ಕೂಡಿಗೆ, ಮಾ. ೧೯: ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಸೋಮವಾರಪೇಟೆ, ಮತ್ತು ಕುಶಾಲನಗರ ತಾಲೂಕು ಆರೋಗ್ಯ ಇಲಾಖೆಯ ವತಿಯಿಂದ ಆರೋಗ್ಯ ಇಲಾಖೆಯ ನೌಕರರ ಜಿಲ್ಲಾ ಮಟ್ಟದ ಕ್ರೀಡಾಕೂಟವು ಕೂಡಿಗೆ ಡಯಟ್ ಮೈದಾನದಲ್ಲಿ ನಡೆಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿ ಡಾ. ವೆಂಕಟೇಶ ನೆರವೇರಿಸಿದರು. ನಂತರ ಮಾತನಾಡುತ್ತಾ ಕ್ರೀಡೆಯು ಪರಸ್ಪರ ಪ್ರೀತಿ ವಿಶ್ವಾಸ ಹಾಗೂ ಸಹಬಾಳ್ವೆಯ ಭಾತೃತ್ವ ಬೆಳೆಸಲು ಸಹಕಾರಿಯಾಗಿದೆ. ಕಳೆದ ಎರಡು ವರ್ಷಗಳಿಂದಲೂ ಕೊರೊನಾ ಹಿನ್ನೆಲೆಯಲ್ಲಿ ಇಲಾಖೆ ನೌಕರರ ಯಾವುದೇ ಕ್ರೀಡಾ ಚಟುವಟಿಕೆ ನಡೆಯಲಿಲ್ಲ. ಈ ಸಾಲಿನಲ್ಲಿ ನೌಕರರ ಕ್ರೀಡಾಕೂಟ ನಡೆಯುತ್ತಿದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಡಾ. ಆನಂದ್ ತಾಲೂಕು ವೈದ್ಯಾಧಿಕಾರಿ ಡಾ. ಶ್ರೀನಿವಾಸ್ ಡಾ. ಚೇತನ ಡಾ. ಸುರ್ಪಣ್, ಡಾ. ಶಿವಕುಮಾರ್ ಡಾ, ಭರತ್, ತಾಲೂಕು ಆರೋಗ್ಯ ಶಿಕ್ಷಣಾಧಿಕಾರಿ ಶಾಂತಿ, ಸೇರಿದಂತೆ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ೨೦೦ಕ್ಕೂ ಹೆಚ್ಚು ಇಲಾಖೆಯ ನೌಕರರು ಭಾಗವಹಿಸಿದ್ದರು.

ಕ್ರೀಡಾಕೂಟವು ಎರಡೂ ದಿನಗಳು ನಡೆಯಲ್ಲಿದ್ದು, ಮೊದಲ ದಿನದಲ್ಲಿ ಕ್ರಿಕೆಟ್ ಪಂದ್ಯಾವಳಿಗೆ ಚಾಲನೆ ನೀಡಲಾಗಿ, ಹತ್ತು ತಂಡಗಳು ಭಾಗವಹಿಸಿದ್ದವು.