ಭಾಗಮಂಡಲ, ಮಾ. ೧೯ : ಭಾಗಮಂಡಲ ಗೌಡ ಸಮಾಜದ ನೂತನ ಕಟ್ಟಡಕ್ಕೆ ಶಂಕುಸ್ಥಾಪನೆ ಗ್ರಾಮ ಪಂಚಾಯಿತಿ ಕಟ್ಟಡಕ್ಕೆ ಭೂಮಿಪೂಜೆ, ತಲಕಾವೇರಿಯಲ್ಲಿ ಹಲವು ಅಂಗಡಿ ಮಳಿಗೆಗಳ ಉದ್ಘಾಟನೆ, ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ, ಭಾಗಮಂಡಲದಲ್ಲಿ ಮಣ್ಣು ಪರೀಕ್ಷೆ ಕೇಂದ್ರಕ್ಕೆ ಚಾಲನೆ ಸೇರಿದಂತೆ ವಿವಿಧ ಕಾಮಗಾರಿಗಳಿಗೆ ಜನಪ್ರತಿನಿಧಿಗಳು ಚಾಲನೆ ನೀಡಿದರು. ಬಳಿಕ ಭಾಗಮಂಡಲ ಕೃಷಿ ಪತ್ತಿನ ಸಹಕಾರ ಸಂಘದ ಸಭಾಂಗಣದಲ್ಲಿ ಸಭಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಸಂಸದ ಪ್ರತಾಪ್‌ಸಿಂಹ ಭಾಗಮಂಡಲದ ಸಮಾಜಕ್ಕೆ ೨.೨೫ ಕೋಟಿ ರೂಪಾಯಿ ವೆಚ್ಚದ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿ ಸಹಕಾರ ಸಂಘದಲ್ಲಿ ಸಂಜೀವಿನಿ ಒಕ್ಕೂಟದ ವತಿಯಿಂದ ಏರ್ಪಡಿಸಲಾಗಿದ್ದ ಸಂತೆ ಮೇಳಕ್ಕೆ ಚಾಲನೆ ನೀಡಿ ಮಾತನಾಡಿದ ಅವರು ಕಳೆದ ಎರಡು ವರ್ಷಗಳಿಂದ ಅಪಾರ ಕಷ್ಟ ನಷ್ಟ

(ಮೊದಲ ಪುಟದಿಂದ) ಅನುಭವಿಸಿದ್ದು ಸರ್ಕಾರ ಜನರ ಜೀವ ಉಳಿಸುವಲ್ಲಿ ಮಹತ್ತರ ಕೆಲಸವನ್ನು ಇದುವರೆಗೆ ಮಾಡಿದೆ. ಇನ್ನು ಮುಂದೆ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡುವ ಕೆಲಸ ಆರಂಭವಾಗಲಿದೆ ಎಂದರು.

ಗ್ರಾಮ ಪಂಚಾಯಿತಿಗಳಿಗೆ ನೇರವಾಗಿ ೧೪-೧೫ ರ ಹಣಕಾಸು ಯೋಜನೆಯಡಿ ಸಾಕಷ್ಟು ಹಣ ಬರುತ್ತಿದ್ದು ಅಭಿವೃದ್ಧಿ ಕಾರ್ಯಗಳು ಆಗುತ್ತಿವೆ. ಅಲ್ಲದೆ ನರೇಗಾ ಯೋಜನೆಯಲ್ಲಿ ಸ್ತಿçÃಶಕ್ತಿ ಭವನ ನಿರ್ಮಾಣಕ್ಕೆ ಅವಕಾಶ ಇದೆ. ಸಂತೆ ಮೇಳ ಕಟ್ಟಡಕ್ಕೆ ಅವಕಾಶಗಳಿದ್ದು ಇದರನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದರು.

ಜಾತ್ರೆ ವಿಶೇಷ ಅನುದಾನ ರೂಪಾಯಿ ೭ ಲಕ್ಷ ಸೇರಿದಂತೆ ತಲಕಾವೇರಿಯಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಒಟ್ಟು ೨೦ ಲಕ್ಷ ರೂಪಾಯಿ ಮಂಜೂರಾಗಿದ್ದು, ವಿಧಾನಪರಿಷತ್ ಸದಸ್ಯ ಮಂಡೇಪAಡ ಸುಜಾ ಕುಶಾಲಪ್ಪ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಚಾಲನೆ ನೀಡಿ ಬಳಿಕ ಮಾತನಾಡಿ, ಸರ್ಕಾರ ಇಂದು ಗ್ರಾಮೀಣ ಮಟ್ಟದಲ್ಲಿ ಉದ್ಯೋಗ ನೀಡಲು ಪ್ರೋತ್ಸಾಹ ನೀಡುತ್ತಿದೆ ರಾಸಾಯನಿಕ ಗೊಬ್ಬರಗಳ ಬಳಕೆಯಿಂದ ಮಣ್ಣಿನ ಫಲವತ್ತತೆ ಕಡಿಮೆ ಆಗಿದೆ. ಆದ್ದರಿಂದ ಸಾವಯವ ಗೊಬ್ಬರದ ಬಳಕೆಯಿಂದ ಕೃಷಿ ಚಟುವಟಿಕೆ ಕೈಗೊಳ್ಳಬೇಕು ಎಂದು ಕರೆ ನೀಡಿದರು.

ಭಾಗಮಂಡಲ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ನೂತನವಾಗಿ ತೆರೆಯಲಾದ ಮಣ್ಣು ಪರೀಕ್ಷಾ ಕೇಂದ್ರಕ್ಕೆ ಚಾಲನೆ ನೀಡಿದ ಬಳಿಕ ಏರ್ಪಡಿಸಲಾಗಿದ್ದ ಕಾರ್ಯಕ್ರಮದಲ್ಲಿ ಸಂಘದಲ್ಲಿ ಕಳೆದ ೩೫ ವರ್ಷಗಳಿಂದ ಸೇವೆ ಸಲ್ಲಿಸಿ ನಿವೃತ್ತಿ ಹೊಂದುತ್ತಿರುವ ಹೊಸಗದ್ದೆ ಲಲಿತಾ ಭಾಸ್ಕರ್ ಅವರನ್ನು ಶಾಸಕ ಕೆ.ಜಿ. ಬೋಪಯ್ಯ ಶಾಲು ಹೊದಿಸಿ ಸನ್ಮಾನಿಸಿ ಬಳಿಕ ಮಾತನಾಡಿ, ರೈತರ ಸ್ವಾಭಿಮಾನಿ, ಸ್ವಾವಲಂಬಿ ಜೀವನ ನಡೆಸಬೇಕು. ಅದಕ್ಕಾಗಿ ಮಣ್ಣಿನ ಪರೀಕ್ಷಾ ಕೇಂದ್ರಗಳನ್ನು ಜಿಲ್ಲೆಯ ಎಲ್ಲೆಡೆ ತೆರೆಯಲಾಗುತ್ತಿದೆ. ಉತ್ತಮ ಇಳುವರಿ ಪಡೆಯಬೇಕು ಆರೋಗ್ಯದ ದೃಷ್ಟಿಯಿಂದ ದೇಸಿಯ ವಸ್ತುಗಳ ಬಳಕೆ ಆಗಬೇಕು ಎಂದರು.

ಈ ಸಂದರ್ಭ ರಾಜ್ಯ ಪಶ್ಚಿಮಘಟ್ಟ ಕಾರ್ಯಪಡೆ ಅಧ್ಯಕ್ಷ ರವಿಕುಶಾಲಪ್ಪ ಸಂಸದ ಪ್ರತಾಪ್‌ಸಿಂಹ, ವಿಧಾನಪರಿಷತ್ ಸದಸ್ಯ ಸುಜಾ ಕುಶಾಲಪ್ಪ ಅವರನ್ನು ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಸತೀಶ್ ಕುಮಾರ್ ಸನ್ಮಾನಿಸಿದರು. ಕೃಷಿ ಪತ್ತಿನ ಸಹಕಾರ ಸಂಘದ ಸಭಾಂಗಣದಲ್ಲಿ ೬ ಗ್ರಾಮಗಳ ಸಂಜೀವಿನಿ ಒಕ್ಕೂಟದ ಮಹಿಳೆಯರಿಂದ ವಸ್ತುಪ್ರದರ್ಶನ ಹಾಗೂ ಮಾರಾಟ ಕಾರ್ಯಕ್ರಮದಲ್ಲಿ ಶಾಸಕರು ಭಾಗಿಯಾಗಿ ಮೆಚ್ಚುಗೆ ವ್ಯಕ್ತಪಡಿಸಿ ಮಾರಾಟ ವಸ್ತುಗಳನ್ನು ಖರೀದಿಸಿದರು.

ಕಾರ್ಯಕ್ರಮಕ್ಕೂ ಮೊದಲು ಅಯ್ಯಂಗೇರಿಯ ಗ್ರಾಮ ಪಂಚಾಯಿತಿಯ ನೂತನ ಕಟ್ಟಡಕ್ಕೆ ಭೂಮಿ ಪೂಜೆಯನ್ನು ನೆರವೇರಿಸಲಾಯಿತು. ಈ ಸಂದರ್ಭ ವಿಧಾನಪರಿಷತ್ ಸದಸ್ಯೆ ಶಾಂತೆಯAಡ ವೀಣಾ ಅಚ್ಚಯ್ಯ, ಭಾಗಮಂಡಲ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಪಮಿತಾ, ಅಯ್ಯಂಗೇರಿ ಗ್ರಾಮ ಪಂಚಾಯಿತಿ ಅಧ್ಯಕ್ಷ ರಂಜಿತ್, ಪಶ್ಚಿಮಘಟ್ಟ ಕಾರ್ಯಪಡೆ ಅಧ್ಯಕ್ಷ ರವಿಕುಶಾಲಪ್ಪ ಗೌಡ ಸಮಾಜದ ಅಧ್ಯಕ್ಷ ಕುದುಪಜೆ ಪಳಂಗಪ್ಪ, ಬೆಪ್ಪುರನ ಮೇದಪ್ಪ, ಮೂಡಾ ಅಧ್ಯಕ್ಷ ರಮೇಶ್ ಹೊಳ್ಳ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ನಂದ, ಗ್ರಾಮ ಪಂಚಾಯಿತಿ ಸದಸ್ಯರು, ಪಕ್ಷದ ಕಾರ್ಯಕರ್ತರು, ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕರು ಪಾಲ್ಗೊಂಡಿದ್ದರು.

-ಸುನಿಲ್ ಕುಯ್ಯಮುಡಿ