಮಂಡಲ ಮಾಜಿ ಅಧ್ಯಕ್ಷ ಪಿ.ಎಂ. ಮುನಿರುದ್ದೀನ್, ಸದಸ್ಯೆ ಬಿ.ಎ. ಲಕ್ಷಿö್ಮ ಇವರುಗಳನ್ನು ಸನ್ಮಾ£ಸಲಾಯಿತು. ನಂತರ ವಿವಿಧ ಕ್ರೀಡಾ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು. ಸಂಜೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು. ಸಾರ್ವಜನಿಕರಿಗೆ, ಕ್ರೀಡಾಪಟುಗಳಿಗೆ ಊಟದ ವ್ಯವಸ್ಥೆ ಮಾಡಲಾಗಿತ್ತು.