ಮಡಿಕೇರಿ, ಮಾ. ೧೯ : ಕೊಡಗು ಜಿಲ್ಲೆಗೆ ವಾಹನ ಸಂಚಾರ ಸುಗಮ ಗೊಳಿಸುವ ನಿಟ್ಟಿನಲ್ಲಿ ಮೈಸೂರಿನಿಂದ ಕುಶಾಲನಗರದವರೆಗೆ ಚತುಷ್ಪಥ ರಸ್ತೆ ನಿರ್ಮಾಣ ಮಾಡಲಾಗುವದು; ಆದರೆ ಕುಶಾಲನಗರದಿಂದ ಸಂಪಾಜೆವರೆಗೆ ಚತುಷ್ಪಥ ಮಾಡುವದಿಲ್ಲ, ದ್ವಿಪಥ ರಸ್ತೆಯನ್ನೇ ಅಭಿವೃದ್ಧಿಪಡಿಸ ಲಾಗುವದು. ಪರಿಸರಕ್ಕೆ ಯಾವದೇ ಹಾನಿಯಾಗುವದಿಲ್ಲ ಎಂದು ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ.

ಇಲ್ಲಿನ ಸುದರ್ಶನ ಅತಿಥಿ ಗೃಹದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಕೊಡಗು ಜಿಲ್ಲೆಯಿಂದ ಬೆಂಗಳೂರು ಸೇರಿದಂತೆ ಬೇರೆ ಬೇರೆ ಕಡೆಗಳಿಗೆ ವಿದ್ಯಾಭ್ಯಾಸ, ಉದ್ಯೋಗ, ಇನ್ನಿತರ ಚಟುವಟಿಕೆಗಳಿಗಾಗಿ ಹೋಗಿ ಬರುವವರಿದ್ದಾರೆ. ಅವರುಗಳು ಸೇರಿದಂತೆ ಎಲ್ಲರಿಗೂ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ರೂ.೪ಸಾವಿರ ಕೋಟಿ ವೆಚ್ಚದಲ್ಲಿ ಚತುಷ್ಪಥ ರಸ್ತೆ ನಿರ್ಮಾಣ ಮಾಡಲಾಗುತ್ತದೆ ಎಂದು ಹೇಳಿದರು. ಪಶ್ಚ್ಚಿಮ ವಾಹಿನಿಯಿಂದ ಮೈಸೂರು ಪಟ್ಟಣ ಸಂಪರ್ಕಿಸದೆ ನೇರವಾಗಿ ಕುಶಾಲನಗರಕ್ಕೆ ರಸ್ತೆ ನಿರ್ಮಾಣವಾಗಲಿದೆ. ಈಗಾಗಲೇ ಟೆಂಡರ್ ಆಗಿದ್ದು, ಜೂನ್ ಅಥವಾ ಜುಲೈನಲ್ಲಿ ಪ್ರಾಥಮಿಕ ಹಂತದ ಕೆಲಸ ಪ್ರಾರಂಭವಾಗಲಿದೆ. ಸುಂಟಿಕೊಪ್ಪ ಮತ್ತು ಮಡಿಕೇರಿಯಲ್ಲಿ ಬೈಪಾಸ್ ರಸ್ತೆ ನಿರ್ಮಾಣ ಮಾಡಲಾಗುವದು, ಮಡಿಕೇರಿಯಲ್ಲಿ ಅರಣ್ಯ ಭವನ ಬಳಿಯಿಂದ ಮಂಗಳೂರು ರಸ್ತೆಗೆ ಸಂಪರ್ಕ ಕಲ್ಪಿಸಲು ಪರ್ಯಾಯ ರಸ್ತೆ ಅಥವಾ ಮೇಲ್ಸೇತುವೆ ನಿರ್ಮಾಣ ಮಾಡುವ ಬಗ್ಗೆ ಚರ್ಚೆ ಮಾಡಲಾಗಿದೆ ಎಂದು ತಿಳಿಸಿದರು.

ಪರಿಸರಕ್ಕೆ ಹಾನಿಯಿಲ್ಲ

ಕುಶಾಲನಗರದಿಂದ ಸಂಪಾಜೆ ವರೆಗೆ ಚತುಷ್ಪಥ ರಸ್ತೆ ಮಾಡುವದಿಲ್ಲ; ದ್ವಿಪಥ ರಸ್ತೆಯನ್ನೇ ಅಭಿವೃದ್ಧಿಪಡಿ¸ Àಲಾಗುವದು. ಹಾಗಾಗಿ ಜಿಲ್ಲೆಯಲ್ಲಿ ಪರಿಸರಕ್ಕೆ ಹಾನಿಯಾಗುವದಿಲ್ಲ, ಈ ಬಗ್ಗೆ ತಪ್ಪು ಸಂದೇಶ ನೀಡಬಾರದೆಂದು ಮನವಿ ಮಾಡಿದರು. ಈಗಾಗಲೇ ಮಡಿಕೇರಿ-ಸಂಪಾಜೆ ರಸ್ತೆ ಬದಿ ಭೂಕುಸಿತ ಉಂಟಾದ ಕಡೆಗಳಲ್ಲಿ ತಡೆಗೋಡೆಗಳನ್ನು ನಿರ್ಮಿಸಲಾಗಿದೆ. ಒಟ್ಟು ೧೮ ಕಡೆಗಳಲ್ಲಿ ತಡೆಗೋಡೆ ನಿರ್ಮಾಣ ಮಾಡಲಾಗಿದ್ದು ಒಂದಿಷ್ಟು ರಸ್ತೆ ಅಗಲೀಕರಣವಾಗಿದೆ.

ಇನ್ನೂ ಕೂಡ ರೂ.೯೮ ಕೋಟಿ ವೆಚ್ಚದಲ್ಲಿ ಎರಡು ಸೇತುವೆ

ಹಾಗೂ ೨೨ ತಡೆಗೋಡೆಗಳನ್ನು ನಿರ್ಮಾಣ ಮಾಡಲಾಗುವದು ಎಂದು ತಿಳಿಸಿದರು.