ಮಡಿಕೇರಿ, ಮಾ. ೧೯ : ಕೊಡಗು ಜಿಲ್ಲೆಯಲ್ಲಿ ತಾ. ೨೦ ರಂದು ನಡೆಯುವ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘಗಳ ೬ನೇ ತರಗತಿ ಸಾಮಾನ್ಯ ಪ್ರವೇಶ ಪರೀಕ್ಷೆಯನ್ನು ಯಾವುದೇ ಅವ್ಯವಹಾರಗಳಿಲ್ಲದಂತೆ ಸುಗಮವಾಗಿ ನಡೆಸುವ ಸಲುವಾಗಿ ದಂಡ ಪ್ರಕ್ರಿಯಾ ಸಂಹಿತೆ ೧೯೭೩ ರ ಕಲಂ ೧೪೪ ರಡಿ ದತ್ತವಾದ ಅಧಿಕಾರದಂತೆ ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜು, ವೀರಾಜಪೇಟೆ ಸರ್ಕಾರಿ ಪದವಿ ಪೂರ್ವ ಕಾಲೇಜು ಮತ್ತು ಸೋಮವಾರಪೇಟೆ ಸರ್ಕಾರಿ ಪದವಿ ಪೂರ್ವ ಕಾಲೇಜು ಪರೀಕ್ಷಾ ಕೇಂದ್ರಗಳ ಸುತ್ತಲಿನ ೨೦೦ ಮೀಟರ್ ವ್ಯಾಪ್ತಿಯಲ್ಲಿನ ಪ್ರದೇಶವನ್ನು ನಿರ್ಬಂಧಿತ ಸ್ಥಳ ಎಂದು ಘೋಷಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಡಾ.ಬಿ.ಸಿ.ಸತೀಶ ಅವರು ಆದೇಶ ಹೊರಡಿಸಿದ್ದಾರೆ.
ಈ ಅವಧಿಯಲ್ಲಿ ನಿಷೇಧಿತ ವಲಯದಲ್ಲಿ ಯವುದೇ ರೀತಿಯಲ್ಲಿ ಪರೀಕ್ಷೆಯಲ್ಲಿ ನಕಲು ಮಾಡಲು ಸಹಾಯ ಮಾಡುವುದು, ಚೀಟಿ ಅಥವಾ ಇನ್ನಿತರ ರೀತಿಯಲ್ಲಿ ಉತ್ತರಗಳನ್ನು ಬರೆದು ಹಂಚುವುದು, ಇನ್ನಾವುದೇ ವಸ್ತುಗಳನ್ನು ಹಂಚುವುದು, ರವಾನಿಸುವುದು ಮತ್ತಿತರ ಚಟುವಟಿಕೆಗಳನ್ನು ಸಂಪೂರ್ಣ ನಿಷೇಧಿಸಿದೆ.
ಪರೀಕ್ಷಾ ದಿನದಂದು ಪರೀಕ್ಷಾ ಕೇಂದ್ರಗಳ ೨೦೦ ಮೀಟರ್ ವ್ಯಾಪ್ತಿಯಲ್ಲಿರುವ ಕಂಪ್ಯೂಟರ್ ಮತ್ತು ಜೆರಾಕ್ಸ್ ಅಂಗಡಿಗಳು ಕಾರ್ಯ ನಿರ್ವಹಿಸುವುದು ಮತ್ತು ಈ ವ್ಯಾಪ್ತಿಯಲ್ಲಿ ಧ್ವನಿವರ್ಧಕ ಬಳಕೆ ನಿಷೇಧಿಸಿದೆ. ಪರೀಕ್ಷೆ ಸಂಬAಧ ಸರ್ಕಾರ ಹೊರಡಿಸಿರುವ ಕೋವಿಡ್-೧೯ ಸಮುಚಿತ ಮಾರ್ಗಸೂಚಿ ಪಾಲಿಸುವುದು, ಈ ಆದೇಶವು ಬೆಳಗ್ಗೆ ೯.೩೦ ಗಂಟೆಯಿAದ ಸಂಜೆ ೫ ಗಂಟೆಯವರೆಗೆ ಜಾರಿಯಲ್ಲಿರುತ್ತದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಡಾ.ಬಿ.ಸಿ.ಸತೀಶ ಅವರು ತಿಳಿಸಿದ್ದಾರೆ.