ಕುಶಾಲನಗರ, ಮಾ. ೧೯: ಕುಶಾಲನಗರ ಒಳಚರಂಡಿ ಯೋಜನೆಯ ಕಾಮಗಾರಿ ಅಂತಿಮ ಹಂತದಲ್ಲಿದ್ದು ಜೂನ್ ೧೫ರ ಒಳಗಾಗಿ ಲೋಕಾರ್ಪಣೆಗೊಳ್ಳಲಿದೆ ಎಂದು ಕರ್ನಾಟಕ ರಾಜ್ಯ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಕಾರ್ಯಪಾಲಕ ಅಭಿಯಂತರ ತಿಮ್ಮಪ್ಪ ತಿಳಿಸಿದ್ದಾರೆ.

ಮಂಡಳಿಯ ಅಧಿಕಾರಿಗಳು ಮತ್ತು ಪಟ್ಟಣ ಪಂಚಾಯಿತಿ ಜನಪ್ರತಿನಿಧಿಗಳು ಜಂಟಿಯಾಗಿ ಒಳಚರಂಡಿ ಕಾಮಗಾರಿಯ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು. ತ್ಯಾಜ್ಯ ಶುದ್ಧೀಕರಣ ಘಟಕದ ಸ್ಥಳದ ಸಮಸ್ಯೆ ಇದ್ದ ಹಿನ್ನೆಲೆಯಲ್ಲಿ ಕಾಮಗಾರಿ ವಿಳಂಬವಾಗಿದ್ದು, ಘಟಕದ ಕೆಲಸ ಸದ್ಯದಲ್ಲೇ ಪೂರ್ಣಗೊಳ್ಳಲಿದೆ. ನಂತರ ಪಟ್ಟಣ ವ್ಯಾಪ್ತಿಯಲ್ಲಿರುವ ಕಾಮಗಾರಿ ಪೂರ್ಣಗೊಳಿಸಿ ಯೋಜನೆಗೆ ಎಲ್ಲಾ ಜನಪ್ರತಿನಿಧಿಗಳು ಜಂಟಿಯಾಗಿ ಒಳಚರಂಡಿ ಕಾಮಗಾರಿಯ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು. ತ್ಯಾಜ್ಯ ಶುದ್ಧೀಕರಣ ಘಟಕದ ಸ್ಥಳದ ಸಮಸ್ಯೆ ಇದ್ದ ಹಿನ್ನೆಲೆಯಲ್ಲಿ ಕಾಮಗಾರಿ ವಿಳಂಬವಾಗಿದ್ದು, ಘಟಕದ ಕೆಲಸ ಸದ್ಯದಲ್ಲೇ ಪೂರ್ಣಗೊಳ್ಳಲಿದೆ. ನಂತರ ಪಟ್ಟಣ ವ್ಯಾಪ್ತಿಯಲ್ಲಿರುವ ಕಾಮಗಾರಿ ಪೂರ್ಣಗೊಳಿಸಿ ಯೋಜನೆಗೆ ಎಲ್ಲಾ ಕಾಮಗಾರಿ ಪರಿಶೀಲನೆ ನಡೆಸಿದರು. ಕುಶಾಲನಗರ ಅಯ್ಯಪ್ಪ ಸ್ವಾಮಿ ದೇವಾಲಯದ ಬಳಿ ನದಿ ತೀರದಲ್ಲಿ, ಮಾರುಕಟ್ಟೆ ಬಳಿ ಅಧಿಕಾರಿಗಳು ಭೇಟಿ ನೀಡಿ ಕಾಮಗಾರಿ ಪರಿಶೀಲನೆ ನಡೆಸಿದರು.

ಕಳೆದ ೩ ವರ್ಷಗಳ ಅವಧಿಯಲ್ಲಿ ಕಾವೇರಿ ನದಿ ಪ್ರವಾಹದಿಂದ ಹಾನಿಯಾಗುವ ಕಾಮಗಾರಿಗಳನ್ನು ಕೂಡಲೇ ಮರು ನಿರ್ವಹಣೆ ಮಾಡಲು ಕ್ರಮವಹಿಸುವುದಾಗಿ ಹೇಳಿದರು.

ಈ ಸಂದರ್ಭ ಮಂಡಳಿಯ ಸಹಾಯಕ ಕಾರ್ಯಪಾಲಕ ಅಭಿಯಂತರರಾದ ಅಜಯ್, ಆನಂದ್, ನಿರ್ದೇಶಕ ಆರ್.ಟಿ. ಸತೀಶ್, ಕುಶಾಲನಗರ ಪಟ್ಟಣ ಪಂಚಾಯಿತಿ ಅಧ್ಯಕ್ಷ ಜಯವರ್ಧನ್ ಸದಸ್ಯರುಗಳಾದ ಪ್ರಮೋದ್, ಡಿ.ಕೆ ತಿಮ್ಮಪ್ಪ, ಅಮೃತರಾಜ್, ಎಂ.ಬಿ ಸುರೇಶ್, ಆನಂದ್ ಕುಮಾರ್ ಮತ್ತಿತರರು ಇದ್ದರು.