ಮಡಿಕೇರಿ, ಮಾ. ೧೯: ಅಳಿವಿನ ಅಂಚಿನ ಜೀವಂತ ನಕ್ಷತ್ರ ಆಮೆಯನ್ನು ಮಾರಾಟ ಮಾಡಲು ಯತ್ನಿಸಿದ ಇಬ್ಬರು ಆರೋಪಿಗಳನ್ನು ಸಿಐಡಿ ಪೊಲೀಸ್ ಅರಣ್ಯ ಘಟಕ ಬಂಧಿಸಿದೆ.

ತಾ. ೧೯ ರಂದು ಮಡಿಕೇರಿ-ಮೂರ್ನಾಡು, ವೀರಾಜಪೇಟೆ ರಾಜ್ಯ ಹೆದ್ದಾರಿಯ ಶಕ್ತಿನಗರದ ಬಳಿ ಇರುವ ಮೇಕೇರಿ ಬಸ್ ತಂಗುದಾಣದ ಬಳಿ ಜಿಯಾವುಲ್ಲಾ ಖಾನ್ ಮತ್ತು ಸನಾವುಲ್ಲಾ ಖಾನ್

(ಮೊದಲ ಪುಟದಿಂದ) ಎಂಬ ವ್ಯಕ್ತಿಗಳು ಅಕ್ರಮವಾಗಿ ಒಂದು ಜೀವಂತ ನಕ್ಷತ್ರ ಆಮೆಯನ್ನು ವಶದಲ್ಲಿಟ್ಟುಕೊಂಡು ಮಾರಾಟ ಮಾಡಲು ಪ್ರಯತ್ನಿಸುತ್ತಿರುವಾಗ ಪತ್ತೆ ಮಾಡಿ ಆರೋಪಿಯನ್ನು ವಶಕ್ಕೆ ಪಡೆದುಕೊಂಡು ಬಂಧಿಸಲಾಗಿದೆ.

ಸಿಐಡಿ ಪೊಲೀಸ್ ಅರಣ್ಯ ಘಟಕದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಕೆ.ವಿ. ಶರತ್‌ಚಂದ್ರ ನಿರ್ದೇಶನ, ಮಡಿಕೇರಿ ಸಿಐಡಿ ಪೊಲೀಸ್ ಅರಣ್ಯ ಘಟಕದ ಪೊಲೀಸ್ ಅಧೀಕ್ಷಕ ಚಂದ್ರಕಾAತ್ ಮಾರ್ಗದರ್ಶನದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಮಡಿಕೇರಿ ಅರಣ್ಯ ಸಂಚಾರಿ ದಳದ ಪಿಎಸ್‌ಐ ಸಿ.ಯು. ಸವಿ, ಹೆಡ್‌ಕಾನ್ಸ್ಟೇಬಲ್‌ಗಳಾದ ಶೇಖರ್, ರಾಜೇಶ್, ರಾಘವೇಂದ್ರ, ಯೋಗೇಶ್, ಮೋಹನ ಮತ್ತು ಕಾನ್ಸ್ಟೇಬಲ್‌ಗಳಾದ ಸ್ವಾಮಿ ಮತ್ತು ಮಂಜುನಾಥ ಪಾಲ್ಗೊಂಡಿದ್ದರು.