ಮಡಿಕೇರಿ, ಮಾ. ೧೯: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ನೆಹರು ಯುವ ಕೇಂದ್ರ, ಮಡಿಕೇರಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜಿಲ್ಲಾ ಯುವ ಒಕ್ಕೂಟ ಮಡಿಕೇರಿ, ವೀರಾಜಪೇಟೆ, ಸೋಮವಾರಪೇಟೆ ತಾಲೂಕು ಯುವ ಒಕ್ಕೂಟ ಹಾಗೂ ಶ್ರೀ ಪ್ರಸನ್ನ ಗಣಪತಿ ಯುವಕ ಸಂಘ, ಹೊದ್ದೂರು ಇದರ ಸಂಯುಕ್ತ ಆಶ್ರಯದಲ್ಲಿ ನೆರೆ - ಹೊರೆ ಯುವ ಸಂಸತ್ತು ಕಾರ್ಯಕ್ರಮ ನಡೆಯಿತು.
ಮೂರ್ನಾಡು ವಿದ್ಯಾಸಂಸ್ಥೆಯ ಕಾವೇರಿ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ, ವಿದ್ಯಾಸಂಸ್ಥೆಯ ಕಾರ್ಯದರ್ಶಿ ಪೆಮ್ಮುಡಿಯಂಡ ವೇಣು ಅಪ್ಪಣ್ಣ ಅವರು ಯುವ ಶಕ್ತಿಯೇ ದೇಶದ ಶಕ್ತಿ. ಯುವಕರನ್ನು ಸಬಲೀಕರಣಗೊಳಿಸಿ, ಬಲಿಷ್ಠ ರಾಷ್ಟç ನಿರ್ಮಾಣ ಮಾಡುವಲ್ಲಿ ಎಲ್ಲರೂ ಶ್ರಮ ವಹಿಸಬೇಕು ಎಂದು ಕರೆ ನೀಡಿದರು.
ಸ್ಥಳೀಯ ಪ್ರಥಮ ದರ್ಜೆ ಕಾಲೇಜಿನ ಉಪನ್ಯಾಸಕಿ ಕಲ್ಪನಾ ಸಾಮ್ರಾಟ್, ಯುವ ಜನತೆಯ ಮೇಲೆ ಸ್ವಾಮಿ ವಿವೇಕಾನಂದರ ಪ್ರಭಾವದ ಬಗ್ಗೆ ಉಪನ್ಯಾಸ ನೀಡಿದರು. ಮತ್ತೋರ್ವ ಅತಿಥಿಗಳಾಗಿ ಸ್ಥಳೀಯ ಪ್ರಥಮ ದರ್ಜೆ ಕಾಲೇಜಿನ ಉಪನ್ಯಾಸಕರಾದ ಕಿಗ್ಗಾಲು ಜಿ. ಹರೀಶ್‌ರವರು, ಆತ್ಮನಿರ್ಭರ ಭಾರತ ಕೌಶಲ್ಯ ಹಾಗೂ ಯುವ ಜನತೆ ಎಂಬ ವಿಷಯದಲ್ಲಿ ಉಪನ್ಯಾಸ ನೀಡಿದರು.
ಮೂರ್ನಾಡು ವಿದ್ಯಾಸಂಸ್ಥೆಯ ಪ್ರೌಢಶಾಲಾ ವಿಭಾಗದ ಹಿರಿಯ ಶಿಕ್ಷಕರಾದ ಪ್ರಶಾಂತ್ ಎಸ್.ಡಿ., ಪದವಿ ಪೂರ್ವ ಕಾಲೇಜಿನ ಉಪನ್ಯಾಸಕರಾದ ಪಿ.ಕೆ. ರವಿಶಂಕರ್, ಪ್ರಥಮ ದರ್ಜೆ ಕಾಲೇಜು ಪ್ರಾಂಶುಪಾಲರಾದ ಪ್ರೊ. ಪಟ್ಟಡ ಪೂವಣ್ಣ, ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಮುಂಡAಡ ವಿಜಿ ವಿಜಯಲಕ್ಷಿö್ಮ ಮಾತನಾಡಿದರು. ನೆಹರು ಯುವ ಕೇಂದ್ರ ಕಚೇರಿ ಸಹಾಯಕಿ ದೀಪ್ತಿ ಹಾಗೂ ರಂಜಿತ ಉಪಸ್ಥಿತರಿದ್ದರು.
ಅಧ್ಯಕ್ಷತೆಯನ್ನು ಗ್ರಾ.ಪಂ. ಅಧ್ಯಕ್ಷೆ ಸುಜಾತ ವಹಿಸಿದ್ದರು. ಅನನ್ಯ ಪ್ರಾರ್ಥಿಸಿ, ಜಿಲ್ಲಾ ಯುವ ಒಕ್ಕೂಟದ ಅಧ್ಯಕ್ಷ ಪಿ.ಪಿ. ಸುಕುಮಾರ ಸ್ವಾಗತಿಸಿ, ತಾಲೂಕು ಯುವ ಒಕ್ಕೂಟದ ಮಾಜಿ ಅಧ್ಯಕ್ಷ ಕೂಡಂಡ ಸಾಬ ಸುಬ್ರಮಣಿ ಕಾರ್ಯಕ್ರಮ ನಿರೂಪಿಸಿ, ಜಿಲ್ಲಾ ಯುವ ಒಕ್ಕೂಟದ ಖಜಾಂಚಿ ಕುಂಜಿಲನ ಮೋಹನ್ ಮೋಟಯ್ಯ ವಂದಿಸಿದರು.