ವೀರಾಜಪೇಟೆ, ಮಾ. ೧೯: ಎಸ್.ಎಸ್.ಎಲ್.ಸಿ. ಪರೀಕ್ಷೆಗೆ ಕೆಲವೇ ದಿನಗಳು ಉಳಿದಿರುವುದರಿಂದ ಪರೀಕ್ಷೆ ಎದುರಿಸುವ ಭೀತಿಯನ್ನು ಮಕ್ಕಳ ಮನಸಿನಿಂದ ದೂರಮಾಡಲು ಕೊಡಗು ಜಿಲ್ಲೆಯ ಸಾರ್ವಜನಿಕ ಶಿಕ್ಷಣ ಇಲಾಖೆಯೂ ವೀರಾಜಪೇಟೆ ತಾಲೂಕಿನ ಎಸ್.ಎಸ್.ಎಲ್.ಸಿ. ವಿದ್ಯಾರ್ಥಿಗಳಿಗೆ ಮಾಹಿತಿ ಕಾರ್ಯಾ ಗಾರವನ್ನು ಹಮ್ಮಿಕೊಂಡಿತ್ತು.

ನಗರದ ಸೆಂಟ್ ಆನ್ಸ್ ಶಾಲೆಯ ದ್ವಿಶತಮಾನೋತ್ಸವ ಸಭಾಂಗಣದಲ್ಲಿ ಈ ಮಾಹಿತಿ ಕಾರ್ಯಾಗಾರವನ್ನು ಅತಿಥಿಗಳು ಗಿಡಕ್ಕೆ ನೀರೆರೆಯುವ ಮೂಲಕ ಉದ್ಘಾಟಿಸಿದರು.

ಕಾರ್ಯಕ್ರಮ ಉದ್ಘಾಟಿಸಿದ ಬಳಿಕ ಕ್ಷೇತ್ರ ಶಿಕ್ಷಣಾಧಿಕಾರಿ ಶ್ರೀಶೈಲ ಬೀಳಗಿ ಅವರು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿ, ಯಾವುದೇ ಕೆಲಸವಾದರೂ ಅದನ್ನು ಮಾಡಲು ಸಿದ್ಧತೆಗಳಿರಬೇಕು. ವಿದ್ಯಾರ್ಥಿಗಳು ಕೂಡಾ ಪರೀಕ್ಷೆ ಎದುರಿಸಲು ಸಿದ್ಧತೆಯ ಜೊತೆಗೆ ಬದ್ಧತೆಯನ್ನು ರೂಢಿಸಿಕೊಂಡರೆ ಒಳಿತು ಆಗ ವೀರಾಜಪೇಟೆ, ಮಾ. ೧೯: ಎಸ್.ಎಸ್.ಎಲ್.ಸಿ. ಪರೀಕ್ಷೆಗೆ ಕೆಲವೇ ದಿನಗಳು ಉಳಿದಿರುವುದರಿಂದ ಪರೀಕ್ಷೆ ಎದುರಿಸುವ ಭೀತಿಯನ್ನು ಮಕ್ಕಳ ಮನಸಿನಿಂದ ದೂರಮಾಡಲು ಕೊಡಗು ಜಿಲ್ಲೆಯ ಸಾರ್ವಜನಿಕ ಶಿಕ್ಷಣ ಇಲಾಖೆಯೂ ವೀರಾಜಪೇಟೆ ತಾಲೂಕಿನ ಎಸ್.ಎಸ್.ಎಲ್.ಸಿ. ವಿದ್ಯಾರ್ಥಿಗಳಿಗೆ ಮಾಹಿತಿ ಕಾರ್ಯಾ ಗಾರವನ್ನು ಹಮ್ಮಿಕೊಂಡಿತ್ತು.

ನಗರದ ಸೆಂಟ್ ಆನ್ಸ್ ಶಾಲೆಯ ದ್ವಿಶತಮಾನೋತ್ಸವ ಸಭಾಂಗಣದಲ್ಲಿ ಈ ಮಾಹಿತಿ ಕಾರ್ಯಾಗಾರವನ್ನು ಅತಿಥಿಗಳು ಗಿಡಕ್ಕೆ ನೀರೆರೆಯುವ ಮೂಲಕ ಉದ್ಘಾಟಿಸಿದರು.

ಕಾರ್ಯಕ್ರಮ ಉದ್ಘಾಟಿಸಿದ ಬಳಿಕ ಕ್ಷೇತ್ರ ಶಿಕ್ಷಣಾಧಿಕಾರಿ ಶ್ರೀಶೈಲ ಬೀಳಗಿ ಅವರು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿ, ಯಾವುದೇ ಕೆಲಸವಾದರೂ ಅದನ್ನು ಮಾಡಲು ಸಿದ್ಧತೆಗಳಿರಬೇಕು. ವಿದ್ಯಾರ್ಥಿಗಳು ಕೂಡಾ ಪರೀಕ್ಷೆ ಎದುರಿಸಲು ಸಿದ್ಧತೆಯ ಜೊತೆಗೆ ಬದ್ಧತೆಯನ್ನು ರೂಢಿಸಿಕೊಂಡರೆ ಒಳಿತು ಆಗ ವಿದ್ಯಾರ್ಥಿಗಳಿಗೆ ತಿಳಿಹೇಳಿದರು.

ಕಾರ್ಯಕ್ರಮದ ವೇದಿಕೆಯಲ್ಲಿ ಸಂತ ಅನ್ನಮ್ಮ ಶಾಲೆಯ ಮುಖ್ಯೋಪಾಧ್ಯಾಯ ಬೆನ್ನಿ, ದೈಹಿಕ ಶಿಕ್ಷಣ ಪರಿವೀಕ್ಷಕಿ ಗಾಯಿತ್ರಿ, ಕ್ಷೇತ್ರ ಸಂಪನ್ಮೂಲ ಸಮನ್ವಯಾಧಿಕಾರಿ ವನಜಾಕ್ಷಿ, ಎಸ್.ಎಸ್.ಎಲ್.ಸಿ. ಪರೀಕ್ಷೆಯ ನೋಡಲ್ ಅಧಿಕಾರಿ ಅಯ್ಯಪ್ಪ ಉಪಸ್ಥಿತರಿದ್ದರು.

ಶಿಕ್ಷಕಿ ಬೀನಾ ನಿರೂಪಿಸಿದರು. ಸಂತ ಅನ್ನಮ್ಮ ಶಾಲೆಯ ವಿದ್ಯಾರ್ಥಿಗಳು ಪ್ರಾರ್ಥಿಸಿದರು. ಕಾರ್ಯಕ್ರಮದಲ್ಲಿ ನಗರದ ವಿವಿಧ ಶಾಲೆಯ ಹತ್ತನೇ ತರಗತಿ ವಿದ್ಯಾರ್ಥಿಗಳು, ಶಿಕ್ಷಕರು ಹಾಜರಿದ್ದರು.