ಮಡಿಕೇರಿ, ಮಾ. ೧೮: ಅಳಿವಿನ ಅಂಚಿನ ನಕ್ಷತ್ರ ಆಮೆಯನ್ನು ಮಾರಾಟ ಮಾಡಲು ಯತ್ನಿಸಿದ ಈರ್ವರನ್ನು ಸಿಐಡಿ ಪೊಲೀಸ್ ಅರಣ್ಯ ಘಟಕ ಬಂಧಿಸಿದೆ.

ತಾ. ೧೭ ರಂದು ಕುಶಾಲನಗರ ಗುಡ್ಡೆಹೊಸೂರು ಸಿದ್ದಾಪುರ ರಸ್ತೆಯ ಬದಿಯಲ್ಲಿ ಟಿ.ವಿ. ಕೃಷ್ಣ ಮತ್ತು ದರ್ಶನ್ ಎಂಬ ಆರೋಪಿಗಳು ಅಕ್ರಮವಾಗಿ ಒಂದು ಜೀವಂತ ನಕ್ಷತ್ರ ಆಮೆಯನ್ನು ಮಾರಾಟ ಮಾಡಲು ಪ್ರಯತ್ನಿಸುವ ಸಂದರ್ಭ ದಾಳಿ ನಡೆಸಿ ಆರೋಪಿಯನ್ನು ವಶಕ್ಕೆ ಪಡೆದುಕೊಂಡು ಬಂಧಿಸಲಾಗಿದೆ. ಸಿಐಡಿ ಪೊಲೀಸ್ ಅರಣ್ಯ ಘಟಕದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಕೆ.ವಿ. ಶರತ್‌ಚಂದ್ರ ನಿರ್ದೇಶನ, ಮಡಿಕೇರಿ ಸಿಐಡಿ ಪೊಲೀಸ್ ಅರಣ್ಯ ಘಟಕದ ಪೊಲೀಸ್ ಅಧೀಕ್ಷಕ ಚಂದ್ರಕಾAತ್ ಮಾರ್ಗದರ್ಶನದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಮಡಿಕೇರಿ ಅರಣ್ಯ ಸಂಚಾರಿ ದಳದ ಪಿಎಸ್‌ಐ ಸಿ.ಯು. ಸವಿ, ಹೆಡ್‌ಕಾನ್ಸ್ಟೇಬಲ್‌ಗಳಾದ ಶೇಖರ್, ರಾಜೇಶ್, ರಾಘವೇಂದ್ರ, ಯೋಗೇಶ್ ಮತ್ತು ಕಾನ್ಸ್ಟೇಬಲ್‌ಗಳಾದ ಸ್ವಾಮಿ ಮತ್ತು ಮಂಜುನಾಥ ಇದ್ದರು.