ಮಡಿಕೇರಿ, ಮಾ. ೧೮: ನೆಹರು ಯುವ ಕೇಂದ್ರ, ಯುವಜನ ವ್ಯವಹಾರ ಕ್ರೀಡಾ ಸಚಿವಾಲಯ, ಜಿಲ್ಲಾ ಯುವ ಒಕ್ಕೂಟ ಮಡಿಕೇರಿ, ತಾಲೂಕು ಯುವ ಒಕ್ಕೂಟ ಹಾಗೂ ಮೂರ್ನಾಡು ಜಾವ ಕಮ್ಯುನಿಕೇಷನ್ ಸೆಂಟರ್ ಇವರ ವತಿಯಿಂದ ಕಾವೇರಿ ಯುವಕ ಸಂಘದ ಆಶ್ರಯದಲ್ಲಿ ವಿಶ್ವ ಸಾಮಾಜಿಕ ನ್ಯಾಯ ದಿನವನ್ನು ಆಚರಣೆ ಮಾಡಲಾಯಿತು.
ಕಾರ್ಯಕ್ರಮದ ಉದ್ಘಾಟನೆಯನ್ನು ಕಗ್ಗೋಡ್ಲು ಶ್ರೀ ಭಗವತಿ ದೇವಾಲಯದ ಅಧ್ಯಕ್ಷ ದಂಬೆಕೋಡಿ ಸುಭಾಷ್ ಉದ್ಘಾಟಿಸಿದರು. ಅಧ್ಯಕ್ಷತೆಯನ್ನು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸವಿತಾ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಗ್ರಾಮ ಖಜಾಂಚಿ ಕೆ.ಎಂ. ಮೋಹನ್, ಪಂಚಾಯಿತಿ ಸದಸ್ಯರಾದ ಲೋಕೇಶ್ ಹಾಗೂ ವಿಜಯಲಕ್ಷಿö್ಮ, ಜಾವ ಕಮ್ಯುನಿಕೇಷನ್ ವ್ಯವಸ್ಥಾಪಕಿ ಭವ್ಯ ಇದ್ದರು. ಕಾರ್ಯಕ್ರಮದಲ್ಲಿ ದಿನದ ಮಹತ್ವದ ಬಗ್ಗೆ ಯುವ ಒಕ್ಕೂಟದ ಜಿಲ್ಲಾಧ್ಯಕ್ಷ ಪಿ.ಪಿ. ಸುಕುಮಾರ್ ಹಾಗೂ ಕಾರ್ಮಿಕ ನಿರೀಕ್ಷಕ ಯತ್ನಟಿ ಮಾತನಾಡಿದರು. ಒಕ್ಕೂಟದ ಖಜಾಂಚಿ ಮೋಹನ್ ಸ್ವಾಗತಿಸಿ, ನಿರೂಪಿಸಿ, ವಂದಿಸಿದರು.